ದೆಹಲಿ: ದೇಶದ 14ನೇ ರಾಷ್ಟçಪತಿಯಾಗಿ ಸೇವೆ ಸಲ್ಲಿಸಿದ ರಾಮ್‌ನಾಥ್ ಕೋವಿಂದ್ ಅವರ ಜೀವನಾಧಾರಿತ ಆತ್ಮಕಥೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಅನಾವರಣಗೊಳಿಸಿದರು. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಕಾನ್‌ಪುರ ದೇಹತ್‌ನ ಸಾಧಾರಣ ಕುಟುಂಬದಿAದ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಏರಿದ ರಾಮ್‌ನಾಥ್ ಕೋವಿಂದ್ ಅವರ ಜೀವನ ಯಾನವು ಭಾರತದ ಯುವಜನತೆಗೆ ದೊಡ್ಡ ಪ್ರೇರಣೆಯಾಗಿದೆ ಎಂದು ಬಣ್ಣಿಸಿದರು. ಅಲ್ಲದೆ, ಕೋವಿಂದ್ ಅವರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ, ಈ ಪುಸ್ತಕಕ್ಕೆ ಇಡಲಾಗಿರುವ ಶೀರ್ಷಿಕೆ ಅತ್ಯಂತ ಸೂಕ್ತವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.``ಕೋವಿಂದ್ ಜಿ ಅವರ ಜೀವನವನ್ನು ಒಮ್ಮೆ ಗಮನಿಸಿ. ಅವರು ಕಾನ್‌ಪುರ ದೇಹತ್‌ನ ತೀರಾ ಸಾಧಾರಣ ಕುಟುಂಬದಲ್ಲಿ ಜನಿಸಿದರು. ಅತ್ಯಂತ ಚಿಕ್ಕ ವಯಸ್ಸಿನಲ್ಲೇ ತಾಯಿಯನ್ನು ಕಳೆದು ಕೊಂಡರು. ಇಂತಹ ಆಘಾತಕಾರಿ ಘಟನೆಯಿಂದ ಯಾರು ಬೇಕಾದರೂ ಕುಗ್ಗಿಹೋಗಬಹುದು.