ಮಂಡ್ಯ: ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಅವರ ಧರ್ಮಪತ್ನಿ ಪ್ರಮೀಳಾ ಅವರು ಗುರುವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಪ್ರಮೀಳಾ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಿನ ವಿಜಯನಗರದಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕರ ಹಾಗೂ ಆಪ್ತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 4 ಗಂಟೆಗೆ ಮೃತದೇಹವನ್ನು ಮದ್ದೂರು ತಾಲೂಕಿನ ಹುಟ್ಟೂರಾದ ದೊಡ್ಡರಸಿನಕೆರೆಗೆ ತರಲಾಗುತ್ತದೆ.