LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

`ಭಾರತ್ ಜೋಡೊ ಯುವ ಸಂಘ ಯೋಜನೆ ಅನುಷ್ಠಾನಕ್ಕೆ ಕಾರ್ಯೋನ್ಮುಖರಾಗಿ'

ಚಾಮರಾಜನಗರ: ಯುವ ಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮರಸ್ಯ ಉತ್ತೇಜಿಸಲು ಗ್ರಾಮ ಪಂಚಾಯತ್ ಹಾಗೂ ನಗರ ವಾರ್ಡ್ಗಳ ವ್ಯಾಪ್ತಿಯಲ್ಲಿ ಭಾರತ್ ಜೋಡೊ ಯುವ ಸಂಘಗಳನ್ನು ಸ್ಥಾಪಿಸುವ ಸರ್ಕಾರದ ಮಹತ್ವದ ಯೋಜನೆ ಅನುಷ್ಠಾನಕ್ಕೆ ಅಧಿಕಾರಿಗಳು ಕಾರ್ಯ ಪ್ರಾವೃತ್ತರಾಗಬೇಕೆಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಭಾರತ್ ಜೋಡೊ ಯುವ ಸಂಘಗಳನ್ನು ಸ್ಥಾಪಿಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಮುದಾಯ ಅಭಿವೃದ್ದಿ, ಸಾಮಾಜಿಕ ಸಾಮರಸ್ಯ, ಕ್ರೀಡೆ, ಫಿಟ್ನೆಸ್ ಮತ್ತು ಕೌಶಲ್ಯಾಭಿವೃದ್ದಿಯ ಮೂಲಕ ಯುವಜನರನ್ನು ಸಬಲೀಕರಣಗೊಳಿಸಿ ತಳಮಟ್ಟದ ಆಡಳಿತದಲ್ಲಿ ಸಕ್ರಿಯ ಪಾಲುದಾರರನ್ನಾಗಿ ಮಾಡಲು ಪ್ರತಿ ಗ್ರಾಮ ಪಂಚಾಯಿತಿ ಮತ್ತು ನಗರ ವಾರ್ಡ್ಗಳಲ್ಲಿ ಸಶಕ್ತ ಯುವಜನತೆಯನ್ನು ಒಳಗೊಂಡ ಭಾರತ್ ಜೋಡೊ ಯುವ ಸಂಘಗಳನ್ನು ಸ್ಥಾಪಿಸಲು ಸರ್ಕಾರ ಆದೇಶ ಹೊರಡಿಸಿದೆ. ಈ ಮಹತ್ತರ ಯೋಜನೆ ಜಾರಿಗೊಳಿಸಲು ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮುಖಾಂತರ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ದಿ, ಕಂದಾಯ ಹಾಗೂ ಶಿಕ್ಷಣ ಇಲಾಖೆಗಳು ಸಹಯೋಗದೊಂದಿಗೆ ಯೋಜನೆ ಅನುಷ್ಠಾನ ಮಾಡಬೇಕು. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಒಂದು ಸಂಘ, ಪ್ರತಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಾಸರಿ 4 ಸಾವಿರ ಜನಸಂಖ್ಯೆಗೆ ಒಂದು ಸಂಘ, ಪ್ರತಿ ಪುರಸಭೆ ವ್ಯಾಪ್ತಿಯಲ್ಲಿ ಸರಾಸರಿ 6 ಸಾವಿರ ಜನಸಂಖ್ಯೆಗೆ ಒಂದು ಸಂಘ, ಪ್ರತಿ ನಗರಸಭೆ ವ್ಯಾಪ್ತಿಯಲ್ಲಿ ಸರಾಸರಿ 8 ಸಾವಿರ ಜನಸಂಖ್ಯೆಗೆ ಒಂದು ಸಂಘ ಸ್ಥಾಪಿಸಬೇಕಿದೆ ಎಂದರು. ಪ್ರತಿ ಘಟಕ ಸ್ಥಾಪಿಸಲು ಬಿಜೆವೈಎಸ್ (ಃಎಙS) ಪೋರ್ಟಲ್ ಅಥವಾ ಮೊಬೈಲ್ ಆಫ್ ಮೂಲಕ ಅಥವಾ ಗ್ರಾಮ ಪಂಚಾಯಿತಿ, ನಗರ ಪ್ರದೇಶಗಳಲ್ಲಿನ ಗ್ರಾಮ ಒನ್, ಕರ್ನಾಟಕ ಒನ್, ನಾಗರಿಕ ಸೇವಾ ಕೇಂದ್ರಗಳ ಸಹಾಯದಿಂದ ಅರ್ಜಿ ಸಲ್ಲಿಸಬೇಕಿದೆ. ಪ್ರತಿಯೊಬ್ಬ ಸದಸ್ಯರ ನೋಂದಣಿಗೆ ಆಧಾರ್ ಕಡ್ಡಾಯವಾಗಿದ್ದು, ಸದಸ್ಯರು 16 ರಿಂದ 35 ವರ್ಷದವರಾಗಿರಬೇಕು. ಘಟಕ ರಚನೆಗೆ ಕನಿಷ್ಠ 100 ಸದಸ್ಯರಿರಬೇಕು ಎಂದು ಹೇಳಿದರು. ಪ್ರತಿ ಭಾರತ್ ಜೋಡೊ ಯುವ ಸಂಘಕ್ಕೆ ವಾರ್ಷಿಕವಾಗಿ ತಲಾ 10 ಲಕ್ಷ ರೂ. ಅನುದಾನ ಬಿಡುಗಡೆಯಾಗಲಿದೆ. ಯುವ ಸಂಘಕ್ಕಾಗಿ ಕೊಠಡಿ ಒದಗಿಸುವುದು, ಹೊರಾಂಗಣ ಚಟುವಟಿಕೆಗಳಿಗೆ ಸ್ಥಳಾವಕಾಶ, ಅನುಮತಿಯಂತಹ ಅಗತ್ಯತೆಗಳಿಗೆ ಕ್ರಮ ವಹಿಸಬೇಕು. ಯೋಜನೆಯ ಪಾರದರ್ಶಕ ಮತ್ತು ಸಮರ್ಥ ಅನುಷ್ಠಾನಕ್ಕಾಗಿ ನಿಗದಿಪಡಿಸಲಾಗಿರುವ ಆಡಳಿತಾತ್ಮಕ ಹಂತಗಳ ಅನ್ವಯ ಜವಾಬ್ದಾರಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು. ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಹಕ ಅಧಿಕಾರಿಗಳು, ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆ ವ್ಯಾಪ್ತಿಯ ಅಧಿಕಾರಿಗಳು ತಮ್ಮ ಹಂತದಲ್ಲಿ ಕೂಡಲೇ ಸಭೆ ಕರೆದು ನೊಂದಣಿಗೆ ಸಿದ್ದತೆ ಕೈಗೊಳ್ಳಬೇಕು. ಯೋಜನೆಯ ಬಗ್ಗೆ ವ್ಯಾಪಕವಾಗಿ ತಿಳಿಸಿ ತ್ವರಿತವಾಗಿ ಭಾರತ್ ಜೋಡೊ ಯುವ ಸಂಘಗಳ ಸ್ಥಾಪನೆಗೆ ಸರ್ಕಾರದ ಆದೇಶ ಮಾರ್ಗಸೂಚಿಗಳ ಅನ್ವಯ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಎಲ್ಲ ಅಧಿಕಾರಿಗಳು ಹೊಣೆಗಾರಿಕೆಯಿಂದ ಕಾರ್ಯೋನ್ಮುಖರಾಗುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕರಾದ ಹೆಚ್.ಎಸ್. ಬಿಂದ್ಯಾ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರದ ವೆಂಕಟೇಶ್, ತಹಶೀಲ್ದಾರರಾದ ಗಿರಿಜಾ, ಬಸವರಾಜು, ನಯನ, ಚೈತ್ರ, ಜಯಪ್ರಕಾಶ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಚಂದ್ರಪಾಟಿಲ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಪುಟ್ಟಗೌರಮ್ಮ, ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ಶ್ರೀಕಂಠರಾಜೇ ಅರಸ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು, ಇನ್ನಿತರ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು