LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಅರ್ಹರಿಗೆ ನಿಮ್ಮ ಮತ ನೀಡಿ: ಮಾಜಿ ಸಿಎಂ ವೀರಪ್ಪ ಮೊಯ್ಲಿ

ದೇವನಹಳ್ಳಿ: ಅರ್ಹರಿಗೆ ನಿಮ್ಮ ಮತ ನೀಡುವುದು ಬಹುಮುಖ್ಯ ಇಲ್ಲಾವಾದಲ್ಲಿ ದೇಶದಲ್ಲಿ ಪ್ರಧಾನಿ ಮೋದಿ ಅವರು ಕೇವಲ ಅಬ್ಬರದ ಪ್ರಚಾರದ ಮೂಲಕ ಜನರಲ್ಲಿ ಮೋದಿಯವರು ಪ್ರಧಾನಿಯಾಗಲು ಬಿಟ್ಟರೆ ಅನ್ಯರು ಯಾರು ಅರ್ಹರಿಲ್ಲ ಎಂಬ ಭ್ರಮೆಯನ್ನು ಮೂಡಿಸುತ್ತಿದ್ದಾರೆ ,ಅರ್ಹರಿಗೆ ನಿಮ್ಮ ಮತದಾನದ ಮೂಲಕ ಮೋದಿಯನ್ನು ಈ ಬಾರಿ ಸೋಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದರು.

ದೇವನಹಳ್ಳಿ ತಾಲೂಕಿನ ಯರ್ತಿಗಾನಹಳ್ಳಿಯ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಕಾಂಗ್ರೇಸ್ ಮುಖಂಡರಾದ ಕನ್ನಮಂಗಲ ಕೆ.ಸಿ ಮಂಜುನಾಥ್ ಮತ್ತು ಮಾಳಿಗೇನಹಳ್ಳಿ ನಾಗೇಗೌಡರ ನಿವಾಸದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷರಾಮಯ್ಯ ಪರವಾಗಿ ಮತಯಾಚಿಸಿ ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ ಗ್ಯಾರಂಟಿ ಯೋಜನೆಗಳು ಬಡವರಿಗೆ ಎಷ್ಟು ಅನುಕೂಲವಾಗಿದೆ ಎಂದು ಜನರಿಗೆ ತಿಳಿದಿದೆ ಅದನ್ನು ಬಿಜೆಪಿಯವರು ಅವಹೇಳನ ಮಾಡುವ ಅವಶ್ಯಕತೆ ಇಲ್ಲ ಹಾಗೂ ಕಾಂಗ್ರೇಸ್ ಪಕ್ಷದ ಕುರಿತು ಮಾತಾನಾಡುವುದಕ್ಕೆ ವಿಷಯ ಸಿಗದ ಕಾರಣ ಅಪಪ್ರಚಾರ ಮಾಡುವುದೇ ಅವರ ಕೆಲಸ ಎಂದು ಹೀಯಾಳಿಸಿದರು.

ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿ ರಾಜ್ಯದಲ್ಲಿ ಐದು ಗ್ಯಾರಂಟಿಗಳ ಯೋಜನೆ ಅನುಷ್ಠಾನ ಗೊಳಿಸಿರುವ ಸಿದ್ದರಾಮಯ್ಯ ನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನರ ಆಶೋತ್ತರಗಳಿಗೆ ಸ್ಪಂದಿಸಿ ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದ್ದೇವೆ ಅದರಂತೆ ಕೇಂದ್ರದ ಗ್ಯಾರಂಟಿಗಳ ಉಪಯೋಗ ಪಡೆಯಬೇಕಾದರೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು ಜೊತೆಯಲ್ಲಿ ನಮ್ಮ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯ ನವರಿಗೆ ನಿಮ್ಮೆಲ್ಲರ ಮತ ಹಾಕಿ ದೆಹಲಿಗೆ ಕಳಿಸುವ ಕೆಲಸ ಮಾಡಬೇಕಿದೆ ಎಂದು ಹೇಳಿದರು.

ಕಾಂಗ್ರೇಸ್ ಪಕ್ಷದ ಮುಖಂಡ ಕೆ.ಸಿ ಮಂಜುನಾಥ್ ಮಾತನಾಡಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಯೋಜನೆ ಪಡೆದು ಅನುಕೂಲ ಪಡೆದಂತೆ ಕೇಂದ್ರದಿಂದಲೂ ಅನೇಕ ಯೋಜನೆಗಳು ಜನರಿಗೆ ತಲುಪಬೇಕಾದರೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಮುನಿನರಸಿಂಹಯ್ಯ, ವಿ. ಶಾಂತಕುಮಾರ್, ಪ್ರಸನ್ನಕುಮಾರ್, ಎಸ್ ಜಿ ಮಂಜುನಾಥ್, ಸೋಮಣ್ಣ, ಲಕ್ಷ್ಮೀ ಕಾಂತ, ನರಸಿಂಹಮೂರ್ತಿ, ದುಬೈ ಮಂಜುನಾಥ್ ಬಿದಲೂರು ಎಸ್ ಪಿ ಮುನಿರಾಜು, ಕೆ.ಆರ್.ನಾಗೇಶ್, ನಾಗೇಗೌಡ, ಕೋಡುಗುರ್ಕಿ ನಾರಾಯಣಸ್ವಾಮಿ, ರಾಮಚಂದ್ರಪ್ಪ, ಸೇರಿದಂತೆ ಪಕ್ಷದ ಹಲವಾರು ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು