ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕರ್ನಾಟಕ ಸರ್ಕಾರದ ಉನ್ನತ ಮಟ್ಟದ ನಿಯೋಗವು ನವೆಂಬರ್ 23 ರಿಂದ 25 ರವರೆಗೆ ಜಪಾನ್ ಪ್ರವಾಸ ಕೈಗೊಳ್ಳಲಿದೆ.ನವೆಂಬರ್ 23 ರಂದು ನಗೋಯಾ, ನವೆಂಬರ್ 24 ರಂದು ಒಸಾಕಾ ಹಾಗೂ ನವೆಂಬರ್ 25 ರಂದು ಟೋಕಿಯೊದಲ್ಲಿ ಮುಖ್ಯಮಂತ್ರಿಗಳು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ಪ್ರವಾಸವು ಎರಡು ಪ್ರಮುಖ ಆದ್ಯತೆಗಳನ್ನು ಹೊಂದಿದೆ: ರಾಜ್ಯದಲ್ಲಿ ಜಪಾನ್ ಹೂಡಿಕೆಯನ್ನು ಮತ್ತಷ್ಟು ಬಲಪಡಿಸಲು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸಹಯೋಗದಲ್ಲಿ ಉದ್ಯಮಿಗಳೊಂದಿಗೆ ಸಭೆ ನಡೆಸುವುದು, ಹಾಗೂ ಜಾಗತಿಕ ಮಟ್ಟದಲ್ಲಿ ಮಾದರಿಯಾಗಿರುವ ಜಪಾನ್‌ನ ನಗರ ನಿರ್ಮಾಣ ಪದ್ಧತಿಗಳನ್ನು ಅಧ್ಯಯನ ಮಾಡಲು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಉಃಂ) ತಂಡದೊAದಿಗೆ ನಗರಾಭಿವೃದ್ಧಿ ಯೋಜನೆಗಳಿಗೆ ಭೇಟಿ ನೀಡುವುದು.ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಶ್ರೀ ಎಂ. ಬಿ. ಪಾಟೀಲ್ ಅವರು ಮುಖ್ಯಮಂತ್ರಿಗಳಿಗೆ ಸಾಥ್ ನೀಡಲಿದ್ದು, ಕೈಗಾರಿಕಾ ಸಂವಾದಗಳನ್ನು ಮುನ್ನಡೆಸಲಿದ್ದಾರೆ. ಅಲ್ಲದೆ, ಜಪಾನ್ ಮತ್ತು ದಕ್ಷಿಣ ಕೊರಿಯಾದಲ್ಲಿ (ರಿಪಬ್ಲಿಕ್ ಆಫ್ ಕೊರಿಯಾ) ರಾಜ್ಯದ ಹೂಡಿಕೆ ಪ್ರಚಾರ ಕಾರ್ಯಕ್ರಮಗಳ ನೇತೃತ್ವವನ್ನೂ ವಹಿಸಲಿದ್ದಾರೆ.ಈ ನಿಯೋಗದಲ್ಲಿ ಹಿರಿಯ ಅಧಿಕಾರಿಗಳ ತಂಡ ಇರಲಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಎಂ. ಮಹೇಶ್ವರ್ ರಾವ್ (ಭಾ.ಆ.ಸೇ), ವಾಣಿಜ್ಯ ಮತ್ತು