LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಫೈರ್ ಫ್ಲೈ... ದೀಪಾವಳಿಗೆ ನಿವೇದಿತಾ ನಿರ್ಮಾಣದ ಚಿತ್ರ ರಿಲೀಸ್...

ನಿವೇದಿತಾ ನಿರ್ಮಾಣದ ಚೊಚ್ಚಲ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ.ನಿವೇದಿತಾ ಶ್ರೀ ಮುತ್ತು ಸಿನಿ ಸರ್ವೀಸಸ್ ಬ್ಯಾನರ್ ಮೂಲಕ ಮೂಡಿಬಂದಿರುವ ಫೈರ್ ಫ್ಲೈ ಬೆಳಕಿನ ಹಬ್ಬ ದೀಪಾವಳಿಗೆ ದರ್ಶನ ಕೊಡಲಿದೆ. ಚಿತ್ರತಂಡ ಸುದ್ದಿಗೋಷ್ಠಿ ಆಯೋಜಿಸಿತ್ತು.

ಮಾತನಾಡಿದ ನಿರ್ಮಾಪಕಿ ನಿವೇದಿತಾ ವೆಬ್ ಸೀರಿಸ್ ಮಾಡಿದ ಮೇಲೆ ಸಿನಿಮಾ ಮಾಡಬೇಕು ಅಂತಾ ತುಂಬಾ ಆಸಕ್ತಿ ಇತ್ತು. ವಂಶಿ ಅವರು ಕಥೆ ಹೇಳಿದಾಗ ನನಗೆ ತುಂಬಾ ಇಷ್ಟವಾಯಿತು. ಒಳ್ಳೆ ಟೆಕ್ನಿಕಲ್ ಟೀಂ ತೆಗೆದುಕೊಂಡು ಮಾಡಬೇಕು ಎಂದು ಚಿತ್ರ ಮಾಡಿದ್ದೇವೆ. ಕಥೆ ತುಂಬಾ ಸರಳವಾಗಿದ್ದರೂ, ಅವರು ಕಥೆ ಹೇಳಿದ ರೀತಿ ತುಂಬಾ ಇಷ್ಟವಾಯ್ತು. ಹೊಸ ಪ್ರಯೋಗ ಮಾಡಿದ್ದೇನೆ. ಕೊನೆಯ ಹಂತದ ಚಿತ್ರೀಕರಣ ಶುರು ಮಾಡುತ್ತಿದ್ದೇವೆ. ದೀಪಾವಳಿ ಸಿನಿಮಾ ಬಿಡುಗಡೆಯಾಗಲಿದೆ ಎಂದರು.

ನಟ ಕಂ ನಿರ್ದೇಶಕ ವಂಶಿ ಮಾತನಾಡಿ, ಎಲ್ಲರ ಜೀವನದಲ್ಲಿಯೂ ಒಂದು ಪಾಯಿಂಟ್ ಇರುತ್ತದೆ. ನಾವು ಡೆಂಡ್ ಎಂಡ್ ಅಂದುಕೊಂಡಿರುತ್ತೇವೆ. ಒಂದು ಹೋಪ್ ಹಾಗೂ ಮೊಟಿವೇಷನ್ ಗೆ ಕಾಯುತ್ತಾ ಇರುತ್ತೇವೆ. ಆ ಟೈಮ್ ನಲ್ಲಿ ಹೋಪ್ ಎಂಬ ಬೆಳಕು ಎಲ್ಲಿಂದಲೋ ಬರಲ್ಲ ನಮ್ಮಿಂದಲೇ ಬರಬೇಕು ಎಂಬುದೇ ಫೈರ್ ಫ್ಲೈ. ಅದಕ್ಕೆ ಈ ಟೈಟಲ್ ಇಟ್ಟಿದ್ದೇವೆ.

ನಿವೇದಿತಾ ಗೆ ಧನ್ಯವಾದ. ಇದಕ್ಕಿಂತ ಮೊದಲು ಎರಡು ಮೂರು ಕಥೆ ಚರ್ಚೆ ಮಾಡಿದ್ದೇವು. ಆದರೆ ಅವರು ರಿಜೆಕ್ಟ್ ಮಾಡಿದರು. ಈ ಕಥೆ ಒಪ್ಪಿಕೊಂಡಿದ್ದಕ್ಕೆ ನನಗೆ ಖುಷಿಯಾಯ್ತು. ಯಾಕೆಂದರೆ ನನ್ನಲ್ಲಿ ಕೆಲ ಬದಲಾವಣೆ ಆಯ್ತು. ಟೆಕ್ನಿಕಲ್ ಸ್ಟ್ರಾಂಗ್ ಹಾಗೂ ಸಿಂಪಲ್ ಸಿನಿಮಾದೊಂದಿಗೆ ಬರುತ್ತಿದ್ದೇವೆ. ಇದೇ ದೀಪಾವಳಿಗೆ ಚಿತ್ರ ಬರುತ್ತಿದೆ.

ಇಡೀ ಸಿನಿಮಾದಲ್ಲಿ ನಾನು ಒಬ್ಬನೇ ಹೊಸಬ.ಆದರೆ ಆ ರೀತಿ ಫೀಲ್ ನನಗೆ ಬಂದೇ ಇಲ್ಲ. ಇಷ್ಟು ಜನ ಸಿಕ್ಕಿದ್ದು, ಶ್ರೀಮುತ್ತು ಸಿನಿ ಸರ್ವೀಸ್ ನಿಂದ. ನಾನು ಬೇರೆ ನಿರ್ಮಾಪಕರ ಜೊತೆ ಕೈ ಜೋಡಿಸಿದ್ದರೇ ಡೇಟ್ಸ್ ಕೂಡ ಸಿಕ್ಕುತ್ತಿರಲಿಲ್ಲ ಎಂದರು.ಫೈರ್ ಫ್ಲೈ ಚಿತ್ರದಲ್ಲಿ ವಂಶಿ ಹೀರೋ ಆಗಿ ನಟಿಸುತ್ತಿದ್ದಾರೆ. ನಿರ್ದೇಶನದ ಜವಾಬ್ದಾರಿ ಕೂಡ ಅವರದ್ದೇ ಎಂಬುದು ವಿಶೇಷ.

ಪುನೀತ್ ರಾಜ್ಕುಮಾರ್ ಅವರ ಪಿಆರ್ಕೆ  ಪ್ರೊಡಕ್ಷನ್ಸ್ ನಿರ್ಮಾಣದ ಮಯಾಬಜಾರ್ ಸಿನಿಮಾದಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದ, ಪೆಂಟಗನ್ ಚಿತ್ರದಲ್ಲೂ ಪ್ರಮುಖ ಪಾತ್ರವೊಂದರಲ್ಲಿ ಅವರು ನಟಿಸಿದ್ದರು. ಈಗ ನಿವೇದಿತಾ ನಿರ್ಮಾಣ ಮಾಡುತ್ತಿರುವ ಮೊದಲ ಚಿತ್ರಕ್ಕೆ ನಿರ್ದೇಶನ ಮಾಡುವ ಮೂಲಕ ವಂಶಿ ಅವರು ಸ್ವತಂತ್ರ ನಿರ್ದೇಶಕರಾಗಿ ಮತ್ತು ಪೂರ್ಣಪ್ರಮಾಣದ ಹೀರೋ ಆಗಿ ಚಿತ್ರರಂಗದಲ್ಲಿ ಹೊಸ ಅಧ್ಯಾಯ ಶುರು ಮಾಡಿದ್ದಾರೆ.

ಫೈರ್ ಫ್ಲೈ ಚಿತ್ರಕ್ಕೆ ಜಯ್ ರಾಮ್ ಸಹ-ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಅಭಿಲಾಷ್ ಕಳತ್ತಿ ಛಾಯಾಗ್ರಹಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಚರಣ್ ರಾಜ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ರಘು ನಿಡುವಳ್ಳಿ ಅವರು ಸಂಭಾಷಣೆಯ ಬರೆದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು