LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಗೆಳೆಯ ಬುಜ್ಜ ಸೂಪರ್ ಸ್ಟಾರ್

ಟಾಲಿವುಡ್ ಮಾತ್ರವಲ್ಲದೆ, ಇಡೀ ಭಾರತ ಕಲ್ಕಿ ಕಲ್ಕಿ 2898 AD ಸಿನಿಮಾಕ್ಕಾಗಿ ಕಾಯುತ್ತಿದೆ. ಒಂದಾದ ನಂತರ ಬಂದು ವಿಶೇಷತೆಗಳನ್ನು ಈ ಸಿನಿಮಾ ಪ್ರೇಕ್ಷಕರ ಮಡಿಲಿಗೆ ಕಾಯುತ್ತಲೇ ಬರುತ್ತಿದೆ. ಈಗ ಇದೇ ಸಿನಿಮಾದಿಂದ ಮತ್ತೊಂದು ವಿಶೇಷವನ್ನು ಅನಾವರಣಗೊಳಿಸಿದೆ ಚಿತ್ರತಂಡ. ಹೌದು, ಪ್ಯಾನ್ ಇಂಡಿಯಾ ಸೂಪರ್ ಸ್ಟಾರ್ ಪ್ರಭಾಸ್ ಅಭಿನಯದ ಕಲ್ಕಿ 2898 AD ಬಿಡುಗಡೆಗೆ ಹೆಚ್ಚು ದಿನಗಳು ಉಳಿದಿಲ್ಲ.

ಹೀಗಿರುವಾಗಲೇ ಇದೇ ಕಲ್ಕಿ ಚಿತ್ರದ ಐದನೇ ಸೂಪರ್ ಸ್ಟಾರ್ ಯಾರು ಎಂಬುದನ್ನು ಕಿರು ವಿಡಿಯೋ ಮೂಲಕ ಅನಾವರಣ ಮಾಡಿದೆ ಚಿತ್ರತಂಡ.
ಆ ಐದನೇ ಸೂಪರ್‍ಸ್ಟಾರ್ ಬೇರಾರು ಅಲ್ಲ, ಬುಜ್ಜಿ ಹೆಸರಿನ ಆಪ್ತ ಸ್ನೇಹಿತ. ಅಂದರೆ, ಬುಜ್ಜಿಯನ್ನು ಭವಿಷ್ಯದ ವಾಹನ ಎಂದೇ ಚಿತ್ರತಂಡ ಹೇಳಿಕೊಂಡು, ಅದರ ಕಿರು ಝಲಕ್‍ಅನ್ನು ಮೇ 22ರಂದು ಅನಾವರಣ ಮಾಡಿದೆ.

ನಿರ್ದೇಶಕ ನಾಗ್ ಅಶ್ವಿನ್, ನಿರ್ಮಾಪಕರಾದ ಸಿ. ಅಶ್ವಿನಿ ದತ್, ಸ್ವಪ್ನಾ ದತ್ ಚಲಸಾನಿ, ಪ್ರಿಯಾಂಕಾ ದತ್ ಚಲಸಾನಿ ಸೇರಿ ಸುಮಾರು ಇಪ್ಪತ್ತು ಸಾವಿರ ಪ್ರೇಕ್ಷಕರು ಮತ್ತು ಮಾಧ್ಯಮದವರ ಸಮ್ಮುಖದಲ್ಲಿ ಹೈದರಾಬಾದ್‍ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಬುಜ್ಜಿಯನ್ನು ಪರಿಚಯಿಸಿದ್ದಾರೆ. ಬುಜ್ಜಿ ಹೆಸರಿನ ಈ ಆಪ್ತ ಗೆಳೆಯ ಚಿತ್ರದ ನಾಯಕ ಭೈರವನ ಅತ್ಯಂತ ನಂಬಿಕಸ್ಥ ಗೆಳೆಯ.

ಈ ಗೆಳೆಯನ ಕುರಿತು ವೈಜಯಂತಿ ನೆಟ್‍ವರ್ಕ್ ಯೂಟ್ಯೂಬ್ ಚಾನಲ್‍ನಲ್ಲಿ ಹೊಸ ವೀಡಿಯೋ ರಿಲೀಸ್ ಮಾಡಿದೆ. ವಿಡಿಯೋದಲ್ಲಿ ಬುಜ್ಜಿ ಹೇಗೆಲ್ಲ ಕೆಲಸ ಮಾಡುತ್ತೆ, ಭವಿಷ್ಯದ ಆಪ್ತ ಸ್ನೇಹಿತ ಎಂದು ಏಕೆ ಕರೆಯಲಾಗುತ್ತದೆ ಎಂಬುದು ಗೋಚರವಾಗುತ್ತದೆ.ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕಲ್ಕಿ 2898 AD ಚಿತ್ರದಲ್ಲಿ ಅಮಿತಾಭ್ ಬಚ್ಚನ್, ಕಮಲ್ ಹಾಸನ್, ಪ್ರಭಾಸ್, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‍ನಡಿ ಅಶ್ವಿನಿ ದತ್ ನಿರ್ಮಿಸಿರುವ ಈ ಚಿತ್ರವನ್ನು ನಾಗ್ ಅಶ್ವಿನ್ ನಿರ್ದೇಶನ ಮಾಡಿದ್ದಾರೆ. ಕಲ್ಕಿ 2898 ಂಆ ಚಿತ್ರವು ಜಗತ್ತಿನಾದ್ಯಂತ ಜೂನ್ 27ರಂದು ಬಿಡುಗಡೆ ಆಗಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು