LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಚಿವೆ ನಿರ್ಮಲಾ ಪಿಎ ಹೆಸರಿನಲ್ಲಿ ವಂಚನೆ

ಬೆಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಪ್ತ ಸಹಾಯಕ ಎಂದು ಹೇಳಿಕೊಂಡು ಭಾರತ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್ ಎಂಎಸ್ ಧೋನಿ ಅವರ ಮ್ಯಾನೇಜರ್‍ಗೆ ವಂಚಿಸಿದ್ದು ಈ ಸಂಬಂಧ ಹೆಚ್‍ಎಸ್‍ಆರ್ ಲೇಔಟ್ ಠಾಣೆಗೆ ದೂರು ನೀಡಲಾಗಿದೆ.

ತಿರುಪತಿಯಲ್ಲಿ ಶ್ರೀ ವೆಂಕಟೇಶ್ವರ ದೇವರ ಸ್ಪೆಷಲ್ ದರ್ಶನ ಮಾಡಿಸಿಕೊಡುತ್ತೇನೆ ಎಂದು ಹೇಳಿ ಲಕ್ಷಾಂತರ ರೂ ವಂಚಿಸಿದ್ದು,ಕಳೆದ ವರ್ಷದ ಅಕ್ಟೋಬರ್‍ನಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಎಂಎಸ್ ಧೋನಿ ಅವರ ಮ್ಯಾನೇಜರ್ ಸ್ವಾಮಿನಾಥನ್ ಎಂಬವರಿಗೆ ಬರೋಬ್ಬರಿ ಆರುವರೆ ಲಕ್ಷ ರೂ.ಗಳಷ್ಟು ವಂಚಿಸಲಾಗಿದೆ ಎಂದು ಹೇಳಲಾಗಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪಿಎ ತಾನು ಐಎಎಸ್ ಅಧಿಕಾರಿಯಾಗಿದ್ದು, ತಿರುಪತಿಯಲ್ಲಿ ಹನ್ನೆರಡು ಮಂದಿಗೆ ದೇವರ ವಿಶೇಷ ದರ್ಶನ ಮಾಡಿಸುತ್ತೇವೆ; ರೂಮ್ ವ್ಯವಸ್ಥೆ ಇರುತ್ತದೆ. ಶಿಷ್ಟಾಚಾರದ ಪ್ರಕಾರ ಯಾರನ್ನಾದ್ರೂ ದರ್ಶನಕ್ಕೆ ಕಳಿಸುವ ಅಧಿಕಾರ ತನಗಿದೆ ಎಂದು ಒಬ್ಬಾತ ವಂಚಿಸಿದ್ದಾನೆ.

ಸ್ನೇಹಿತರ ಕುಟುಂಬವನ್ನು ಕಳಿಸುವ ನಿಟ್ಟಿನಲ್ಲಿ ಮೂರು ಲಕ್ಷ ರೂಪಾಯಿ ಹಣವನ್ನು ಧೋನಿ ಅವರ ಮ್ಯಾನೇಜರ್ ಸ್ವಾಮಿನಾಥನ್ ಅವರು ಪೋನ್ ಪೇ ಮಾಡಿದ್ದರು. ಸಾಯಿ ಟ್ರಸ್ಟ್ ಹೆಸರಿಗೆ ಮೂರು ಲಕ್ಷ ಹಣ ಪಡೆದಿರುವ ಆರೋಪವಿದೆ. ಹಣ ಪಡೆದು ಹಿಂತಿರುಗಿಸದ ಹಿನ್ನೆಲೆಯಲ್ಲಿ ಸ್ವಾಮಿನಾಥನ್ ಅವರು ಹೆಚ್‍ಎಸ್‍ಆರ್ ಲೇಔಟ್ ಠಾಣೆಗೆ ದೂರು ನೀಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು