LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಪ್ರೊ ಕಬಡ್ಡಿ: ದಬಂಗ್ ಡೆಲ್ಲಿಗೆ ಮಣಿದ ಜೈಂಟ್ಸ್

ನೊಯ್ಡಾ: ಆಶು ಮಲಿಕ್ ಮತ್ತು ಮಂಜಿತ್ ಅವರ ಚುರುಕಿನ ದಾಳಿಯಿಂದ ದಬಂಗ್ ಡೆಲ್ಲಿ ತಂಡವು ಪ್ರೊ ಕಬಡ್ಡಿ ಲೀಗ್ ಪಂದ್ಯದಲ್ಲಿ 35-28ರಿಂದ ಗುಜರಾತ್ ಜೈಂಟ್ಸ್ ತಂಡವನ್ನು ಮಣಿಸಿತು. ನೊಯ್ಡಾ ಒಳಾಂಗಣ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಈ ಪಂದ್ಯದಲ್ಲಿ ವಿರಾಮದ ವೇಳೆ 16-14ರಿಂದ ಮುನ್ನಡೆಯಲ್ಲಿದ್ದ ಜೈಂಟ್ಸ್ ತಂಡವು ನಂತರ ಎಡವಿತು.

ರೇಡಿಂಗ್‍ನಲ್ಲಿ ಮಿಂಚಿದ ಮಲಿಕ್ ದಬಂಗ್ ತಂಡಕ್ಕೆ 11 ಅಂಕ ತಂದುಕೊಟ್ಟು ಗೆಲುವಿನ ರೂವಾರಿಯಾದರು. ಜತೆಗೆ ಈ ಆವೃತ್ತಿಯಲ್ಲಿ ನಾಲ್ಕನೇ ಬಾರಿ ‘ಸೂಪರ್ ಟೆನ್’ ಸಾಧನೆ ಮಾಡಿದರು. ಅವರಿಗೆ ಮಂಜಿತ್ (9) ಸಾಥ್ ನೀಡಿದರು.ಜೈಂಟ್ಸ್ ಪರವಾಗಿ ಪಾರ್ಥಿಕ್ ದಹಿಯಾ (9) ಏಕಾಂಗಿ ಹೋರಾಟ ನಡೆಸಿದರು.

ತಂಡದ ನಾಯಕ ಇರಾನ್‍ನ ಫಜಲ್ ಅತ್ರಾಚಲಿ ಮೂರು ಪಾಯಿಂಟ್ ಗಳಿಸುವ ಮೂಲಕ ಪ್ರೊಕಬಡ್ಡಿ ಲೀಗ್‍ನಲ್ಲಿ ಟ್ಯಾಕಲ್‍ನಲ್ಲಿ 450 ಅಂಕ ಗಳಿಸಿದ ಮೊದಲ ಆಟಗಾರ ಎಂಬ ದಾಖಲೆ ಬರೆದರು. ಈ ಪಂದ್ಯದಲ್ಲಿ ಎರಡೂ ತಂಡಗಳು ತಲಾ ಒಂದು ಬಾರಿ ಆಲೌಟ್ ಆದವು.
ಡೆಲ್ಲಿ ತಂಡವು ಆಡಿರುವ 9 ಪಂದ್ಯಗಳಲ್ಲಿ ಐದರಲ್ಲಿ ಗೆಲುವು ಸಾಧಿಸಿದರೆ, ಮೂರರಲ್ಲಿ ಸೋತಿದೆ.

ಒಂದರಲ್ಲಿ ಡ್ರಾ ಸಾಧಿಸಿ 30 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಜೈಂಟ್ಸ್ ತಂಡವು ಆಡಿರುವ 10 ಪಂದ್ಯಗಳಲ್ಲಿ ಆರರಲ್ಲಿ ಗೆದ್ದು, ನಾಲ್ಕರಲ್ಲಿ ಪರಾಭವಗೊಂಡು 34 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಪುಣೇರಿ ಜೈಂಟ್ಸ್ ತಂಡವು 36 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು