LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ತಾಲ್ಲೂಕು ಕಸಾಪ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

ದೊಡ್ಡಬಳ್ಳಾಪುರ: ಕನ್ನಡ ಭಾಷೆ ಮತ್ತು ಸಾಹಿತ್ಯದ ಅನನ್ಯತೆಯನ್ನು ಉಳಿಸುವ, ಬೆಳೆಸುವ ಮಹಾದಾಸೆಯಿಂದ ಸ್ವಾತಂತ್ರ್ಯ ಪೂರ್ವದಲ್ಲೆ ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಯಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ .ಕೆ.ಆರ್.ರವಿಕಿರಣ್ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕನ್ನಡ ಭಾಷಿಕರು ಆಡಳಿತಾತ್ಮಕವಾಗಿ ಬೇರೆ ಭಾಷೆ ಆಡಳಿತ ಅಧೀನದಲ್ಲಿದ್ದರೂ ಅವರನ್ನು ಭಾಷೆ ಮತ್ತು ಸಾಹಿತ್ಯ ಬಾಂಧವ್ಯದಿಂದ ಒಗ್ಗೂಡಿಸಿ ಕನ್ನಡ ಕಟ್ಟುವ ಕೆಲಸಕ್ಕೆ ಸಹಕಾರಿಯಾಯಿತು ಕನ್ನಡ ಸಾಹಿತ್ಯ ಪರಿಷತ್ತು. ಇಂತಹ ಕನ್ನಡ ಕಟ್ಟು ಕಾರ್ಯಕ್ಕೆ ನೆರವಾಗಿದ್ದು ಮೈಸೂರು ಸಂಸ್ಥಾನದ ನಾಲ್ವಡಿ ಕೃಷ್ಣರಾಜ ಒಡೆಯರ್. ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ 1915ರಂದು ಕನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಗಲು ನಾಲ್ವಡಿ ಕೃಷ್ಣರಾಜ ಒಡೆಯರ್ ಕಾರಣರಾಗಿದ್ದಾರೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಕನ್ನಡದ ಮಹತ್ವದ ಕವಿಗಳ ಕೃತಿಗಳ ಹಕ್ಕು ಸ್ವಾಮ್ಯ ಹೊಂದಿದೆ. ಕನ್ನಡ ನಿಘಂಟು ರಚನೆ ಮತ್ತು ಪರಿಷ್ಕರಣೆಯಲ್ಲಿ ಮಹತ್ವದ ಸಾಧನೆ ಮಾಡಿದೆ. ಉತ್ತಮ ಗ್ರಂಥಾಲಯ ಹೊಂದಿರುವ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಭಾಷೆಯ ಬೆಳವಣಿಗೆಗೆ, ಅಧ್ಯಯನ ಮತ್ತು ಸಂಶೋಧನೆಗೆ ಸಹಕಾರಿಯಾಗಿದೆ. ಪುಸ್ತಕ ಪ್ರಕಟಣೆ, ವಿಚಾರಸಂಕಿರಣಗಳು, ಸಾಹಿತ್ಯ ಸಮ್ಮೇಳನ, ಹಲವು ಪ್ರಶಸ್ತಿ ಮತ್ತು ಪುರಸ್ಕಾರಗಳನ್ನು ಸಾಧಕರಿಗೆ ನೀಡುವ ಮೂಲಕ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಮನಗೆದ್ದಿದೆ. ದತ್ತಿಗಳ ದಾನಿಗಳು, ಆಜೀವ ಸದಸ್ಯರುಗಳನ್ನು ರಾಜ್ಯದ ಎಲ್ಲೆಡೆ ಹೊಂದಿರುವ ಮೂಲಕ ಇಂದು ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಗೆ ಎಂದರು.

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕರಾಗಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕನಸನ್ನು ನನಸು ಮಾಡುವ ಕೆಲಸವನ್ನು ಪರಿಷತ್ತು ಮುಂದೂವರಿಸಿಕೊಂಡು ಹೋಗಬೇಕಾಗಿದೆ. ಕನ್ನಡದ ವಿಚಾರಗಳ ಬಗ್ಗೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವ ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿದೆ. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮಹತ್ವದ ಪಾತ್ರವನ್ನು ವಹಿಸಬೇಕಾಗಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹಾದೇವ್ ಮಾತನಾಡಿ, ಕನ್ನಡಿಗರ ಪ್ರತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳನ್ನು ಎಲ್ಲರಿಗೂ ತಲುಪಬೇಕಾಗಿದೆ. ಶತಮಾನ ಪೂರೈಸಿ ಮುನ್ನಡೆಯುತ್ತಿರುವ ಈ ಸಂಸ್ಥೆ ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಸೀಮಿತಗೊಳ್ಳದೆ, ಕನ್ನಡಿಗರ ಬದುಕು ಬವಣೆಗಳ ಬಗ್ಗೆ ಚಿಂತನೆ ಮಾಡಬೇಕಾಗಿದೆ. ಕನ್ನಡಿಗರ ಮನೆ ಮನೆಗಳಲ್ಲಿ ಕನ್ನಡ ಪ್ರಜ್ಞೆ ಮೂಡಿಸುವ ಕಾರ್ಯವನ್ನು ನಿರಂತರವಾಗಿ ಮಾಡಬೇಕಾಗಿದೆ ಎಂದರು.

ಕವಯಿತ್ರಿ ಆಶಾಗುಡ್ಡದಹಳ್ಳಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ನಮ್ಮ ನಾಡು,ನುಡಿ,ನೆಲ ಮತ್ತು ಜಲ ವಿಚಾರಗಳನ್ನು ಒಳಗೊಂಡಂತೆ ಕನ್ನಡಪರ
ಚಟುವಟಿಕೆಗಳ ಬಗ್ಗೆ ಬೆಳಕು ಚೆಲ್ಲಬೇಕಾಗಿದೆ. ಕನ್ನಡ ನಾಡು ಮತ್ತು ನುಡಿಗೆ ಸಾಹಿತಿಗಳಷ್ಟೆ ಕೊಡುಗೆಯನ್ನು ಕನ್ನಡಪರ ಹೋರಾಟಗಾರರು ನೀಡಿದ್ದಾರೆ ಎಂಬುದನ್ನು ಮರೆಯಬಾರದು. ಕನ್ನಡ ಸಾಹಿತ್ಯ ಪರಿಷತ್ತು ಸದಾ ಜನಸಾಮಾನ್ಯರ ಪರಿಷತ್ತು ಆಗಿ ಕಾರ್ಯ ನಿರ್ವಹಿಸಬೇಕೆಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ಷಫೀರ್, ನವೋದಯ ವಿದ್ಯಾಲಯ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ, ನಾಗದಳ ಸಂಘಟನೆಯ ನಟರಾಜ್, ಕನ್ನಡ ಜಾಗೃತ ವೇದಿಕೆ ಅಧ್ಯಕ್ಷ ನಾಗರಾಜ್, ಬಾಶೆಟ್ಟಿಹಳ್ಳಿ ಪ್ರೇರಣಾ ಸಂಸ್ಥೆಯ ಅಧ್ಯಕ್ಷೆ ನೇತ್ರಾವತಿ, ಪ್ರತಿನಿಧಿ ಮುನಿರತ್ನಮ್ಮ , ಡಾ.ರಾಜ್ ಕುಮಾರ್ ಅಭಿಮಾನಿ ಸಂಘದ ಪರಮೇಶ್ ಮುಂತಾದವರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು