LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಪ್ರತ್ಯೇಕ ಅಪಘಾತ ಪ್ರಕರಣ ಐವರು ಸಾವು

ಬೆಂಗಳೂರು: ನಿನ್ನೆ ರಾತ್ರಿ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಐವರು ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ.
ರಾಜಾಜಿನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಜಾಜಿನಗರ ಬ್ರಿಡ್ಜ್ ಕೆಳಗೆ ಸಿಮೆಂಟ್ ಮಿಕ್ಸರ್ ಮಿನಿ ಲಾರಿ ಒಳಗೆ ಕುಳಿತಿದ್ದ ಕೆಲಸಗಾರ ಚಾಲಕ ತಕ್ಷಣ ಬ್ರೇಕ್ ಹಾಕಿದ ಕಾರಣ ಹಿಂಬದಿ ಕುಳಿತಿದ್ದ ಛತ್ತೀಸ್‌ಗಡದ ದೀಪಕ್ ೧೭ ವರ್ಷದ ಯುವಕ ಕೆಳಗೆ ಬಿದ್ದ ಪರಿಣಾಮ ಮಿನಿ ಲಾರಿಯಲ್ಲಿ ಹಿಂಬದಿ ಅಳವಡಿಸಿದ್ದ ಟ್ರಾಲಿ ಆತನ ತಲೆಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುತ್ತಾನೆ.
ರಾಜಾಜಿನಗರ ಸಂಚಾರಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದು ಅಪಘಾತ ಪ್ರಕರಣ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ದಾಸರಹಳ್ಳಿ ಬಳಿ ಕೆಎಸ್‌ಆರ್‌ಟಿಸಿ ಬಸ್ ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ವ್ಯಕ್ತಿ ಮೃತಪಟ್ಟಿರುತ್ತಾನೆ.
ತಿಮ್ಮರಾಜು ಎಳನೀರು ವ್ಯಾಪಾರಿ ೨೫ ವರ್ಷದವನಾಗಿದ್ದು ನಿನ್ನೆ ರಾತ್ರಿ ೧೦:೦೦ ಸುಮಾರಿಗೆ ಟಿ ದಾಸರಹಳ್ಳಿ ಜಂಕ್ಷನ್ ಬಳಿ ಅಪಘಾತಕ್ಕೀಡಾಗಿ ಮೃತಪಟ್ಟಿರುತ್ತಾನೆ.
ಪೀಣ್ಯ ಸಂಚಾರಿ ಪೊಲೀಸರು ಅಪಘಾತ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿರುತ್ತಾರೆ. ಮತ್ತು ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ನಲ್ಲೂರು ಬಳಿ ಕ್ಯಾಂಟರ್ ಗಾಡಿ ಮೋಟಾರ್ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ರಾಜಪ್ಪ ೬೦ ವರ್ಷದ ವ್ಯಕ್ತಿ ಮೃತಪಟ್ಟಿರುತ್ತಾರೆ, ರಾತ್ರಿ ೭:೦೦ ಸುಮಾರಿಗೆ ಅಪಘಾತ ಸಂಭವಿಸಿರುತ್ತದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕ್ಯಾಲೆಂಡನಹಳ್ಳಿ ಬಳಿ ಮೋಟರ್ ಬೈಕ್‌ನಲ್ಲಿ ಹೋಗುತ್ತಿದ್ದ ಇಬ್ಬರು ಯುವಕರುಗಳು ಹಿಂಬದಿಯಿAದ ಕ್ಯಾಂಟರ್ ಲಾರಿಗೆ ವೇಗವಾಗಿ ಚಲಾಯಿಸಿ ಸ್ವತಃ ಡಿಕ್ಕಿ ಹೊಡೆದುಕೊಂಡು ಸ್ಥಳದಲ್ಲೇ ಪವನ್ ೨೦ ವಯಸ್ಸಿನ ಯುವಕ ಮೃತಪಟ್ಟರೆ ಅಶೋಕ್ ಹಿಂಬದಿ ಸವಾರ ತೀವ್ರ ತರವಾದ ಗಾಯ ಸಂಭವಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುತ್ತಾನೆ.
ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟಿಯ ಹೆದ್ದಾರಿ ೪೮ ಬೆಂಗಳೂರು ತುಮಕೂರು ರಸ್ತೆಯ ಟಿಸಿಐ ಫ್ಲೆöÊಓವರ್ ಬಳಿ ಬಳಿ ಲಾರಿಗೆ ಮೋಟರ್ ಸೈಕಲ್ ಸವಾರ ಅತಿ ವೇಗವಾಗಿ ಹಿಂಬದಿಯಿAದ ಲಾರಿಗೆ ಡಿಕ್ಕಿ ಹೊಡೆದುಕೊಂಡು ಮಧು ೨೮ ವರ್ಷದ ಯುವಕ ಮೃತಪಟ್ಟರೆ ರಂಗನಾಥ್ ಗಾಯ ಸಂಭವಿಸಿ ಆಸ್ಪತ್ರೆಗೆ ಚಿಕಿತ್ಸೆ ಪಡೆಯುತ್ತಿರುತ್ತಾನೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು