LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಆಚಾರ್ಯ ಪಾಠ ಶಾಲಾ, ಕಲೆ ಮತ್ತು ವಿಜ್ಞಾನ ಕಾಲೇಜಿನಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಬೆಂಗಳೂರಿನ ಬಸವನಗುಡಿಯ ವ್ಯಾಪ್ತಿಯಲ್ಲಿರುವ ಆಚಾರ್ಯ ಪಾಠಶಾಲಾ ಕಲೆ ಮತ್ತು ವಿಜ್ಞಾನ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟದ ಭರವಸೆಯ ಕೋಶದಿಂದ ಲಯನ್ಸ್ ಕ್ಲಬ್ ಬೆಂಗಳೂರು ಪ್ರೈಡ್ ಸಹಯೋಗದೊಂದಿಗೆ ಕೃಷ್ಣಾಂಜಲಿ ಆರ್ಯುವೇದಿಕೆ ಮೂಲಕ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ದಿನಾಂಕ 16-12_2023 ರಂದು ಆಯೋಜಿಸಲಾಯಿತು. ಗಿಡಕ್ಕೆ ನೀರು ಎರೆಯುವುದರ ಮೂಲಕ ಕಾರ್ಯಕ್ರಮನ್ನು ಉದ್ಘಾಟಿಸಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಎ.ಪಿ.ಎಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸಿ.ಎ.ಡಾ.ವಿಷ್ಣುಭರತ್ ಎ.ಎಸ್ ಅವರು ಆಗಮಿಸಿ ಇಂದಿನ ಯುವಕರು ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅನಿವಾರ್ಯ ವಾಗಿದೆ, ಆರೋಗ್ಯವೇ ಭಾಗ್ಯ ಎಂಬ ನಾಣ್ಣುಡಿಯಂತೆ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ತಿಳಿಸಿದರು,

ತಾವೇ ಸ್ವತಃ ತಮ್ಮ ರಕ್ತ ತಪಾಸಣೆ ಮಾಡಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ಮಾದರಿಯಾದರು ನಂತರ ಕಾರ್ಯಕ್ರಮವನ್ನು ಕುರಿತು ಲಯನ್ ಮೋಹನ್ ಕುಮಾರ್ ಅವರು ಇಂದಿನ ವಿದ್ಯಾರ್ಥಿಗಳು ತಮ್ಮ ಆರೋಗ್ಯವನ್ನು ಸದೃಢಗೊಳಿಸಕೊಳ್ಳಬೇಕಾದರೆ ಕನಿಷ್ಠ ಆರು ತಿಂಗಳಿಗೊಮ್ಮೆ ತಮ್ಮ ಆರೋಗ್ಯವನ್ನು ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.

ನಂತರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದಂತಹ ಎ.ಪಿ.ಎಸ್ ಕಲೆ ಮತ್ತು ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಜಯಶ್ರೀ ಅವರು ಆರೋಗ್ಯವೇ ನಮಗೆ ವರ ಇದ್ದ ಹಾಗೆ ಇಂದು ವಿದ್ಯಾರ್ಥಿಗಳು ಹಿಮೋಗ್ಲೋಬಿನ್ ಕಡಿಮೆ ಪ್ರಮಾಣದಲ್ಲಿ ಕಂಡುಬರುತ್ತಿದೆ ಆ ನಿಟ್ಟಿನಲ್ಲಿ ಉಚಿತವಾಗಿ ಆಯೋಜಿಸುವ ಈ ಆರೋಗ್ಯ ತಪಾಸಣೆ ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ತಿಳಿಸಿದರು.

ತದನಂತರ ಸುಶ್ರುತ ಆರ್ಯವೇದ ವೈದ್ಯಕೀಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ.ರಮ್ಯ ಅವರು ವಿದ್ಯಾರ್ಥಿನಿಯರಿಗಾಗಿ' ಮಹಿಳೆಯರ ಸಾಮಾನ್ಯ ಸಮಸ್ಯೆಗಳು ,ಜೀವನ ಶೈಲಿ ಅಸ್ವಸ್ಥೆಗಳು ಮತ್ತು ಪರಿಹಾರಗಳು ' ಎಂಬ ವಿಷಯವನ್ನು ಕರಿತು ವಿಶೇಷ ಉಪನ್ಯಾಸ ನೀಡಿದರು ಕಾರ್ಯಕ್ರಮಕ್ಕೆ ಆಗಮಿಸಿದಂತಹ ಎಲ್ಲ ಗಣ್ಯರನ್ನು ಹೆಲ್ತ್ ಕ್ಲಬ್ ಘಟಕದ ಸಂಚಾಲಕರಾದ ಡಾ.ನರಸಿಂಹ ಪರ್ವತಿಕರ್ ಪ್ರೀತಿಯಿಂದ ಸ್ವಾಗತಿಸಿದರು ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು ಸುಮಾರು 200 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ತಮ್ಮ ಆರೋಗ್ಯವನ್ನು ತಪಾಸಣೆ ಮಾಡಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು