LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಟೀಸರ್‍ನಲ್ಲೇ ಮೋಡಿ ಮಾಡಿದ "ಫಸ್ಟ್ ನೈಟ್ ವಿತ್ ದೆವ್ವ "

"ಬಿಗ್ ಬಾಸ್" ಮೂಲಕ ಜನಪ್ರಿಯರಾದ ನಟ ಪ್ರಥಮ್ ನಾಯಕನಾಗಿ ಅಭಿನಯಿಸಿರುವ, ನವೀನ್ ಬೀರಪ್ಪ ನಿರ್ಮಾಣದ ಹಾಗೂ ಪಿ.ವಿ.ಆರ್ ಸ್ವಾಮಿ ಗೂಗಾರೆದೊಡ್ಡಿ ನಿರ್ದೇಶನದ "ಫಸ್ಟ್ ನೈಟ್ ವಿತ್ ದೆವ್ವ" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಇತ್ತೀಚಿಗೆ ನಡೆದ ಟೀಸರ್ ಬಿಡುಗಡೆ ಸಮಾರಂಭಕ್ಕೆ "ಬಿಗ್ ಬಾಸ್" ಸ್ಪರ್ಧಿಗಳಾದ "ತುಕಾಲಿ" ಸಂತೋಷ್ ಹಾಗೂ ನಮೃತ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

ನಾನು ನಿರ್ದೇಶಕರ ನಟ ಎಂದು ಮಾತನಾಡಿದ ಪ್ರಥಮ್, ಪಿ.ವಿ.ಆರ್ ಸ್ವಾಮಿ ಅವರು ಬಹುಬೇಗನೇ ಚಿತ್ರವನ್ನು ಪೂರ್ಣಗೊಳಿಸಿದ್ದಾರೆ. ಕಳೆದ ನವೆಂಬರ್ ನಲ್ಲಿ ಈ ಚಿತ್ರ ಆರಂಭವಾಗಿತ್ತು. ಚಿತ್ರ ಆರಂಭವಾದ ತಕ್ಷಣ ಮೊದಲು ಬರುವ ಸನ್ನಿವೇಶವೇ ಮದುವೆ ದೃಶ್ಯ. ಮದುವೆಯನ್ನು ಬಹಳ ಆಸೆಯಿಂದ ಆದ ಹುಡುಗನಿಗೆ ತನ್ನ ಮೊದಲರಾತ್ರಿ ನಡೆಯುತ್ತಿರುವುದು ದೆವ್ವದ ಜೊತೆಗೆ ಎಂದು ತಿಳಿದಾಗ ಏನೆಲ್ಲಾ ಆಗುತ್ತದೆ? ಎಂಬುದೆ ಚಿತ್ರದ ಕಥಾಸಾರಾಂಶ. ಈ ಚಿತ್ರದಲ್ಲಿ ನಗುವಿಗೆ ಬರವಿಲ್ಲ.

ಹಾರಾರ್, ಕಾಮಿಡಿ, ಆಕ್ಷಮ್ ಹಾಗೂ ಸೆಂಟಿಮೆಂಟ್ ಗಳ ಸಮ್ಮಿಲ್ಲನವೇ ಈ ನಮ್ಮ ಚಿತ್ರ. ನಾನೇ ಕಥೆ, ಚಿತ್ರಕಥೆ ಬರೆದಿದ್ದೇನೆ. ನಿಖಿತ, ಜೀವಿತ ಹಾಗೂ ಸುಶ್ಮಿತ ಮೂವರು ನಾಯಕಿಯರು. ನಿಖಿತ ನನ್ನ ಹೆಂಡತಿ ಪಾತ್ರ ಮಾಡಿದ್ದಾರೆ. ಹಿರಿಯ ನಟರಾದ ಶ್ರೀನಿವಾಸಮೂರ್ತಿ, ರಮೇಶ್ ಭಟ್, ಹರೀಶ್ ರಾಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸಮಾರಂಭಕ್ಕೆ ಬಂದಿರುವ ತುಕಾಲಿ ಸಂತೋಷ್ ಹಾಗೂ ನಮೃತಾ ಅವರಿಗೆ ಧನ್ಯವಾದ ಎಂದರು.

ನವೆಂಬರ್ ನಲ್ಲಿ ಆರಂಭವಾದ ಈ ಚಿತ್ರ, ನನ್ನ ತಂಡದ ಸಹಕಾರದಿಂದ ನಿಗದಿಯಂತೆ ಪೂರ್ಣವಾಗಿದೆ. ಚಿತ್ರವನ್ನು ಮುಂದಿನ ತಿಂಗಳು ತೆರೆಗೆ ತರುವ ಸಿದ್ದತೆ ನಡೆಯತ್ತಿದೆ ಎಂದು ನಿರ್ದೇಶಕ ಹಾಗೂ ಛಾಯಾಗ್ರಾಹಕ ಪಿವಿಆರ್ ಸ್ವಾಮಿ ತಿಳಿಸಿದರು.ನಿರ್ಮಾಪಕ ನವೀನ್ ಬೀರಪ್ಪ, ನಾಯಕಿರಾದ ನಿಖಿತ, ಸುಶ್ಮಿತ, ಜೀವಿತ, ನಟಿ ಪುಷ್ಪ ಸ್ವಾಮಿ, ನಟ ಹರೀಶ್ ರಾಜ್, ಸಂಗೀತ ನಿರ್ದೇಶಕ ಅದ್ವಿಕ್ ವರ್ಮ, ಕಾರ್ಯಕಾರಿ ನಿರ್ಮಾಪಕ ಅರವಿಂದ್ ಹಾಗೂ ಸಂಭಾಷಣೆ ಬರೆದು ಸಂಕಲನ ಕಾರ್ಯವನ್ನು ಮಾಡುತ್ತಿರುವ ನಾಗೇಶ್ ಚಿತ್ರದ ಕುರಿತು ಮಾತನಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು