LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಪ್ರತ್ಯೇಕ ಕಳವು ಪ್ರಕರಣ : ಐವರು ಆರೋಪಿಗಳ ಸೆರೆ

ಬೆಂಗಳೂರು: ಪ್ರತ್ಯೇಕ ಪ್ರಕರಣಗಳಲ್ಲಿ ಮನೆಗಳ್ಳತನ, ಸರಗಳ್ಳತ ಮಾಡುತ್ತಿದ್ದ ಕಾನೂನು ಸಂಘರ್ಷಕ್ಕೊಳಗಾದ ಓರ್ವ ಬಾಲಕ ಸೇರಿ ಐವರನ್ನು ನೆಲಮಂಗಲ ಟೌನ್ ಪೊಲೀಸರು ಬಂಧಿಸಿದ್ದಾರೆ.ಅಶೋಕ, ವಿನೋದ, ಶಿವಕುಮಾರ್ ಹಾಗೂ ಸಂತೋಷ್ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ 18 ಲಕ್ಷ ಮೌಲ್ಯದ ಚಿನ್ನಾಭರಣ, ಟಿವಿ ಹಾಗೂ ಲ್ಯಾಪ್‍ಟಾಪ್ ಜೊತೆಗೆ ಎರಡು ಬೈಕ್‍ಗಳನ್ನು ಜಪ್ತಿ ಮಾಡಿದ್ದಾರೆ.

ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮನೆಗಳ್ಳತನ ಪ್ರಕರಣ ಸಂಬಂಧ ಆರೋಪಿಗಳಾದ ಅಶೋಕ ಮತ್ತು ವಿನೋದ್ ಎಂಬ ಅಣ್ಣ ತಮ್ಮಂದಿರನ್ನು ಬಂಧಿಸಲಾಗಿದೆ. ಇವರಿಂದ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಸರಕಳ್ಳತನಕ್ಕೆ ಸಂಬಂಧಿಸಿದ ಸರ ಹಾಗೂ ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರು ಈ ಹಿಂದೆ ಕೂಡ 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿರುವುದು ಕಂಡು ಬಂದಿದೆ. ಜೈಲಿಗೆ ಹೋಗಿ ಬಂದಿದ್ದರೂ ಸರಗಳ್ಳತನ, ಮನೆಗಳ್ಳತನ ಮುಂದುವರೆಸಿದ್ದರು ಎಂದರು.

ವಿಲಾಸಿ ಜೀವನಕ್ಕಾಗಿ ಹಾಗೂ ಮಾಡಿದ ಸಾಲ ತೀರಿಸಲು ಮನೆಗಳ್ಳತನ ಹಾಗೂ ನೆಲಮಂಗಲ ಟೌನ್, ರಾಜಾನುಕುಂಟೆ, ಬೆಂಗಳೂರು ನಗರ, ಕನಕಪುರ, ತಾವರೆಕೆರೆ ಮುಂತಾದ ಕಡೆ ಸರಗಳ್ಳತನ ಮಾಡಿ, ಅವುಗಳನ್ನು ಅಟಿಕಾ ಗೋಲ್ಡ್‍ನಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿ ಶಿವಕುಮಾರ್ ಹಾಗೂ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಬಂಧಿಸಲಾಗಿದೆ. ನೆಲಮಂಗಲ ಟೌನ್ ಠಾಣಾ ವ್ಯಾಪ್ತಿಯ ಬಸವನಹಳ್ಳಿ ಬಳಿ ಮಹಿಳೆಯ ಸರ ಕದಿಯಲು ಪ್ರಯತ್ನಿಸುತ್ತಿದ್ದಾಗ ಆರೋಪಿ ಸಂತೋಷ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಹೇಳಿದರು.

ಶೋಕಿ ಜೀವನ ಹಾಗೂ ವಿವಿಧ ಆಸೆಗಳಿಗೆ ಚಿಕ್ಕ ವಯಸ್ಸಿನಲ್ಲಿಯೇ ಕಳ್ಳತನದ ಹಾದಿ ಹಿಡಿದು ಜೈಲಿಗೆ ಹೋಗಿ ಬಂದರೂ ಕೂಡ ಬದಲಾಗದೇ ಮತ್ತೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದವರನ್ನು ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಬಂಧಿಸಿದ ನೆಲಮಂಗಲ ಟೌನ್ ಪೊಲೀಸರಾದ ಇನ್ಸ್‍ಪೆಕ್ಟರ್ ರಾಕೇಶ್, ಪಿಎಸ್‍ಐಗಳಾದ ಜಯಂತಿ, ನಂಜಯ್ಯ, ಧನರಾಜ್ ಹಾಗೂ ಸಿಬ್ಬಂದಿಗಳನ್ನು ಎಸ್.ಪಿ ಮಲ್ಲಿಕಾರ್ಜುನ ಬಾಲದಂಡಿ ಅಭಿನಂದಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು