LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mysore

ಗುದ್ದಲಿ ಪೂಜೆ ಸ್ಥಳದಲ್ಲಿ ಪ್ರತಾಪ್‍ಸಿಂಹಗೆ ಘೇರಾವ್

ಮೈಸೂರು: ಅಯೋಧ್ಯೆ ರಾಮಮಂದಿರದಲ್ಲಿ ಪ್ರತಿಷ್ಠಾಪನೆಯಾಗುತ್ತಿರುವ ರಾಮಲಲ್ಲಾ ವಿಗ್ರಹ ಕೆತ್ತನೆಗೆ ಶಿಲೆ ಸಿಕ್ಕ ಸ್ಥಳದಲ್ಲಿ ಇಂದು ಗುದ್ದಲಿ ಪೂಜೆ ನಡೆಯುತ್ತಿದೆ.

ಈ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ ಅವರಿಗೆ ಕೆಲ ಸ್ಥಳೀಯರು ಘೇರಾವ್ ಹಾಕಿ ದಲಿತ ವಿರೋಧಿ ಎಂದು ಕರೆದು ಪೂಜೆಗೆ ಅವಕಾಶ ಕಲ್ಪಿಸದೆ ವಾಪಸ್ ಕಳುಹಿಸಿದ ಘಟನೆ ಮೈಸೂರು ತಾಲೂಕು ಹಾರೋಹಳ್ಳಿಯಲ್ಲಿ ನಡೆದಿದೆ.ಆಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಾಗುತ್ತಿರುವ ರಾಮಲಲ್ಲಾ ಮೂರ್ತಿಯ ಕೃಷ್ಣ ಶಿಲೆ ಕಲ್ಲುಹಾರೋಹಳ್ಳಿ ಬಳಿಯ ಗಯಜ್ಜೇಗೌಡನ ಪುರದ ರಾಮದಾಸ್ ಅವರ ಜಮೀನಿನಲ್ಲಿ ಸಿಕ್ಕಿತ್ತು.

ಈ ಜಾಗದಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಾಗಿ ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ ಅವರು ಈ ಹಿಂದೆ ತಿಳಿಸಿದ್ದರು. ಹೀಗಾಗಿ ಇಂದು ಭೂಮಿಪೂಜೆ ಮತ್ತು ರಾಮನಪೂಜೆ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಸಂಸದ ಪ್ರತಾಪ್ ಸಿಂಹ ಆಗಮಿಸಿದ್ದರು.
ಈ ವೇಳೆ ಕೆಲ ಸ್ಥಳೀಯರು ಸಂಸದರನ್ನು ಘೇರಾವ್ ಹಾಕಿ ಮಹಿಷಾ ದಸರಕ್ಕೆ ವಿರೋಧ ನೆಪ ಹೇಳಿಕೊಂಡು ಅಪಮಾನ ಮಾಡಿ ದಲಿತ ವಿರೋಧಿ ಎಂದು ಕರೆದು ಕಾರ್ಯಕ್ರಮಕ್ಕೆ ಬರದಂತೆ ಅಡ್ಡಿಪಡಿಸಿದ್ದಾರೆ.

ಇದರಿಂದ ಬೇಸರಕೊಂಡ ಸಂಸದ ಪ್ರತಾಪ್ ಸಿಂಹ ಕಾರ್ಯಕ್ರಮದಲ್ಲಿ ಭಾಗಿಯಾಗದೆ ಹೊರ ನಡೆದರು. ಜಾತ್ಯಾತೀತವಾಗಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಜಾತಿ ತಂದು ಗಲಾಟೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ತಾ.ಪಂ. ಮಾಜಿ ಸದಸ್ಯ ಹಾರೋಹಳ್ಳಿ ಸುರೇಶ್, ದಸಂಸ ಮುಖಂಡ ನಟರಾಜ್, ಗ್ರಾಮಸ್ಥರಾದ ಚಲುವರಾಜ್, ಸೋಮಶೇಖರ್, ಬೀರಪ್ಪ, ಧನಗಳ್ಳಿ ಸ್ವಾಮಿ, ರಾಜೇಶ್ ರಾಜೇಂದ್ರ, ಕಿರಣ್, ಸಿ.ಡಿ.ಚಲುವರಾಜು, ಸುನೀಲ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು