LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chikmagalur

ಶೋಭಾ ವಿರುದ್ಧ ಪೋಸ್ಟರ್: ನಾಲ್ವರ ವಿರುದ್ಧ ಎಫ್‍ಐಆರ್

ಚಿಕ್ಕಮಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವರ್ಸಸ್ ಮಾಜಿ ಶಾಸಕ ಸಿ.ಟಿ ರವಿ ನಡುವೆ ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದ ಟಿಕೆಟ್ ಫೈಟ್ ಜೋರಾಗಿದೆ. ಗೋ ಬ್ಯಾಕ್, ಶೋಭಾ ಹಟಾವೋ ಎಂದು ಸಿ,ಟಿ.ರವಿ ಬೆಂಬಲಿಗರು ಅಭಿಯಾನ ನಡೆಸಿದ್ದಾರೆ. ಸದ್ಯ ಗೋ ಬ್ಯಾಕ್ ಶೋಭಾ ಕರಂದ್ಲಾಜೆ ಅಭಿಯಾನ ವಿಚಾರ ಸಂಬಂಧ ಪೋಸ್ಟರ್ ಅಂಟಿಸಿದ್ದ ನಾಲ್ವರು ಯುವಕರ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ಕಳೆದ ಜನವರಿ 01ರಿಂದ ಚಿಕ್ಕಮಗಳೂರು ಉಡುಪಿ ಲೋಕಸಭಾ ಕ್ಷೇತ್ರದ ಸಂಸದೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ದಂಗಲ್ ಆರಂಭ ಮಾಡಿದ್ದಾರೆ. ಶೋಭಾ ವಿರುದ್ಧ ಗೋ ಬ್ಯಾಕ್ ಶೋಭಾ ,ಶೋಭಾ ಹಠಾವೋ ಬಿಜೆಪಿ ಬಚಾವೋ ಅಭಿಯಾನ ನಡೆಯುತ್ತಿದೆ. ಟಿಕೆಟ್ ನೀಡದಂತೆ ಕ್ಯಾಂಪೇನ್ ನಡೆಸಲಾಗಿದೆ.

ಇದು ಬಿಜೆಪಿ ಹೈ ಕಮಾಂಡ್ ಕೋಪಕ್ಕೂ ಕಾರಣವಾಗಿದೆ. ಇದೆಲ್ಲದರ ನಡುವೆ ಗೋ ಬ್ಯಾಕ್ ಶೋಭಾ ಕರಂದ್ಲಾಜೆ ಅಭಿಯಾನ ವಿಚಾರ ಸಂಬಂಧ ಪೋಸ್ಟರ್ ಅಂಟಿಸಿದ್ದ ನಾಲ್ವರು ಯುವಕರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಬಸವನಹಳ್ಳಿ ಪೊಲೀಸರಿಂದ ಪೋಸ್ಟರ್ ಸಂಬಂಧ ತನಿಖೆ ನಡೆಸುತ್ತಿದ್ದಾರೆ.

ಶೋಭಕ್ಕ ಎಲ್ಲಿದ್ದೀರ?, ಶೋಭಕ್ಕ ಕಾಣೆ ಎಂದು ತರೀಕೆರೆಯಿಂದ ಚಿಕ್ಕಮಗಳೂರುವರೆಗೂ ರಾತ್ರೋರಾತ್ರಿ ಪೋಸ್ಟರ್‍ಗಳನ್ನು ಅಂಟಿಸಿದ್ದ ನಾಲ್ವರು ಯುವಕರಾದ ಸಂಜು, ಸಂಜಯ್, ವಿಷ್ಣು, ಚಂದ್ರಶೇಖರ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಈ ಯುವಕರು ತರೀಕೆರೆ ಮೂಲದವರು. ತರೀಕೆರೆ ಪಟ್ಟಣದಿಂದ ಚಿಕ್ಕಮಗಳೂರು ನಗರದ ವರೆಗೂ ಪೋಸ್ಟರ್ ಅಂಟಿಸಿದ್ದರು. ನಗರ ಸಭೆ ಪೌರ ಕಾರ್ಮಿಕ ನೀಡಿದ ದೂರಿನ ಮೇರೆಗೆ ಎಫ್‍ಐಆರ್ ದಾಖಲಾಗಿದೆ. ಇನ್ನು ಯುವಕರು ಹಣ ನೀಡಿ ಪೋಸ್ಟರ್ ಅಂಟಿಸಲು ಹೇಳಿದ್ರು ಎಂದು ಹೇಳಿಕೆ ನೀಡಿದ್ದಾರೆ. ಹೀಗಾಗಿ ಬಸವನಹಳ್ಳಿ ಪೊಲೀಸರು ಪೋಸ್ಟರ್ ಸಂಬಂಧ ತನಿಖೆ ನಡೆಸುತ್ತಿದ್ದಾರೆ.

ಕಳೆದ ಚುನಾವಣೆಯಲ್ಲಿ ಗೋ ಬ್ಯಾಕ್ ಅಭಿಯಾನ ಮಾಡಿದ್ರು. ಇವತ್ತು ಅದನ್ನೇ ಮಾಡಲು ಹೊರಟಿದ್ದಾರೆ. ಕೆಲವರು ದುಡ್ಡಿನ ಮದದಿಂದ ಇಂತಹ ಕೆಲಸ ಮಾಡುತ್ತಿದ್ದಾರೆ. ಕೆಲವು ಗಂಡಸರಿಗೆ ಅಧಿಕಾರ ನಮ್ಮ ಬಳಿಯೇ ಇರಬೇಕು ಎಂಬ ಭಾವನೆ ಇರುತ್ತೆ. ದರ್ಪದಿಂದ ಇಂತಹ ಕೆಲಸವನ್ನ ಮಾಡಿಸುತ್ತಿದ್ದಾರೆ. ನಾನು ಯಡಿಯೂರಪ್ಪ, ಪ್ರಧಾನಿ ಮೋದಿ ಅವರ ಸಂಪುಟದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಇದಕ್ಕೆಲ್ಲ ಉತ್ತರ ನಾನು ಕೊಡಲ್ಲ, ನಮ್ಮ ಹೈ ಕಮಾಂಡ್ ಕೊಡುತ್ತೆ ಎಂದು ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ.

ಎಲ್ಲವನ್ನೂ ಹೈ ಕಮಾಂಡ್ ಗಮನಿಸಿದೆ. ಸರಿಯಾದ ಉತ್ತರ ನನ್ನ ಹಿರಿಯರು ಕೊಡುತ್ತಾರೆ. ನನ್ನ ಹಿರಿಯರು ನನ್ನ ಪರವಾಗಿ ಉತ್ತರ ಕೊಡುತ್ತಾರೆ ಎಂಬ ವಿಶ್ವಾಸ ಇದೆ. ಪತ್ರ ಯಾರು ಬರೆದು ಯಾರು ಪೋಸ್ಟ್ ಮಡಿದ್ರು ಎಲ್ಲವೂ ಗೊತ್ತಿದೆ. ಕೇಂದ್ರ ಎಲ್ಲವನ್ನೂ ವರದಿ ತರಿಸಿಕೊಂಡಿದೆ. ಇದಕ್ಕೆ ಉತ್ತರ ಕೊಡುತ್ತಾರೆ. ಚುನಾವಣೆಯಲ್ಲಿ ಇಂತಹ ಕೆಲಸಗಳು ನಡೆದಾಗ ಕೇಂದ್ರ ವರದಿಯನ್ನ ತರಿಸಿಕೊಳ್ಳುತ್ತೆ. ಸತ್ಯ ಕೇಂದ್ರಕ್ಕೆ ತಲುಪಿದೆ. ಉತ್ತರ ಅವರೆ ಕೊಡುತ್ತಾರೆ ಎಂದು ಚಿಕ್ಕಮಗಳೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು