LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ರೈಲಿನಲ್ಲಿ ೨ ಬೋಗಿಗಳಲ್ಲಿ ಬೆಂಕಿ ಇಬ್ಬರು ವ್ಯಕ್ತಿಗಳು ಮೃತ್ಯು

ವಿಶಾಖಪಟ್ಟಣ: ಟಾಟಾನಗರ-ಎರ್ನಾಕುಲಂ ಎಕ್ಸ್ಪ್ರೆಸ್‌ನ ರೈಲಿನ ಎರಡು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯಲ್ಲಿ ನಡೆದಿದೆ.
ವಿಶಾಖಪಟ್ಟಣದಿಂದ ೬೬ ಕಿ.ಮೀ ದೂರದದಲ್ಲಿರುವ ಎಲಮಂಚಿಲಿ ನಿಲ್ದಾಣದ ಬಳಿ ನಸುಕಿನ ಜಾವ ೧ ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಒಂದು ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದನ್ನು ಗಮನಿಸಿದ ಲೋಕೋ ಪೈಲಟ್ ತಕ್ಷಣವೇ ಎಲಮಂಚಿಲಿ ರೈಲು ನಿಲ್ದಾಣದ ಬಳಿ ರೈಲನ್ನು ನಿಲ್ಲಿಸಿದ್ದಾರೆ.
ಬಿ೧ ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಪಕ್ಕದ ಎಂ೧ ಮತ್ತು ಬಿ೨ ಬೋಗಿಗಳಿಗೆ ಹರಡಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ಮತ್ತಷ್ಟು ಹರಡದಂತೆ ತಡೆಯಲು ಬೋಗಿಗಳನ್ನು ರೈಲಿನ ಉಳಿದ ಭಾಗಗಳಿಂದ ತಕ್ಷಣವೇ ಬೇರ್ಪಡಿಸಲಾಯಿತು. ಬಿ೧ ಬೆಂಕಿ ಹೊತ್ತಿಕೊಂಡ ಮೊದಲ ಬೋಗಿಯಾಗಿದ್ದರೂ ಎಂ೧ ಮತ್ತು ಬಿ೨ ಬೋಗಿಗಳಿಗೂ ತೀವ್ರ ಹಾನಿಯಾಗಿವೆ.
ಘಟನೆಯ ಸಮಯದಲ್ಲಿ ಒಂದು ಬೋಗಿಯಲ್ಲಿ ೮೨ ಪ್ರಯಾಣಿಕರು ಮತ್ತು ಇನ್ನೊಂದು ಬೋಗಿಯಲ್ಲಿ ೭೬ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದುರದೃಷ್ಟವಶಾತ್ ಬಿ೧ ಕೋಚ್‌ನಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಅಧಿಕಾರಿ ಹೇಳಿದರು. ಮೃತರನ್ನು ಚಂದ್ರಶೇಖರ್ ಸುಂದರA ಎಂದು ಗುರುತಿಸಲಾಗಿದೆ.
ಬೆಂಕಿ ಕಾಣಿಸಿಕೊಂಡಾಗ ರೈಲು ಜಾರ್ಖಂಡ್‌ನ ಟಾಟಾ ನಗರದಿಂದ ಕೇರಳದ ಎರ್ನಾಕುಲಂಗೆ ಪ್ರಯಾಣಿಸುತ್ತಿತ್ತು. ರೈಲ್ವೇ ಅಧಿಕಾರಿಗಳು ಬೆಂಕಿ ಹೊತ್ತಿಕೊಳ್ಳಲು ಕಾರಣವಾದ ಅಂಶಗಳ ಬಗ್ಗೆ ತನಿಖೆ ಆರಂಭಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು