LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಹೆಣ್ಣಾನೆಗೆ ರೇಡಿಯೋ ಕಾಲರ್ ಅಳವಡಿಕೆ

ಅರೇಹಳ್ಳಿ: ಬೇಲೂರು ತಾಲ್ಲೂಕಿನ ಅರೇಹಳ್ಳಿ ಹೋಬಳಿ ವ್ಯಾಪ್ತಿ ಪ್ರದೇಶದಲ್ಲಿ ಜಿಲ್ಲಾ ಅರಣ್ಯ ಇಲಾಖೆ ವತಿಯಿಂದ ಕೈಗೊಳ್ಳಲಾಗಿದ್ದ ಕಾಡಾನೆಗಳ ಕಾರ್ಯಾಚರಣೆಯ ಅಂತಿಮ ಘಟ್ಟವಾದ ಸೋಮವಾರ ಹೆಣ್ಣಾನೆಗೆ ರೇಡಿಯೋ ಕಾಲರ್ ಅಳವಡಿಸಿವುದರ ಮೂಲಕ ಮುಕ್ತಾಯಗೊಂಡಿದೆ.ಕಾನಹಳ್ಳಿ ಅರಣ್ಯದಲ್ಲಿ ತಪ್ಪಿಸಿಕೊಂಡಿದ್ದ ಹೆಣ್ಣಾನೆಗೆ ರೇಡಿಯೋ ಕಾಲರ್ ಅಳವಡಿಸಲು ಕಂಕಣಬದ್ಧರಾದ ಅರಣ್ಯಾಧಿಕಾರಿಗಳು ಸೋಮವಾರ ಸಿಬ್ಬಂದಿಗಳೊಂದಿಗೆ ತೆರಳಿ ಕಾಡಾನೆ ಇರುವ ಸ್ಥಳವನ್ನು ಪತ್ತೆ ಹಚ್ಚಲು ಕಾರ್ಯೋನ್ಮುಖರಾದರು. ಕಾನಹಳ್ಳಿ ಅರಣ್ಯ ಪ್ರದೇಶದ ಹತ್ತಿರದಲ್ಲಿರುವ ಶಿರಗುರ ಎಂಬಲ್ಲಿ ಕಾಡಾನೆಯನ್ನು ಪತ್ತೆಹಚ್ಚಲಾಯಿತು. ಕಾಡಾನೆಯನ್ನು ಅನುಭವಿ ವೈದ್ಯರ ತಂಡ ಹಿಂಬಾಲಿಸಿತ್ತು.ಶಿರಗುರದಲ್ಲಿ ಬೆಳಗ್ಗೆ 8.30 ಕ್ಕೆ ಪತ್ತೆಯಾದ ಕಾಡಾನೆಯು ಒಂದೆಡೆ ನಿಲ್ಲದೇ ನೇರಲಕಟ್ಟೆ, ಕುಂಬಾರಹಳ್ಳಿ,ಶಿರಗುರ,ಸೂಳೇಗುಡ್ಡಕ್ಕೆ ತೆರಳಿತು. ಇದರಿಂದ ಸಿಬ್ಬಂದಿಗಳನ್ನು ಹೈರಾಣಾದರು.ಕೊನೆಗೆ ನೇರಲಮಕ್ಕಿಯ ಕಾನಹಳ್ಳಿ ಅರಣ್ಯ ಪ್ರದೇಶಕ್ಕೆ ಕಾಡಾನ ಚುಚ್ಚುಮದ್ದನ್ನು ನೀಡಿ ರೇಡಿಯೋ ಕಾಲರ್ ಅನ್ನು ಅಳವಡಿಸಿದರು. ಸತತವಾಗಿ ನಾಲ್ಕು ದಿನಗಳಿಂದ ಕಾಡಾನೆಯನ್ನು ಹಿಡಿಯುವ ಹಾಗೂ ರೇಡಿಯೋ ಕಾಲರ್ ಅಳವಡಿಸುವ ಕರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಸಾಕಾನೆಗಳಾದ ಭೀಮ,ಶ್ರೀಕಂಠ ಆನೆಗಳನ್ನು ಮತ್ತಿಗೋಡು ಶಿಬಿರಕ್ಕೆ ಹಾಗೂ ಹರ್ಷ,ಧನಂಜಯ, ಶ್ರೀರಾಮ,ಅಯ್ಯಪ್ಪ ಎಂಬ ಆನೆಗಳನ್ನು ದುಬಾರೆಯ ಶಿಬಿರಕ್ಕೆ ವಾಪಸ್ ಕಳುಹಿಸಲಾಯಿತು. ಕಾಡಾನೆಗೆ ರೇಡಿಯೋ ಕಾಲರ್ ಅಳವಡಿಸುವ ಕಾರ್ಯಾಚರಣೆಯಲ್ಲಿ ಡಿಎಫ್‌ಒ ಸೌರಭ್ ಕುಮಾರ್, ಎಸಿಎಫ್ (ಇಟಿಎಫ್) ಉಮಾಪತಿ, ಆರ್‌ಎಫ್‌ಒ ಯತೀಶ್ ಹಾಗೂ ಸಿಬ್ಬಂದಿಗಳು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು