LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಗ್ರಾಮೀಣ ಪ್ರದೇಶದ ಜಾನಪದ ಕಲೆ ಉಳಿಸಿ ಬೆಳೆಸಬೇಕಾದ್ದು ಅಗತ್ಯ: ಎಲ್ಲಪ್ಪ

ಹೊಸಕೋಟೆ: ದೇಶದಲ್ಲಿ ನಮ್ಮ ಪೂರ್ವಿಕರು ಹುಟ್ಟುಹಾಕಿದ ಜಾನಪದ ಕಲೆಗಳನ್ನ ಉಳಿಸಿ ಬೆಳೆಸಬೇಕಾದ್ದು ಗ್ರಾಮೀಣ ಪ್ರದೇಶದ ಜನರ ಆದ್ಯ ಕರ್ತವ್ಯವಾಗಿದೆ ಎಂದು ತಾಲೂಕಿನ ಗಣಗಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಲ್ಲಪ್ಪ ಹೇಳಿದರು.

ಅವರು ತಾಲೂಕಿನ ಗಡಿಭಾಗವಾದ ಗುಂಡೂರು ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ರಾಜೀವ್‍ಗಾಂಧಿ ಯುವಕರ ಸಾಂಸ್ಕøತಿಕ ಕಲಾ ಸಂಘ ಮತ್ತು ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಏರ್ಪಡಿಸಿದ್ದ ಗಡಿನಾಡು ಸಾಂಸ್ಕøತಿಕ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹಿಂದೆ ಸಹಸ್ರಾರು ಜಾನಪದ ಕಲೆಗಳು ಅಸ್ತಿತ್ವದಲ್ಲಿದ್ದಾಗ್ಯೂ ಸಹ ಇಂದಿನ ಜೀವನಶೈಲಿ ಬದಲಾವಣೆ, ನಗರೀಕರಣದ ಪ್ರಭಾವ ಗ್ರಾಮೀಣ ಪ್ರದೇಶಗಳಿಗೂ ವ್ಯಾಪಿಸುತ್ತಿರುವುದು ಹಾಗೂ ಅತಿಯಾದ ದೂರದರ್ಶನ, ಸಾಮಾಜಿಕ ಜಾಲತಾಣಗಳ ಆಕರ್ಷಣೆಯಿಂದಾಗಿ ಬೆಳವಣಿಗೆ ಕುಂಠಿತಗೊಂಡಿರುವುದು ವಿಷಾದನೀಯ.

ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಇವುಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಯುವಕರಲ್ಲಿ ಆಸಕ್ತಿ ಮೂಡಿಸಬೇಕಾದ್ದು ಅತ್ಯವಶ್ಯವಾಗಿದೆ. ಈ ದಿಶೆಯಲ್ಲಿ ಕಲೆ ಮತ್ತು ಸಂಸ್ಕøತಿಯ ಬೆಳವಣಿಗೆಗೆ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿವೆ.ಪ್ರದೇಶವಾರು ವಿವಿಧ ಸಮುದಾಯಗಳು ವಿಶೇಷ ಸಾಂಸ್ಕೃತಿಕ ಕಲೆಗಳನ್ನು ಅಭ್ಯಾಸ ಮಾಡಿಕೊಂಡಿದ್ದು ಅನೇಕ ಪ್ರದೇಶಗಳಲ್ಲಿ ಜೀವಂತವಾಗಿರುವ ಕಲೆಗಳನ್ನು ಉಳಿಸಿ ಬೆಳೆಸುವ ಬಗ್ಗೆ ಗಮನಹರಿಸಬೇಕು.

ಈ ನಿಟ್ಟಿನಲ್ಲಿ ಕಲಾ ಪೋಷಕರು ಜವಾಬ್ದಾರಿಯುತ ಪಾತ್ರ ನಿರ್ವಹಿಸಿ ಸಾಂಸ್ಕೃತಿಕ ಕಲೆಗಳ ಪರಿಚಯ ಮಾಡಬೇಕು. ಭಾರತದಲ್ಲಿಯೇ ಪ್ರಸ್ತುತಿಯಲ್ಲಿದ್ದ ಸಾವಿರಾರು ಸಾಂಸ್ಕೃತಿಕ ಕಲೆಗಳಿಗೆ ಮರುಜನ್ಮ ನೀಡುವ ಕೆಲಸವನ್ನು ಜನರು ಸದಾ ಕಾಲ ಮಾಡಿ ನಶಿಸಿಹೋಗದಂತೆ ಎಚ್ಚರವಹಿಸಬೇಕು. ಇದರಿಂದ ಮಾತ್ರ ಇಂತಹ ಕಾರ್ಯಕ್ರಮಗಳು ಸಾರ್ಥಕವಾಗಲಿದೆ ಎಂದರು.

ಗಡಿನಾಡು ಉತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳಾದ ಸುಗಮ ಸಂಗೀತ, ಸಮೃತ್ಯ ಜಾನಪದ ನೃತ್ಯ, ಕಂಸಾಳೆ, ಕೋಲಾಟ, ರಂಗಗೀತೆ, ಕನ್ನಡ ಗೀತೆ, ಭರತನಾಟ್ಯ, ಶಿವ ತಾಂಡವ ನೃತ್ಯ ನಡೆಯಿತು.ಯಲ್ಲರೆಡ್ಡಿ, ನಾರಾಯಣಸ್ವಾಮಿ, ತಿಮ್ಮರಾಯಪ್ಪ, ಧನಲಕ್ಷ್ಮಿ, ಶೇಖರ್, ಕಲಾವಿದ ಎಚ್ ಕೃಷ್ಣಪ್ಪ, ದೇವರಾಜ್, ಅಶ್ವಿನಿ, ಪ್ರಕಾಶ್, ಮೂರ್ತಿ, ರಾಜೀವ್‍ಗಾಂಧಿ ಯುವಕರ ಸಾಂಸ್ಕøತಿಕ ಕಲಾ ಸಂಘದ ಕಾರ್ಯದರ್ಶಿ ಗೋವಿಂದರಾಜ್, ಡಿ.ವಿ.ಭಾರತಿ ಇನ್ನಿತರರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು