LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಗಾಡ್ ಪ್ರಾಮಿಸ್ ಚಿತ್ರಕ್ಕೆ ಸೂಚನ್ ಶೆಟ್ಟಿ ನಿರ್ದೇಶನ

ರವಿ ಬಸ್ರೂರ್ ಬಹುಬೇಡಿಕೆ ಸಂಗೀತ ನಿರ್ದೇಶಕರಲ್ಲಿ ಒಬ್ಬರು.. ಕೆಜಿಎಫ್ ಸರಣಿ ಸಿನಿಮಾ ಬಹುದೊಡ್ಡ ಯಶಸ್ಸಿನ ಬಳಿಕ ಬಾಲಿವುಡ್, ಟಾಲಿವುಡ್ ಗಳಿಗೂ ಪಯಣಿಸಿರುವ ಅವರು ಸ್ಟಾರ್ ಹೀರೋ ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ. ಇವರ ಗರಡಿಯಿಂದ ಬಂದ ಸಾಕಷ್ಟು ಪ್ರತಿಭೆಗಳು ಕನ್ನಡ ಚಿತ್ರರಂಗದಲ್ಲಿ ಒಳ್ಳೆ ಹೆಸರು ಮಾಡುತ್ತಿದ್ದಾರೆ.

ಇದೀಗ ರವಿ ಬಸ್ರೂರ್ ಅಖಾಡದಿಂದ ಯುವ ಸಿನಿಮೋತ್ಸಾಹಿಗಳು ಸ್ಯಾಂಡಲ್ ವುಡ್ ನಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ನಿರ್ದೇಶಕರಾಗಿ ಸೂಚನ್ ಶೆಟ್ಟಿ, ಹೊಸ ಪಯಣ ಪ್ರಾರಂಭಿಸಿದ್ದಾರೆ.ಸೂಚನ್ ಶೆಟ್ಟಿ ಈಗ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಸೂಚನ್ ಅವರ ಚೊಚ್ಚಲ ಪ್ರಯತ್ನದ ಸಿನಿಮಾಗೆ ಗಾಡ್ ಪ್ರಾಮಿಸಿ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ರವಿ ಬಸ್ರೂರ್ ಸಾರಥ್ಯದ ಕಟಕ, ಗಿರ್ಮಿಟ್, ಕಡಲ್ ಸಿನಿಮಾಗಳಿಗೆ ಬಹರಗಾರನಾಗಿ, ಸಹ ನಿರ್ದೇಶಕನಾಗಿ, ನಟನಾಗಿ ಕೆಲಸ ಮಾಡಿರುವ ಸೂಚನ್ ಈ ಅನುಭವದೊಂದಿಗೆ ನಿರ್ದೇಶನದ ಸಾಹಸಕ್ಕೆ ಕೈ ಹಾಕಿದ್ದಾರೆ.

ಪ್ಯಾನ್ ಇಂಡಿಯಾ ಕಾಂತಾರ ಸಿನಿಮಾದಲ್ಲಿ ಫಾರೆಸ್ಟ್ ಗಾರ್ಡ್ ರವಿ ಪಾತ್ರದಲ್ಲಿ, ರವಿ ಬಸ್ರೂರ್ ಅವರ ಕಡಲ್ ಸಿನಿಮಾದಲ್ಲಿ ಖಳನಾಯಕನಾಗಿ ನಟಿಸಿರುವ ಸೂಚನ್ ಶೆಟ್ಟಿ ಗಾಡ್ ಪ್ರಾಮಿಸ್ ಸಿನಿಮಾ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಬಡ್ತಿ ಪಡೆಯುತ್ತಿದ್ದಾರೆ.

ನಮ್ಮ ರಾಜ್ಯದ ಸಂಸ್ಕೃತಿಯನ್ನು ಬಿಂಬಿಸುವಂತಹ ಸಿನಿಮಾ ಮಾಡುವ ಕನಸಿನೊಂದಿಗೆ 2016ರಲ್ಲಿ ಶುರುವಾದ ಮೈತ್ರಿ ಪ್ರೊಡಕ್ಷನ್ ಸೂಚನ್ ಶೆಟ್ಟಿ ಚೊಚ್ಚಲ ಕನಸಿಗೆ ಜೊತೆಯಾಗಿದೆ. ಗಾಡ್ ಪ್ರಾಮಿಸ್ ಸಿನಿಮಾವನ್ನು ಮೈತ್ರಿ ಪ್ರೊಡಕ್ಷನ್ ನಡಿ ಮೈತ್ರಿ ಮಂಜುನಾಥ್ ನಿರ್ಮಾಣ ಮಾಡುತ್ತಿದ್ದಾರೆ. ಈ ಹಿಂದೆ ಕರಾವಳಿಯ ಭೂಗತ ಕಥೆ ಹಫ್ತಾ ಸಿನಿಮಾವನ್ನು ನಿರ್ಮಿಸಿದ್ದ ಈ ಪ್ರೊಡಕ್ಷನ್ ಎರಡನೇ ಕಾಣಿಕೆ ಗಾಡ್ ಪ್ರಾಮಿಸ್..ಹಳ್ಳಿ ಸೊಗಡನ್ನು ಬಿಂಬಿಸುವ ಟೈಟಲ್ ಪೋಸ್ಟರ್ ಕುತೂಹಲವನ್ನು ಹೆಚ್ಚು ಮಾಡಿದೆ.

ಗಾಡ್ ಪ್ರಾಮಿಸ್ ನೈಜ ಘಟನೆಯ ಸ್ಫೂರ್ತಿ ಪಡೆದ ಫ್ಯಾಮಿಲಿ ಹಾಗೂ ಕಾಮಿಡಿ ಕಥಾಹಂದರ ಹೊಂದಿದೆ. ಕಬ್ಜ-ಸಲಾರ್ ಚಿತ್ರಗಳಿಗೆ ಕ್ಯಾಮೆರಾ ಹಿಡಿದಿರುವ ಎಜೆ ಶೆಟ್ಟಿ ಹಾಗೂ ಭುವನ್ ಗೌಡ ಜೊತೆ ಕೆಲಸ ಮಾಡಿರುವ ಗುರುಪ್ರಸಾದ್ ನರ್ನಾಡ್ ಛಾಯಾಗ್ರಹಣ, ರವಿ ಬಸ್ರೂರ್ ಜೊತೆ ಸಲಾರ್, ಕೆಜಿಎಫ್ ಸರಣಿ ಚಿತ್ರಗಳಿಗೆ ಕೆಲಸ ಮಾಡಿರುವ 400ಕ್ಕೂ ಮ್ಯೂಸಿಕ್ ಪ್ರೊ ಡ್ಯೂಸರ್ ಆಗಿ ಭರತ್ ಮಧುಸೂದನನ್ ಸಂಗೀತ ನಿರ್ದೇಶನ, ಲವ್ ಮಾಕ್ಟೇಲ್-2, ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ,

 

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು