LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ರೌಡಿಶೀಟರ್ ಮೇಲೆ ಗುಂಡಿನ ದಾಳಿ

ಬೆಂಗಳೂರು: ಕುಖ್ಯಾತ ರೌಡಿ ಗಿರೀಶ್ ಅಲಿಯಾಸ್ ಸೈಕಲ್ ಗಿರಿ(27) ಈತನು ಇತ್ತೀಚೆಗೆ ಕಗ್ಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ದರೋಡೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರಿಸಿಕೊಂಡಿದ್ದು ಈತನನ್ನು ಪತ್ತೆ ಮಾಡಲು ಕಗ್ಲಿಪುರ ಪಿಎಸ್‍ಐ ಲೋಕೇಶ್ ಕುಮಾರ್ ತಂಡ ರಚಿಸಲಾಗಿತ್ತು.

ಈತನು ಸುಮಾರು ಎಂಟು ಪ್ರಕರಣಗಳಲ್ಲಿ, ದರೋಡೆ, ಕೊಲೆ ಯತ್ನ ಹಾಗೂ ಇನ್ನೂ ಇತರೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ನ್ಯಾಯಾಲಯಕ್ಕೂ ಬಾಕಿ ಇದ್ದ ಪ್ರಕರಣಗಳಲ್ಲಿ ಜಾಮೀನು ಪಡೆದು ಸರಿಯಾಗಿ ಹಾಜರಾಗದೆ ತಲೆಮರಿಸಿಕೊಂಡಿದ್ದನು.
ಈತನನ್ನು ಮಾರ್ಚ್ ಐದರಂದು ಕಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ಉದ್ದಿನ ಪಾಳ್ಯದಲ್ಲಿ ಬಂಧಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾಗ ತನ್ನ ಬಳಿ ಇದ್ದ ಚಾಕುವಿನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಪರಿಣಾಮ, ಮೊದಲು ಈತನಿಗೆ ಶರಣಾಗಲು ಸೂಚಿಸಿದರು.

ಶರಣಾಗದೆ ಮತ್ತೆ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲು ಯತ್ನಿಸಿದಾಗ ಲೋಕೇಶ್ ಕುಮಾರ್ ಪಿಎಸ್‍ಐ ರವರು ತಮ್ಮ ಸರ್ವಿಸ್ ರಿವರ್ ನಿಂದ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದರೂ ಸಹ ಮತ್ತೆ ಹಲ್ಲೆ ನಡೆಸಲು ಪ್ರಯತ್ನಿಸಿದಾಗ ಎಡಗಾಲಿಗೆ ಮತ್ತೊಂದು ಗುಂಡು ಹಾರಿಸಿರುತ್ತಾರೆ ಎಂದು ರಾಮನಗರ ಜಿಲ್ಲಾ ಎಸ್ ಪಿ ರವರು ತಿಳಿಸಿರುತ್ತಾರೆ. ಈತನು ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುತ್ತಾನೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು