LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಉತ್ತಮ ಸಾಧನೆ ಮಾಡಿದ ಜಿ.ಹಿತೇಶ್

ದೊಡ್ಡಬಳ್ಳಾಪುರ: ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜಿನ ಎನ್.ಸಿ.ಸಿ ವಿದ್ಯಾರ್ಥಿ ಜಿ.ಹಿತೇಶ್ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮತ್ತು ಪ್ರತಿಭೆಗಾಗಿ ಡಿಜಿ ಎನ್.ಸಿ.ಸಿ ಪ್ರಶಸ್ತಿಗೆ ಪುರಸ್ಕೃತರಾಗಿದ್ದಾರೆ.

ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವ ಎನ್.ಸಿ.ಸಿ ವಿದ್ಯಾರ್ಥಿಗಳಿಗೆ ನೀಡುವ ಪ್ರಶಸ್ತಿ ಇದಾಗಿದೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೆಫ್ಟಿನೆಂಟ್ ಜನರಲ್ ಗುರ್ಬಿರ್ ಪಾಲ್ ಸಿಂಗ್ ಅವರು ಜಿ.ಹಿತೇಶ್ ಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಕಾಡನೂರು ಪಾಳ್ಯ ಗ್ರಾಮದ ಗೋವಿಂದರಾಜು ಮತ್ತು ಲಕ್ಷ್ಮಮ್ಮ ದಂಪತಿಗಳ ಮಗನಾದ ಜಿ.ಹಿತೇಶ್ ದೆಹಲಿಯಲ್ಲಿ 2024 ನೇ ಜನವರಿ 26 ರಂದು ನಡೆದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿದ್ದರು.

ಕರ್ನಾಟಕ ರಾಜ್ಯದ. ಎನ್.ಸಿ.ಸಿ ತಂಡವನ್ನು ಪ್ರತಿನಿಧಿಸಿದ್ದ ಜಿ.ಹಿತೇಶ್ ಶ್ರೀಕೊಂಗಾಡಿಯಪ್ಪ ಕಾಲೇಜು ಎನ್.ಸಿ.ಸಿ ಘಟಕದಿಂದ ಆಯ್ಕೆಯಾಗಿದ್ದರು. ಘಟಂ ಮತ್ತು ತಬಲ ವಾದಕನಾಗಿ ನೂರಾರು ಕಾರ್ಯಕ್ರಮಗಳಲ್ಲಿ ಪ್ರತಿಭೆ ಪ್ರದರ್ಶನ ಮಾಡುವ ಮೂಲಕ ಯುವ ಕಲಾವಿದನಾಗಿ ಹಲವು ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿರುವ ಜಿ.ಹಿತೇಶ್ ಪ್ರಸ್ತುತ. ಡಿಜಿ ಎನ್.ಸಿ.ಸಿ ಪ್ರಶಸ್ತಿಗೂ ಪುರಸ್ಕೃತರಾಗಿದ್ದಾರೆ.

ಜಿ.ಹಿತೇಶ್ ಪ್ರಾಥಮಿಕ ವಿದ್ಯಾಭ್ಯಾಸವನ್ನು ಸರ್ಕಾರಿ ಶಾಲೆಗಳಾದ ಕಾಡನೂರು ಪಾಳ್ಯ ಮತ್ತು ಮದಗೊಂಡನಹಳ್ಳಿ, ಪ್ರೌಢಶಾಲೆಯನ್ನು ಕಾಡನೂರು ಕೈಮರದ ಶ್ರೀರಾಮ ಪ್ರೌಢಶಾಲೆಯಲ್ಲಿ, ಪಿಯುಸಿ ಶಿಕ್ಷಣವನ್ನು ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ಪಡೆದಿದ್ದಾರೆ. ಪ್ರಸ್ತುತ ಬಿ.ಎ ಪದವಿ ವ್ಯಾಸಂಗವನ್ನು ಶ್ರೀ ಕೊಂಗಾಡಿಯಪ್ಪ ಕಾಲೇಜಿನಲ್ಲಿ ನಡೆಸುತ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು