LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kolar

ಕೋಲಾರದಲ್ಲಿ ಭಾರತ್ ಜೋಡೋ ಯುವ ಸಂಘಗಳ ರಚನೆಗೆ ಚಾಲನೆ


ಕೋಲಾರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಭಾರತ್ ಜೋಡೋ ಯುವ ಸಂಘಗಳ ರಚನೆ ಪ್ರಕ್ರಿಯೆಗೆ ಕೋಲಾರ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದ್ದು, ಈ ತಿಂಗಳ ಅಂತ್ಯದೊಳಗೆ ಅಗತ್ಯ ಕಾರ್ಯಕಾರಿ ಸಮಿತಿಗಳನ್ನು ರಚಿಸಲು ಅರ್ಹ ಯುವಜನರನ್ನು ಶೀಘ್ರವಾಗಿ ನೋಂದಾಯಿಸಬೇಕೆAದು ಕೋಲಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಪ್ರವೀಣ್ ಪಿ ಬಾಗೇವಾಡಿರವರು ಸೂಚನೆ ನೀಡಿದ್ದಾರೆ.
ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯದಾದ್ಯಂತ ಒಟ್ಟು 10,000 ಯುವ ಸಂಘಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸರಾಸರಿ 6000 ಸಂಘಗಳನ್ನು ಹಾಗೂ ನಗರ ವಾರ್ಡ್ ಗಳ ವ್ಯಾಪ್ತಿಯಲ್ಲಿ ಸರಾಸರಿ 4000 ಸಂಘಗಳನ್ನು ರಾಜ್ಯ ಸರ್ಕಾರದಿಂದ ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಸದರಿ ಯೋಜನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮುಖಾಂತರ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ. ಈ ಸಂಘಗಳಿಗೆ ಸರ್ಕಾರ ಒಂದು ಸಾವಿರ ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದು, ಪ್ರತಿ ಸಂಘದ ಕಾರ್ಯಚಟುವಟಿಕೆಗಳಿಗೆ ತಲಾ 10 ಲಕ್ಷ ರೂ. ಅನುದಾನ ನೀಡಲಾಗುತ್ತಿದೆ.ಇದರ ಭಾಗವಾಗಿ ಕೋಲಾರ ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ?ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲಾಗುತ್ತಿದೆ. ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಾಸರಿ 4000 ಜನಸಂಖ್ಯೆಗೆ ಒಂದರಂತೆ ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ತಿಳಿಸಲಾಗಿದ್ದು, 
ಹೆಚ್ಚಿನ ಯುವ ಜನರನ್ನು ನೊಂದಾಯಿಸಲು ವ್ಯಾಪಕವಾಗಿ ಪ್ರಚಾರ ಮಾಡಲು ಗ್ರಾಮ ಪಂಚಾಯತಿಗಳಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸೂಚಿಸಿದ್ದಾರೆ. ಭಾರತ್ ಜೋಡೋ ಯುವ ಸಂಘದ ಮುಖ್ಯ ಉದ್ದೇಶಗಳು: ಭಾರತ್ ಜೋಡೋ ಯುವ ಸಂಘ ರಚನೆ ಸರ್ಕಾರದ ಕನಸಿನ ಯೋಜನೆಯಾಗಿದ್ದು, ಯುವಜನರ ಸಬಲೀಕರಣ ಮಾಡುವುದು ಇದರ ಮುಖ್ಯ ಉದ್ದೇಶವಾಗಿದೆ. ಅದಕ್ಕಾಗಿ ಯುವಕರಲ್ಲಿ ನಾಯಕತ್ವ ಬೆಳೆಸುವುದು ಮತ್ತು ಕೌಶಲ್ಯ ಅಭಿವೃದ್ಧಿಪಡಿಸುವುದು, ಕ್ರೀಡೆ, ಆರೋಗ್ಯ ಮತ್ತು ದೈಹಿಕ ಕ್ಷಮತೆಯನ್ನು ಉತ್ತೇಜಿಸುವುದು, ಸಂವಿಧಾನದ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವುದು. ಪರಿಸರ ಮತ್ತು ಪ್ರಕೃತಿಯನ್ನು ರಕ್ಷಿಸಿ ಸಂರಕ್ಷಿಸುವುದು, ಸಾಮಾಜಿಕ ಸೌಹಾರ್ದತೆ ಮತ್ತು ಸಹಬಾಳ್ವೆಯನ್ನು ಬೆಳೆಸುವುದು. ಸ್ಥಳೀಯ ಅಭಿವೃದ್ಧಿಯಲ್ಲಿ ಯುವಕರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಸದ್ದುದೇಶವನ್ನು ಹೊಂದಿದೆ. ಯುವ ಸಂಘಗಳ ನೋಂದಣಿ ಪ್ರಕ್ರಿಯೆ: ಭಾರತ್ ಜೋಡೋ ಯುವ ಸಂಘದಲ್ಲಿ 16 ರಿಂದ 35 ವರ್ಷದೊಳಗಿನ ಯುವಕ-ಯುವತಿಯರು ನೊಂದಣಿ ಮಾಡಿಕೊಂಡು ಸದಸ್ಯರಾಗಬಹುದಾಗಿದೆ. ನೋಂದಣಿಗೆ ಆಧಾರ್ ಕಾರ್ಡ್ ಕಡ್ಡಾಯವಾಗಿದ್ದು, ನೋಂದಣಿ ಶುಲ್ಕ 10/- ಆಗಿರುತ್ತದೆ. ಪ್ರತಿ ಸಂಘದ ರಚನೆಗೆ ಕನಿಷ್ಠ 100 ಯುವ ಸದಸ್ಯರಿರಬೇಕು. ಗರಿಷ್ಠ ಸಂಖ್ಯೆಗೆ ಮಿತಿ ಇರುವುದಿಲ್ಲ. ಈ ಸಂಘಗಳನ್ನು ಸೊಸೈಟೀಸ್ ರಿಜಿಸ್ಟ್ರೇಷನ್ ಆಕ್ಟ್ ಅಡಿಯಲ್ಲಿ ನೋಂದಾಯಿಸಿ, ಪ್ರತ್ಯೇಕ ಬ್ಯಾಂಕ್ ಖಾತೆಯನ್ನು ತೆರೆಯಲಾಗುತ್ತದೆ. ಅರ್ಜಿದಾರರು ಆಯಾ ಗ್ರಾಮ ಪಂಚಾಯಿತಿ ನಿವಾಸಿಯಾಗಿರಬೇಕು. ಒಬ್ಬ ವ್ಯಕ್ತಿಯು ಒಂದು ಸಂಘಕ್ಕೆ ಮಾತ್ರ ಸದಸ್ಯರಾಗಲು ಅವಕಾಶವಿರುತ್ತದೆ.ಅರ್ಜಿ ಸಲ್ಲಿಸುವ ವಿಧಾನ:  ಅರ್ಹ ಯುವಕ-ಯುವತಿಯರು ತಮ್ಮ ಮೊಬೈಲ್ ಮೂಲಕ bjys.karnataka.gov.in     ವೆಬ್‌ಸೈಟ್‌ಗೆ ಭೇಟಿ ನೀಡಿ ನೇರವಾಗಿ ನೋಂದಾಯಿಸಿಕೊಳ್ಳಬಹುದು. ಅಥವಾ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ನಾಗರಿಕ ಸೇವಾ ಕೇಂದ್ರಗಳ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಕೋಲಾರ ಜಿಲ್ಲೆಯ ಗರಿಷ್ಠ ಸಂಖ್ಯೆಯ ಯುವಜನರು ತಕ್ಷಣವೇ ನೋಂದಾಯಿಸಿಕೊAಡು, ಈ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕರೆ ನೀಡಿದ್ದಾರೆ. 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ AI  ಯುಗಕ್ಕೆ ಸಜ್ಜಾಗುತ್ತಿರುವ CA ವೃತ್ತಿ: ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರಿಂದ SAMVAADA 2026 ಉದ್ಘಾಟನೆಅತ್ಯುತ್ತಮ ತನಿಖಾ ಪತ್ರಕರ್ತ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಬಿನೀಶ್ ಥಾಮಸ್ ಆಯ್ಕೆಸಕ್ಕರೆ ಬೆಲೆ ಏರಿಕೆಗೂ ಎಥೆನಾಲ್ ಬಳಕೆಗೂ ಸಂಬಂಧವಿಲ್ಲ: ಕೇಂದ್ರ ಸ್ಪಷ್ಟನೆಕೋಲಾರದಲ್ಲಿ ಭಾರತ್ ಜೋಡೋ ಯುವ ಸಂಘಗಳ ರಚನೆಗೆ ಚಾಲನೆವಿಶ್ವ ಬ್ಯಾಡ್ಮಿಂಟನ್‌ನಲ್ಲಿ ಸಿಂಧು, ಆಯುಷ್ ಸವಾಲು ಅಂತ್ಯಸೋತರೂ ಟೀಮ್ ಇಂಡಿಯಾದ ಸೆಮಿಫೈನಲ್ ಆಸೆ ಜೀವಂತ!`ಪ್ರೇಮದ ಊರಲಿ’ ಚಿತ್ರದ ಸುಂದರ ಗೀತೆ ರಿಲೀಸ್: ಕಣ್ಮನ ಸೆಳೆದ ತಪಸ್ವಿನಿ ಪೂಣಚ್ಚ-ಶ್ರೀರಾಮ್ ಜೋಡಿಮಹಿಪತಿದಾಸರು ಚಿತ್ರ ವೀಕ್ಷಿಸಿದ ಗಣ್ಯರು 20 ವರ್ಷಗಳ ನಂತರ ರಂಗಭೂಮಿ ಅಖಾಡಕ್ಕಿಳಿದ ರಾಜೇಶ್ ನಟರಂಗ!