LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಕ್ರಿಕೆಟಿಗ ಶಶಾಂಕ್ ಸಿಂಗ್ ವಿರುದ್ಧ FIR ದಾಖಲು

ಶಶಾಂಕ್ ಸಿಂಗ್ ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ಆಡುವ ಭಾರತದ ಅತ್ಯಂತ ಭರವಸೆಯ ಆಲ್-ರೌಂಡರ್. ತಮ್ಮ ಬಿರುಸಿನ ಬ್ಯಾಟಿಂಗ್ ಮತ್ತು ಅತ್ಯುತ್ತಮ ಫಿನಿಶಿಂಗ್ ಆಟದೊಂದಿಗೆ ಗಮನ ಸೆಳೆದಿರುವ ಇವರು, ಐಪಿಎಲ್‌ನಲ್ಲಿ ಈವರೆಗೆ ಒಟ್ಟು 53 ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ 161 ಕ್ಕೂ ಹೆಚ್ಚಿನ ಸ್ಟ್ರೈಕ್ ರೇಟ್‌ನಲ್ಲಿ 905 ರನ್‌ಗಳನ್ನು ಗಳಿಸಿದ್ದಾರೆ.ಆಟಗಾರನ ಹೊಡೆದಾಟ... ಕ್ರಿಕೆಟಿಗ ಶಶಾಂಕ್ ಸಿಂಗ್ ವಿರುದ್ಧ FIR ದಾಖಲುಪಂಜಾಬ್ ಕಿಂಗ್ಸ್, ತಂಡದ ಸ್ಟಾರ್ ಆಟಗಾರ ಶಶಾಂಕ್ ಸಿಂಗ್ ಮತ್ತು ಅವರ ಕುಟುಂಬದ ವಿರುದ್ಧ ಭೋಪಾಲ್‌ನಲ್ಲಿ ಗಂಭೀರ ಪ್ರಕರಣ ದಾಖಲಾಗಿದೆ. ಅಡುಗೆ ಭಟ್ಟನಿಗೆ ಮೌಖಿಕವಾಗಿ ನಿಂದಿಸಿ, ಹಲ್ಲೆ ನಡೆಸಿದ ಆರೋಪದ ಮೇಲೆ ಶಶಾಂಕ್ ಸಿಂಗ್, ಅವರ ತಂದೆ ಶೈಲೇಶ್ ಸಿಂಗ್ (ನಿವೃತ್ತ ವಿಶೇಷ ಡಿಜಿಪಿ) ಮತ್ತು ಅವರ ಚಾಲಕ ಮಿಶ್ರಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.ದೂರಿನಲ್ಲೇನಿದೆ?ಶಶಾಂಕ್ ಸಿಂಗ್ ಅವರ ಮನೆಯಲ್ಲಿ ಅಡುಗೆ ಕೆಲಸಕ್ಕಿದ್ದ 31 ವರ್ಷದ ವಿಪೇಂದ್ರ ಸಿಂಗ್ ತೋಮರ್ ಎಂಬುವವರು ರತೀಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಊಟದ ಗುಣಮಟ್ಟದ ವಿಚಾರವಾಗಿ ಮನೆಯಲ್ಲಿ ವಿವಾದ ಉಂಟಾಗಿತ್ತು. ಇದರಿಂದ ಬೇಸತ್ತು ಕೆಲಸ ಬಿಟ್ಟು ಹೋಗಲು ನಿರ್ಧರಿಸಿದಾಗ, ಯಾರನ್ನೂ ಸಂಪರ್ಕಿಸದAತೆ ಮೊಬೈಲ್ ಫೋನ್ ಅನ್ನು ಬಲವಂತವಾಗಿ ಕಸಿದುಕೊಳ್ಳಲಾಯಿತು.ಭಯದಿಂದ ನಾನು (ವಿಪೇಂದ್ರ ಸಿಂಗ್ ತೋಮರ್) ಕೋಣೆಯೊಂದರಲ್ಲಿ ಬೀಗ ಹಾಕಿಕೊಂಡಾಗ, ಶಶಾಂಕ್ ಸಿಂಗ್, ಅವರ ತಂದೆ ಶೈಲೇಶ್ ಸಿಂಗ್ ಮತ್ತು ಅವರ ಚಾಲಕ ಮಿಶ್ರಾ ಬಾಗಿಲು ಮುರಿದು ಒಳನುಗ್ಗಿ ಕೈ ಮತ್ತು ಮುಷ್ಟಿಗಳಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ ಎಂದು ವಿಪೇಂದ್ರ ಸಿಂಗ್ ತೋಮರ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ನಡೆಸಿದ ವೈದ್ಯಕೀಯ ತಪಾಸಣೆಯಲ್ಲಿ ತೋಮರ್ ಅವರ ಮುಖ ಮತ್ತು ದೇಹದ ಮೇಲೆ ಗಾಯದ ಗುರುತುಗಳು ಇರುವುದು ದೃಢಪಟ್ಟಿದೆ. ಇದರ ಆಧಾರದ ಮೇಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ದೌರ್ಜನ್ಯ, ಜಂಟಿ ಕ್ರಿಮಿನಲ್ ಹೊಣೆಗಾರಿಕೆ ಮತ್ತು ಸಾರ್ವಜನಿಕ ನಿಂದನೆ ಪ್ರಕರಣಗಳನ್ನು ದಾಖಲಿಸಿದ್ದಾರೆ.ಶಶಾಂಕ್ ಸಿಂಗ್ ಸ್ಪಷ್ಟನೆ:ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ತಳ್ಳಿಹಾಕಿರುವ ಶಶಾಂಕ್ ಸಿಂಗ್, ಇವೆಲ್ಲವೂ ಸುಳ್ಳು ಮತ್ತು ಕಲ್ಪಿತ ಕಥೆ ಎಂದು ಹೇಳಿದ್ದಾರೆ.ವಿಪೇಂದ್ರ ಸಿಂಗ್ ತೋಮರ್ ತನಗೆ ದೊಡ್ಡ ಹೋಟೆಲ್‌ಗಳಲ್ಲಿ ಅಡುಗೆ ಮಾಡಿದ ಅನುಭವವಿದೆ ಎಂದು ಸುಳ್ಳು ಹೇಳಿ ಕೆಲಸಕ್ಕೆ ಸೇರಿದ್ದಡಿಉ. ಆದರೆ ಅವನಿಗೆ ಅಡುಗೆಯ ಪ್ರಾಥಮಿಕ ಜ್ಞಾನವೂ ಇರಲಿಲ್ಲ.ಅಲ್ಲದೆ ನಮ್ಮ ಮನೆಯ ಬೆಡ್‌ರೂಮ್‌ಗಳಿಗೆ ನುಗ್ಗಿ ಅಲ್ಲಿನ ದುಬಾರಿ ವಾಚ್‌ಗಳು, ಸನ್‌ಗ್ಲಾಸ್‌ಗಳು ಮತ್ತು ವಾರ್ಡ್ರೋಬ್‌ಗಳ ವಿಡಿಯೋ ರೆಕಾರ್ಡ್ ಮಾಡುತ್ತಿದ್ದಾಗ ರೆಡ್-ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ.
ಈ ವಿಡಿಯೋಗಳನ್ನು ಡಿಲೀಟ್ ಮಾಡಲು ಹೇಳಿದಾಗ ತಪ್ಪು ಒಪ್ಪಿಕೊಂಡ ತೋಮರ್, ದಯವಿಟ್ಟು ಪೊಲೀಸ್ ಕೇಸ್ ಮಾಡಬೇಡಿ ಎಂದು ಕಾಲು ಹಿಡಿದು ಬೇಡಿಕೊಂಡಿದ್ದ. ಆನಂತರ ಅವನನ್ನು ಗೌರವಯುತವಾಗಿಯೇ ಮನೆಯಿಂದ ಕಳುಹಿಸಲಾಗಿತ್ತು. ಯಾವುದೇ ಹಲ್ಲೆ ಮಾಡಿಲ್ಲ ಎಂದು ಶಶಾಂಕ್ ಸಿಂಗ್ ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು