LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಸಾಲ ತಿರುವಳಿಗೆ ಹೋದವರಿಗೆ ವಂಚನೆ

ಬೆಂಗಳೂರು: ಗೃಹ ಸಾಲವನ್ನು ಪೂರ್ಣ ಪಾವತಿ ಮಾಡಲು ಹೋದ ವ್ಯಕ್ತಿಯೊಬ್ಬರು 47 ಲಕ್ಷ ಕಳೆದುಕೊಂಡು ವಂಚನೆಗೊಳಗಾಗಿ ಕೇಂದ್ರ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ನಿರ್ವಿಕ್ ರಾಧೇಶ್ಯಾಮ್ ಮತ್ತು ಗೌರವ್ ಅರೋರ ಎಂಬವರು 47 ಲಕ್ಷ ರೂಪಾಯಿ ವಂಚಿಸಿದ್ದಾಗಿ ಆರೋಪಿಸಿ ಸಂಜಯ್ ಎಂಬುವರು ಕೇಂದ್ರ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದು,ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಬ್ಯಾಂಕ್ ಮೂಲಕ ಸಂಜಯ್ ಗೃಹ ಸಾಲ ತೆಗೆದುಕೊಂಡಿದ್ದರು. ಈ ವಿಚಾರ ತಿಳಿದ ಮ್ಯೂಚುಯಲ್ ಫ್ರೆಂಡ್ ನಿರ್ವಿಕ್ ರಾಧೆ ಶ್ಯಾಮ್, ತನಗೆ ಬ್ಯಾಂಕ್‍ನ ಹಿರಿಯ ಅಧಿಕಾರಿಗಳು ಪರಿಚಯ ಇದ್ದಾರೆ. ಬ್ಯಾಂಕ್ ಲೋನ್ ಸೆಟಲ್‍ಮೆಂಟ್ ಮಾಡಿಸುವುದಾಗಿ ನಂಬಿಸಿ ಗೌರವ್ ಅರೋರ ಎಂಬಾತನನ್ನ ಬ್ಯಾಕ್‍ನ ಲೀಗಲ್ ಲಾಯರ್ ಎಂದು ಪರಿಚಯಿಸಿದ್ದನು.

ಲೀಗಲ್ ಫೀಸ್ ಅಂತ ಸಂಜಯ್ ಅವರಿಂದ 3.50 ಲಕ್ಷ ರೂ. ಪಡೆದಿದ್ದ ಆರೋಪಿಗಳು, ಬಳಿಕ ಮುಂಬೈಗೆ ಕರೆಸಿಕೊಂಡು ಸೆಟಲ್ ಮೆಂಟ್ ಬಗ್ಗೆ ಮಾತುಕತೆ ನಡೆಸಿದ್ದಾರೆ. ಸಂಜಯ್ ಬ್ಯಾಂಕ್‍ಗೆ ಮರುಪಾವತಿಸಬೇಕಾದ ಹಣವನ್ನು ಗೌರವ್ ಅಕೌಂಟ್‍ಗೆ ಪಾವತಿಸಲು ನಿರ್ವಿಕ್ ಹೇಳಿದ್ದ. ಅದರಂತೆ 47.50 ಲಕ್ಷ ರೂ. ಅನ್ನು ಗೌರವ್ ಅರೋರ ಖಾತೆಗೆ ಪಾವತಿಸಿದ್ದಾರೆ.

ಬಳಿಕ ನಿರ್ವಿಕ್ ಮತ್ತು ಗೌರವ್ ಸಂಪರ್ಕಕ್ಕೆ ಸಿಗದೆ ತಲೆಮರೆಸಿಕೊಂಡಿದ್ದಾರೆ. ಬಳಿಕ ತಾನು ವಂಚನೆಗೆ ಸಿಲುಕಿರುವುದು ಖಚಿತವಾಗುತ್ತಿದ್ದಂತೆ ಸಂಜಯ್, ಕೇಂದ್ರ ಸೈಬರ್ ಪೊಲೀಸ್ ಠಾಣೆ ಮೆಟ್ಟಿಲೇರಿ ದೂರು ನೀಡಿದ್ದಾರೆ. ನಿರ್ವಿಕ್ ಮತ್ತು ಗೌರವ್ ಎಂಬವರು ಸುಳ್ಳು ಹೇಳಿ ವಂಚಿಸಿರುವುದಾಗಿ ಸಂಜಯ್ ದೂರಿನಲ್ಲಿ ಆರೋಪಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು