LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಚಿತ್ರೀಕರಣದಲ್ಲಿ "ಗೌರಿ"

"ಗೌರಿ" ಚಿತ್ರದ ಮೂಲಕ ನಾಯಕನಾಗುತ್ತಿರುವ ಸರ್ವಜಿತ್ಚಿತ್ರರಂಗ ಪ್ರವೇಶಿಸುತ್ತಿದ್ದಾರೆ.ಅಪ್ಪ ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಗೌರಿ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ.

ಇತ್ತೀಚೆಗೆ ಸಮರ್ಜಿತ್ ಹುಟ್ಟುಹಬ್ಬವನ್ನು ಚಿತ್ರತಂಡದ ಸದಸ್ಯರು ಆಚರಿಸಿದರು. ಸಮರ್ಜಿತ್ ಚಿತ್ರದ , ನಾಯಕಿ ಸಾನ್ಯ ಅಯ್ಯರ್, ನಟಿಯರಾದ ಮಾನಸಿ ಸುಧೀರ್, ಎಸ್ತರ ನರೋನ, ಹಿರಿಯ ಛಾಯಾಗ್ರಾಹಕ ಕೆ.ಕೆ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು
. ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

"ಗೌರಿ" ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಈಗಾಗಲೇ ಚಿಕ್ಕಮಗಳೂರಿನ ರಮಣೀಯ ಸ್ಥಳಗಳಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದೆ. ರವಿವರ್ಮ ಅವರ ಸಾಹಸ ನಿರ್ದೇಶನದಲ್ಲಿ ಸಾಹಸ ದೃಶ್ಯಗಳು ಅದ್ಭುತವಾಗಿ ಮೂಡಿಬಂದಿದೆ.

ಸಮರ್ಜಿತ್ ನಾನು ಅಂದುಕೊಂಡದಕ್ಕಿಂತ ಚೆನ್ನಾಗಿ ಅಭಿನಯಿಸುತ್ತಿದ್ದಾರೆ. ಸಾನ್ಯ ಅವರು ಕೂಡ. ಮುಖ್ಯಮಂತ್ರಿ ಚಂದ್ರು, ಸಿಹಿಕಹಿ ಚಂದ್ರು, ಮಾನಸಿ ಸುಧೀರ್, ಎಸ್ತರ್ ನರೋನ ಮುಂತಾದವರು ನಮ್ಮ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಹಿರಿಯ ಛಾಯಾಗ್ರಾಹಕ ಕೆ.ಕೆ ಛಾಯಾಗ್ರಹಣ ಮಾಡುತ್ತಿದ್ದಾರೆ. ಇದು ಅವರ ನೂರನೇ ಚಿತ್ರ ಎಂದು ಇಂದ್ರಜಿತ್ ಲಂಕೇಶ್ ತಿಳಿಸಿದರು.

ನಾನು ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುವುದಿಲ್ಲ ಎಂದು ಮಾತನಾಡಿದ ಸಮರ್ಜಿತ್ ಲಂಕೇಶ್, ಇಂದು ಚಿತ್ರತಂಡದವರು ನನ್ನ ಹುಟ್ಟುಹಬ್ಬ ಆಚರಿಸಿದ್ದು ಖುಷಿಯಾಗಿದೆ. ಎಲ್ಲರಿಗೂ ಧನ್ಯವಾದ. ಸಾಕಷ್ಟು ತಯಾರಿ ಮಾಡಿಕೊಂಡು ಈ ಚಿತ್ರದಲ್ಲಿ ನಟಿಸುತ್ತಿದ್ದೇನೆ. ಚಿತ್ರ ಚೆನ್ನಾಗಿ ಮೂಡಿಬರುವ ಭರವಸೆ ಇದೆ ಎಂದರು.

ನಾಯಕಿ ಸಾನ್ಯ ಅಯ್ಯರ್ ಚಿತ್ರೀಕರಣದ ಅನುಭವವನ್ನು ಹಂಚಿಕೊಂಡರು. ಮಾನಸಿ ಸುಧೀರ್ ಹಾಗೂ ಎಸ್ತರ್ ನರೋನ ಸಹ ಚಿತ್ರದ ಕುರಿತು ಮಾತನಾಡಿದರು. ಇದು ನನ್ನ ನೂರನೇ ಚಿತ್ರ. ನನ್ನ ಮಗ ನಾಣಿ ಕೂಡ ಈ ಚಿತ್ರದಲ್ಲಿ ನನ್ನ ಜೊತೆ ಕೆಲಸ ಮಾಡುತ್ತಿದ್ದಾರೆ. ಸಮರ್ಜಿತ್ ನಟನೆ ನೋಡಿದಾಗ ಮೊದಲ ಚಿತ್ರ ಅನಿಸುವುದಿಲ್ಲ. ಅಷ್ಟು ಚೆನ್ನಾಗಿ ನಟಿಸುತ್ತಿದ್ದಾರೆ ಎಂದರು ಛಾಯಾಗ್ರಾಹಕ ಕೆ.ಕೆ., ಸಮರ್ಜಿತ್ ಅಜ್ಜಿ ಇಂದಿರಾ ಲಂಕೇಶ್ ಅವರು ಮೊಮ್ಮಗನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ, ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು