LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಫುಟ್‌ಪಾತ್ ತೆರವು, ವೈಟ್ ಟಾಪಿಂಗ್ ಕಾಮಗಾರಿ ಹಿನ್ನೆಲೆ

ಕೆ.ಆರ್. ಮಾರ್ಕೆಟ್ ಮೇಲ್ಸೇತುವೆ ಬಂದ್


ಬೆಂಗಳೂರು: ಕೆ.ಆರ್. ಮಾರ್ಕೆಟ್ ಮೇಲ್ಸೇತುವೆಯ ಚಾಮರಾಜಪೇಟೆ ತಿರುವಿನ ರಸ್ತೆ ಮುಂದಿನ ಮೂರು ತಿಂಗಳ ಕಾಲ ಬಂದ್ ಆಗಲಿದೆ. ಸುಲ್ತಾನ್ ರಸ್ತೆಯಲ್ಲಿ  ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ.ಈ ಮೇಲ್ಸೇತುವೆ ಮೂಲಕ ಪ್ರತಿದಿನ ವಿಕ್ಟೋರಿಯಾ ಆಸ್ಪತ್ರೆ, ಮಿಂಟೋ ಆಸ್ಪತ್ರೆ, ವಾಣಿವಿಲಾಸ ಆಸ್ಪತ್ರೆ, ಚಾಮರಾಜಪೇಟೆ, ಬಸವನಗುಡಿ ಸೇರಿದಂತೆ ಹಲವು ಭಾಗಗಳಿಗೆ ಸಾವಿರಾರು ವಾಹನಗಳು ಸಂಚರಿಸುತ್ತಿದ್ದವು. ರಸ್ತೆ ಬಂದ್ ಆಗಿರುವುದರಿಂದ ವಾಹನ ಸವಾರರು ಮಧ್ಯದಲ್ಲೇ ವಾಪಸ್ ತೆರಳಿ ಪರ್ಯಾಯ ಮಾರ್ಗ ಬಳಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಮುಂದಿನ ಕೆಲವು ತಿಂಗಳು ಈ ಭಾಗದಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚುವ ಸಾಧ್ಯತೆ ಇದೆ. ಇದರ ನಡುವೆ ಕೆ.ಆರ್. ಮಾರ್ಕೆಟ್‌ನಲ್ಲಿ ಬೃಹತ್ ತೆರವು ಕಾರ್ಯಾಚರಣೆಯೂ ಆರಂಭವಾಗಿದೆ. ಜಿಬಿಎ ಅಧಿಕಾರಿಗಳು ಪ್ಲೆöÊಓವರ್ ಕೆಳಭಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಅಂಗಡಿಗಳನ್ನು ತೆರವುಗೊಳಿಸಲು ಮುಂದಾಗಿದ್ದಾರೆ. ಮೂರು ಜೆಸಿಬಿಗಳ ಮೂಲಕ ಕಾರ್ಯಾಚರಣೆ ನಡೆಯುತ್ತಿದ್ದು, ಸುಮಾರು 20ರಿಂದ 25 ಅಂಗಡಿಗಳನ್ನು ತೆರವುಗೊಳಿಸಲಾಗುತ್ತಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST