LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ರಾಮನ ಅವತಾರ ಮೊದಲ ನೋಟ

ಟೀಸರ್, ಹಾಡು ಹಾಗೂ ವಿಭಿನ್ನ ಪ್ರಮೋಷನ್ ವಿಡಿಯೋಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಸಿನಿಮಾ ರಾಮನ ಅವತಾರ. ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಬೆಂಗಳೂರಿನ ಎಂಎಂ ಲೆಗಸಿಯಲ್ಲಿ ರಾಮನ ಅವತಾರ ಸಿನಿಮಾದ ಮೊದಲ ನೋಟ ಅನಾವರಣ ಮಾಡಲಾಯಿತು. ಈ ವೇಳೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ನಟ ರಿಷಿ ಮಾತನಾಡಿ, ಈ ಸಿನಿಮಾ ಒಪ್ಪಿಕೊಳ್ಳಲು ಮುಖ್ಯ ಕಾರಣ ಆಪರೇಷನ್ ಅಲಮೇಲಮ್ಮ. ಈ ಚಿತ್ರಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಆ ರೀತಿ ಎಂಟರ್ ಟೈನ್ಮೆಂಟ್ ಸಿನಿಮಾ ಮಾಡಿ ಎನ್ನುತ್ತಿದ್ದರು. ಅದೇ ರೀತಿ ಹಾಸ್ಯಭರತಿ ಚಿತ್ರ ಮಾಡಿ ಎನ್ನುತ್ತಿದ್ದರು. ನನಗೆ ಆಪರೇಷನ್ ಅಲಮೇಲಮ್ಮ ಮ್ಯಾಜಿಕ್. ಅದನ್ನು ರಿಪೀಟ್ ಮಾಡುವ ಆಗಿಲ್ಲ. ನೋಡೋಣಾ ಅದು ಸರಳ ಜಾನರ್ ಅಲ್ಲ. ಆ ಸಮಯದಲ್ಲಿ ಪಂಪಾಪತಿ ಸಿಕ್ಕಿದ್ದರು.

ಅವರ ಹಾಸ್ಯ ನನಗೆ ಇಷ್ಟವಾಯ್ತು. ರಾಮಾಯಣ ಇಟ್ಟುಕೊಂಡು ಸಿನಿಮಾ ಮಾಡುವ ಕಥೆ ತಂದರು. 2024 ರಲ್ಲಿ ನಡೆಯುವ ಘಟನೆಗೆ ರಾಮಾಯಣ ಮೌಲ್ಯವನ್ನು ತೋರಿಸುವುದು. ಈ ಚಿತ್ರದಲ್ಲಿ ತೋರಿಸುತ್ತಿರುವುದು ನನಗೆ ಖುಷಿ ಕೊಟ್ಟಿದೆ. ಇದು ಖುಷಿ ಕೊಡುವ ಸಿನಿಮಾ. ಪ್ರತಿಯೊಬ್ಬರು ತಮ್ಮ ಪಾತ್ರಗಳಿಗೆ ಅದ್ಭುತವಾಗಿ ಜೀವ ತುಂಬಿದ್ದಾರೆ. ಸಿನಿಮಾ ಮೇ10ರಂದು ರಿಲೀಸ್ ಆಗ್ತಿದೆ. ಹಾಡುಗಳು ನನಗೆ ತುಂಬಾ ಇಷ್ಟ. ಇಡೀ ಸಿನಿಮಾಗೆ ದುಡಿದ ಎಲ್ಲರಿಗೂ ಧನ್ಯವಾದ ತಿಳಿಸಿದರು.

ನಿರ್ದೇಶಕ ವಿಕಾಸ್ ಪಂಪಾಪತಿ ಮಾತನಾಡಿ, ಈ ಸಿನಿಮಾ ಕ್ಯಾರೆಕ್ಟರ್ ಜರ್ನಿ ಹೇಳುತ್ತಿದ್ದೇವೆ. ರಾಮ ಪಾತ್ರಧಾರಿ ಅವನಿಗೆ ಅವನೇ ಜೆಂಟಲ್ ಮ್ಯಾನ್ ಎಂದು ಹೇಳಿಕೊಂಡು ಓಡಾಡುತ್ತಾ ಇರುತ್ತಾನೆ. ಅವನು ಹೇಗೆ ಜೆಂಟಲ್ ಮ್ಯಾನ್ ಆಗುತ್ತಾನೆ ಅವನ ಜೀವನದಲ್ಲಿ ನಡೆದ ಘಟನೆಗಳೇನು ಅವನನ್ನು ಹೇಗೆ ಬದಲಾಯಿಸುತ್ತದೆ ರಾಮನ ಅವತಾರ ಎಂದು ಯಾಕೆ ಇಟ್ಟಿದ್ದೇವೆ ಎಂದರೆ? ರಾಮನ ಹೇಗೆ ಜೆಂಟಲ್ ಮ್ಯಾನ್ ಆಗುತ್ತಾನೆ ಅನ್ನುವುದನ್ನು ಎಂಟರ್ ಟೈನ್ಮೆಂಟ್ ಆಗಿ ಹೇಳಿದ್ದೇವೆ. ರಾಮನ ಅವತಾರ ಎಂದು ಹೇಗೆ ಹೆಸರಟ್ಟಿದ್ದೇವೆ ಎಂದರೆ ಎಲ್ಲರ ಲೈಫ್ ನಲ್ಲಿಯೂ ಒಂದಲ್ಲ ಒಂದು ರಾಮಾಯಣ ನಡೆಯುತ್ತದೆ.

ಸೀತೆ ತರ ಹೆಂಡತಿ, ಲಕ್ಷ್ಮಣ ರೀತಿ ತಮ್ಮ, ರಾವಣನಿಂದ ಆಗುವ ಸಮಸ್ಯೆ ಈ ರೀತಿ ಸಮಸ್ಯೆಗಳು ಎಲ್ಲರ ಜೀವನದಲ್ಲಿ ನಡೆಯುತ್ತವೆ. ಆ ಘಟನೆಗಳನ್ನು ಚಿತ್ರದಲ್ಲಿ ತೋರಿಸಲಾಗಿದೆ ಎಂದು ಹೇಳಿದರು.ನಟಿ ಪ್ರಣೀತಾ ಸುಭಾಷ್ ಮಾತನಾಡಿ, ರಾಮನ ಅವತಾರ ತುಂಬಾ ವಿಶೇಷವಾದ ಸಿನಿಮಾ. ರಾಮಾಯಣ ಎಲ್ಲರಿಗೂ ಗೊತ್ತಿದೆ. ಈ ರಾಮಾಯಣ ಮಾರ್ಡನ್ ಟೇಕ್. ನಾನು ಈ ರೀತಿ ಪ್ರಾಜೆಕ್ಟ್ ಭಾಗವಾಗಿದ್ದು, ಖುಷಿ ಕೊಟ್ಟಿದೆ. ರಾಮಾಯಣ ಬಗ್ಗೆ ಅಂದ ತಕ್ಷಣ ಸಿನಿಮಾ ಒಪ್ಪಿಕೊಂಡೆ. ರಿಷಿ ಬೇರೆ ಅವರ ಚಿತ್ರಗಳನ್ನು ನೋಡಿದ್ದೇನೆ. ಶೂಟಿಂಗ್ ಜರ್ನಿ ತುಂಬಾ ಚೆನ್ನಾಗಿತ್ತು ಎಂದು ಹೇಳಿದರು.

ನಟಿ ಶುಭ್ರ ಅಯ್ಯಪ್ಪ ಮಾತನಾಡಿ, ನಿರ್ದೇಶಕರು ನನ್ನ ಪಾತ್ರದ ಹೇಳಿದಾಗ ನಾನು ಎಕ್ಸೈಟ್ ಆದೆ. ಹಳ್ಳಿ ಹುಡುಗಿ ಪಾತ್ರದಲ್ಲಿ ನನ್ನನ್ನು ನಾನು ನೋಡಲು ಕಾತುರನಾಗಿದ್ದೇನೆ. ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಮೇ 10ಕ್ಕೆ ನಮ್ಮ ಸಿನಿಮಾ ರಿಲೀಸ್ ಆಗುತ್ತಿದೆ. ನಿಮ್ಮ ಬೆಂಬಲ ಇರಲಿ ಎಂದರು.
ರಾಮನ ಅವತಾರ ಟ್ರೇಲರ್ ಪ್ರಾಮಿಸಿಂಗ್ ಆಗಿದೆ. ಟ್ರೇಲರ್‍ನಲ್ಲಿ ನಗು, ಅಳು, ಪ್ರೀತಿ-ಪ್ರೇಮ ಎಲ್ಲವೂ ಇದೆ. ಭಿನ್ನ ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿರುವ ರಿಷಿ, ಇತ್ತೀಚಿಗೆ ವೆಬ್ ಸೀರಿಸ್ ಮೂಲಕವೂ ಮೋಡಿ ಮಾಡಿರುವ ಅವರೀಗ ಕಾಮಿಡಿ ಕಥೆ ಹೊತ್ತು ನಿಮ್ಮನ್ನು ನಗಿಸಲು ಬರ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು