LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಂಚಾರ ಸುಗಮಕ್ಕಾಗಿ ಡ್ರೋನ್‍ಗಳ ಹಾರಾಟ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚಾಗುತ್ತಿರುವ ಸಂಚಾರ ದಟ್ಟಣೆ ನಿಯಂತ್ರಿಸಲು ಸಂಚಾರ ಪೊಲೀಸರು ಹೊಸ ಯೋಜನೆ ಹಾಕಿಕೊಂಡಿದ್ದಾರೆ.ನಗರದಲ್ಲಿ ಇನ್ನು ಮುಂದೆ ಪ್ರತಿ ದಿನವೂ ಡ್ರೋನ್‍ಗಳು ಹಾರಾಡಲಿದ್ದು, ಅವುಗಳ ಮೂಲಕ ಪ್ರಮುಖ ಟ್ರಾಫಿಕ್ ಜಂಕ್ಷನ್ ಸುಗಮಗೊಳಿಸಲು ಸಂಚಾರ ಪೊಲೀಸರು ಮುಂದಾಗಿದ್ದಾರೆ.

ನಗರದಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಹೆಚ್ಚಾಗುತ್ತಿದೆ. ಟೋಯಿಂಗ್ ವಾಹನ ಇಲ್ಲದ ಕಾರಣ ನೋ ಪಾರ್ಕಿಂಗ್ ಕಡೆ ವಾಹನ ಸವಾರರು ವಾಹನ ಪಾರ್ಕ್ ಮಾಡ್ತಿದ್ದಾರೆ. ಮಾರ್ಕೆಟ್ ರಸ್ತೆಗಳು, ಮುಖ್ಯ ಜಂಕ್ಷನ್ ಕನೆಕ್ಟ್ ಆಗೋ ರಸ್ತೆಗಳು, ಸಣ್ಣ ಸಣ್ಣ ರಸ್ತೆಗಳಲ್ಲಿ ಹೇಗೆ ಬೇಕಂತೆ ಹಾಗೆ ವಾಹನ ಪಾರ್ಕ್ ಮಾಡಿ ಹೋಗ್ತಿದ್ದಾರೆ.

ಅಲ್ಲದೇ ಕೆಲ ಮುಖ್ಯ ಜಂಕ್ಷನ್‍ಗಳಲ್ಲಿ ಸಿಗ್ನಲ್ ಬಿಡುವುದರ ಬಗ್ಗೆ ಗೊಂದಲ ಇರುತ್ತೆ. ಒಂದು ಜಂಕ್ಷನ್‍ನಲ್ಲಿ ಯಾವ ರೂಟ್ ನಲ್ಲಿ ಹೆಚ್ಚು ವಾಹನಗಳಿವೆ, ಯಾವ ಸಿಗ್ನಲ್ ಬೇಗ ಬಿಡಬೇಕು, ಸಿಗ್ನಲ್ ಬಿಟ್ಟಾಗ ವಾಹನಗಳನ್ನು ಹೇಗೆ ಕ್ಲಿಯರ್ ಮಾಡೋದು ಅನ್ನೋದನ್ನ ನಿಯಂತ್ರಿಸೋದ್ರಲ್ಲಿ ಸಂಚಾರಿ ಪೊಲೀಸರು ಫೇಲ್ ಆಗುತ್ತಿದ್ದಾರೆ. ಹೀಗಾಗಿ ಡ್ರೋನ್ ಮೂಲಕ ಇದೆಲ್ಲವನ್ನೂ ಗಮನಿಸಿ ಕ್ಲಿಯರ್ ಮಾಡಲು ಸಹಾಯವಾಗಲಿದೆ.

ಡ್ರೋನ್ ಹಾರಿಸಿ ಈ ಎಲ್ಲಾ ಅಂಶಗಳನ್ನು ಗಮನಿಸಿ ಪರಿಹರಿಸಲು ಸಹಾಯವಾಗುತ್ತೆ. ಕೆಲವೊಮ್ಮೆ ಆ್ಯಂಬುಲೆನ್ಸ್ ಟ್ರಾಫಿಕ್‍ನಲ್ಲಿ ಸಿಕ್ಕಿ ಹಾಕಿಕೊಂಡರೆ ವಾಹನ ದಟ್ಟಣೆ ಸುಗಮಗೊಳಿಸಲು ಸಹಾಯವಾಗಲಿದೆ. ಇದರಿಂದ ಪೀಕ್ ಹವರ್ ನಲ್ಲಿ ಸಂಚಾರ ದಟ್ಟಣೆ ಸರಿಪಡಿಸಬಹುದು.

ಆಯಾ ಠಾಣಾ ವ್ಯಾಪ್ತಿಯ ಪ್ರಮುಖ ಜಂಕ್ಷನ್‍ಗಳಲ್ಲಿ ಡ್ರೋನ್‍ಗಳು ಹಾರಾಡಲಿವೆ. ಮೆಜೆಸ್ಟಿಕ್, ಎಂಜಿ ರೋಡ್, ರಾಜಭವನ, ಚಾಲುಕ್ಯ ಸರ್ಕಲ್, ತುಮಕೂರು ರಸ್ತೆ, ಹೆಬ್ಬಾಳ, ಕೋರಮಂಗಲ, ಸಿಲ್ಕ್ ಬೋರ್ಡ್, ಮಾರತ್ತಹಳ್ಳಿ, ಬೆಳ್ಳಂದೂರು ಹೀಗೆ ಯಾವ್ಯಾವ ಜಂಕ್ಷನ್‍ಗಳಲ್ಲಿ ಅತಿ ಹೆಚ್ಚು ಟ್ರಾಫಿಕ್ ಇದೆ ಅಲ್ಲೆಲ್ಲಾ ಡ್ರೋನ್‍ಗಳ ಬಳಕೆ ಮಾಡಿಕೊಳ್ಳಲಾಗುತ್ತೆ. ಡ್ರೋನ್‍ಗಳ ಮೂಲಕ ಪರಿಶೀಲನೆ ನಡೆಸಿ ಕೂಡಲೇ ಸಂಚಾರ ಕ್ಲಿಯರ್ ಮಾಡಲು ಪೊಲೀಸರು ಮುಂದಾಗಿದ್ದಾರೆ. ಸದ್ಯ ಪ್ರಾಯೋಗಿಕವಾಗಿ ಪ್ರಮುಖ ಜಂಕ್ಷನ್‍ಗಳಲ್ಲಿ ಡ್ರೋನ್‍ಗಳು ಹಾರಾಡುತ್ತಿವೆ. ಮುಂದಿನ ದಿನಗಳಲ್ಲಿ ನಿರಂತರವಾಗಿ ಡ್ರೋನ್‍ಗಳು ಹಾರಾಡಲಿವೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು