LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಆವತಿಯಿಂದ ಕೆಂಪೇಗೌಡ ಜ್ಯೋತಿ ಜಿಲ್ಲೆಯ ಗರಿಮೆ

ಬೆಂ.ಗ್ರಾ. ಜಿಲ್ಲೆ: ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ದೇವನಹಳ್ಳಿಯ ಆವತಿಯಿಂದ ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಪುರಜ್ಯೋತಿ ಹೋಗುತ್ತಿರುವುದು ಜಿಲ್ಲೆಯ ಹೆಮ್ಮೆಯ ಸಂಗತಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಬಣ್ಣಿಸಿದರು.ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದೇವನಹಳ್ಳಿಯ ಆವತಿ ಗ್ರಾಮದಲ್ಲಿ ಆಯೋಜಿಸಿದ್ದ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಪುರಜ್ಯೋತಿ ರಥಯಾತ್ರೆಗೆ ಆವತಿ ಚನ್ನಕೇಶವ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.ಕೆಂಪೇಗೌಡರು ಕರುನಾಡು ಕಂಡ ಅಪ್ರತಿಮ ದೂರದೃಷ್ಟಿವುಳ್ಳ ನಾಯಕರು. ಸುಮಾರು 500 ವರ್ಷಗಳ ಹಿಂದೆ ಬೆಂಗಳೂರು ನಿರ್ಮಾಣ ಅವರ ಬಹು ದೊಡ್ಡ ಕೊಡುಗೆಯಾಗಿದೆ. ಇಂದಿನ ಬೆಂಗಳೂರು ಕೋಟ್ಯಂತರ ಉದ್ಯೋಗ ಸೃಷ್ಟಿಸುವ ಜತೆಗೆ ಎಲ್ಲ ವರ್ಗದ ಜನರು ಬದುಕು ಕಟ್ಟಿಕೊಳ್ಳಲು ಕೇಂದ್ರವಾಗಿ ಸಾಕಾರವಾಗಿದೆ ಎಂದು ಹೇಳಿದರು.ಅವತಿಯಲ್ಲಿ ಕೆಂಪೇಗೌಡ ವಂಶಸ್ಥರು ನೆಲೆಸಿದ ನಾಡು, ಇಲ್ಲಿಂದ ಜ್ಯೋತಿ ರಥಯಾತ್ರೆಯು ಬೆಂಗಳೂರಿನ ಕೆಂಗೇರಿ ಬಳಿಯ ಕೆಂಪೇಗೌಡ ಬಡಾವಣೆಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಸೇರಲಿದೆ. ಜೊತೆಗೆ ರಾಜ್ಯದ ನಾನಾ ಭಾಗಗಳಿಂದ ಕೆಂಪೇಗೌಡ ಪುರಜ್ಯೋತಿಗಳು ಬರಲಿದ್ದು, ಇದು ರಾಜ್ಯದ ಭಾವೈಕ್ಯತೆ ಸಂಕೇತ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು