LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ವಿಶ್ವಕಪ್: ದೀಪಾಗೆ ನಾಲ್ಕನೇ ಸ್ಥಾನ

ನವದೆಹಲಿ: ಭಾರತದ ಜಿಮ್ನಾಸ್ಟಿಕ್ಸ್ ತಾರೆ ದೀಪಾ ಕರ್ಮಾಕರ್ ಅವರು ಪ್ಯಾರಿಸ್ ಒಲಿಂಪಿಕ್ಸ್‍ಗೆ ಅರ್ಹತಾ ಕೂಟವಾಗಿದ್ದ ಎಫ್‍ಐಜಿ ಅಪಾರೆಟಸ್ ವಿಶ್ವಕಪ್‍ನಲ್ಲಿ ಮಹಿಳೆಯರ ವಾಲ್ಟ್ ಫೈನಲ್‍ನಲ್ಲಿ ನಾಲ್ಕನೇ ಸ್ಥಾನ ಪಡೆದು ಗಮನ ಸೆಳೆದರು. 30 ವರ್ಷದ ದೀಪಾ, ಕಳೆದ ತಿಂಗಳು ಅಜರ್‍ಬೈಜಾನ್‍ನಲ್ಲಿ ನಡೆದ ವಿಶ್ವಕಪ್‍ನಲ್ಲೂ ನಾಲ್ಕನೇ ಸ್ಥಾನ ಪಡೆದಿದ್ದರು.

ಇಲ್ಲಿ ಕೂಡ 13.333 ಸ್ಕೋರ್‍ನೊಡನೆ ಸ್ವಲ್ಪದರಲ್ಲೇ ಪದಕ ತಪ್ಪಿಸಿಕೊಂಡರು. ಪನಾಮಾದ ನವಾಸ್ ಕಾರ್ಲಾ (13.850) ಚಿನ್ನದ ಪದಕ ಗೆದ್ದರೆ, ಕೊರಿಯಾದ ಅನ್ ಚಾಂಗ್ ಓಕೆ (13.833) ಬೆಳ್ಳಿ ಮತ್ತು ಜಾರ್ಜಿಯಾದ ವೆಲೆಂಟಿನಾ (13.466) ಕಂಚಿನ ಪದಕ ತಮ್ಮದಾಗಿಸಿಕೊಂಡರು. ಪ್ಯಾರಿಸ್ ಒಲಿಂಪಿಕ್ಸ್ ಕ್ವಾಲಿಫೈರ್‍ನ ಅರ್ಹತಾ ಸುತ್ತಿನಲ್ಲಿ ದೀಪಾ ಆರನೇ ಸ್ಥಾನ ಪಡೆದಿದ್ದರು.

ಮೊಣಕಾಲಿನ ಗಾಯಕ್ಕೆ (ಎಸಿಎಲ್) 2017 ಮತ್ತು 2019ರಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ದೀಪಾ, ನಂತರ ಉದ್ದೀಪನ ಮದ್ದು ಸೇವನೆ ಪ್ರಕರಣಕ್ಕೆ ಸಂಬಂಧಿಸಿ 21 ತಿಂಗಳ ನಿಷೇಧ ಅನುಭವಿಸಿದ್ದರು. ಕಣದಲ್ಲಿದ್ದ ಭಾರತದ ಇನ್ನೊಬ್ಬ ಜಿಮ್ನಾಸ್ಟ್ ಪ್ರಣತಿ ನಾಯಕ್ ಅವರು ಫೈನಲ್‍ಗೆ ಅರ್ಹತೆ ಪಡೆಯಲು ವಿಫಲರಾದರು. ಅರ್ಹತಾ ಸುತ್ತಿನಲ್ಲಿ ಅವರು 11ನೇ ಸ್ಥಾನ ಪಡೆಯಲಷ್ಟೇ ಶಕ್ತರಾದರು. ಉಜ್ಬೇಕಿಸ್ತಾನದಲ್ಲಿ ಮೇ 16 ರಿಂದ 19ರವರೆಗೆ ನಡೆಯಲಿರುವ ಏಷ್ಯನ್ ಚಾಂಪಿಯನ್‍ಷಿಪ್, ಪ್ಯಾರಿಸ್ ಒಲಿಂಪಿಕ್ಸ್‍ಗೆ ಅಂತಿಮ ಅರ್ಹತಾ ಟೂರ್ನಿಯಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು