LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಫ್ರೆಂಚ್ ಓಪನ್: ನಗಾಲ್‍ಗೆ ಪ್ರಬಲ ಎದುರಾಳಿ

ಪ್ಯಾರಿಸ್: ಭಾರತದ ಅಗ್ರಮಾನ್ಯ ಸಿಂಗಲ್ಸ್ ಆಟಗಾರ ಸುಮಿತ್ ನಗಾಲ್ ಅವರಿಗೆ ಫ್ರೆಂಚ್ ಓಪನ್ ಟೆನಿಸ್ ಟೂರ್ನಿಯ ಮೊದಲ ಸುತ್ತಿನಲ್ಲಿ ಪ್ರಬಲ ಸವಾಲು ಎದುರಾಗಿದೆ. ಅವರು ಆರಂಭದ ಪಂದ್ಯವನ್ನು ವಿಶ್ವ ಕ್ರಮಾಂಕದಲ್ಲಿ 18ನೇ ಸ್ಥಾನದಲ್ಲಿರುವ ರಷ್ಯಾದ ಆಟಗಾರ ಕರೆನ್ ಕಚನೋವ್ ಎದುರು ಭಾನುವಾರ ಆಡಬೇಕಾಗಿದೆ.

ವಿಶ್ವ ಕ್ರಮಾಂಕದಲ್ಲಿ 94ನೇ ಸ್ಥಾನದಲ್ಲಿರುವ ನಗಾಲ್, ಎಟಿಪಿ ಪ್ರವಾಸದಲ್ಲಿ ಸ್ಥಿರ ಪ್ರದರ್ಶನದ ಕಾರಣ ಗ್ರ್ಯಾಂಡ್‍ಸ್ಲಾಮ್ ಟೂರ್ನಿಗೆ ನೇರ ಪ್ರವೇಶ ಪಡೆದಿದ್ದಾರೆ. 2019ರಲ್ಲಿ ಪ್ರಜ್ಞೇಶ್ ಗುಣೇಶ್ವರನ್ ನಂತರ ಫ್ರೆಂಚ್ ಓಪನ್ ಪ್ರಧಾನ ‘ಡ್ರಾ’ಕ್ಕೆ ನೇರ ಪ್ರವೇಶ ಪಡೆದ ಭಾರತದ ಮೊದಲ ಪುರುಷ ಆಟಗಾರ ಎನಿಸಿದ್ದಾರೆ ನಗಾಲ್.ಕ್ಲೇ ಅಂಕಣದಲ್ಲಿ 26 ವರ್ಷ ವಯಸ್ಸಿನ ಈ ಆಟಗಾರನ ಪ್ರದರ್ಶನ ಅತ್ಯುತ್ತಮ ಮಟ್ಟದಲ್ಲಿಲ್ಲ.

ಮಾಂಟೆಕಾರ್ಲೊ ಮಾಸ್ಟರ್ಸ್ ಟೂರ್ನಿಯಲ್ಲಿ ಮೂರನೇ ಸುತ್ತಿನಲ್ಲಿ ಅವರು ಹೋಲ್ಗರ್ ರೂನ್ ಅವರಿಗೆ ಸೋತಿದ್ದರು. ಮ್ಯಾಡ್ರಿಡ್ ಮತ್ತು ರೋಮ್ ಮಾಸ್ಟರ್ಸ್‍ನಲ್ಲಿ ಆಡಿರಲಿಲ್ಲ. ಕಚನೋವ್, ಫ್ರೆಂಚ್ ಓಪನ್ ಟೂರ್ನಿಯಲ್ಲಿ ಕಳೆದ ವರ್ಷ ಎಂಟರ ಘಟ್ಟ ತಲುಪಿದ್ದರು. ಫೆಬ್ರುವರಿಯಲ್ಲಿ ನಡೆದ ಕತಾರ್ ಓಪನ್ ಟೂರ್ನಿಯಲ್ಲಿ ವಿಜೇತರಾಗಿದ್ದರು. ಈ ವರ್ಷ ಅವರ ಜಯ-ಅಪಜಯದ ದಾಖಲೆ 21-7 ಆಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು