LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಗಾಡ್ ಪ್ರಾಮಿಸ್' ಚಿತ್ರೀಕರಣ ಸಂಪೂರ್ಣ: ನವೆಂಬರ್‌ನಲ್ಲಿ ಬೆಳ್ಳಿಪರದೆಗೆ ಬರಲು ಸಜ್ಜಾದ ಸೂಚನ್ ಶೆಟ್ಟಿ ಸಿನಿಮಾ!

`
ಬೆಂಗಳೂರು: ಶೀರ್ಷಿಕೆಯ ಮೂಲಕವೇ ಸ್ಯಾಂಡಲ್‌ವುಡ್‌ನಲ್ಲಿ ಅಪಾರ ಕುತೂಹಲ ಕೆರಳಿಸಿರುವ ಯುವ ಪ್ರತಿಭೆ ಸೂಚನ್ ಶೆಟ್ಟಿ ನಿರ್ದೇಶಿಸಿ, ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ `ಗಾಡ್ ಪ್ರಾಮಿಸ್’ ಚಿತ್ರದ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಶೂಟಿಂಗ್ ಪೂರ್ಣಗೊಂಡಿರುವ ಸಂಭ್ರಮದಲ್ಲಿರುವ ಚಿತ್ರತಂಡ, ತೆರೆಮರೆಯ ಆಕರ್ಷಕ ಕ್ಷಣಗಳನ್ನು ಒಳಗೊಂಡ ಮೇಕಿಂಗ್ ವಿಡಿಯೋವೊಂದನ್ನು ಬಿಡುಗಡೆ ಮಾಡಿ ಸಿನಿಪ್ರೇಕ್ಷಕರ ಗಮನ ಸೆಳೆದಿದೆ.ಚಿತ್ರೀಕರಣ ಮುಗಿದ ಬೆನ್ನಲ್ಲೇ ಬಿಡುಗಡೆಯ ಸುಳಿವು ನೀಡಿರುವ ಚಿತ್ರತಂಡ, “ಮೊದಲ ಕ್ಲ್ಯಾಪ್‌ನಿಂದ ಹಿಡಿದು ಕೊನೆಯ ಶಾಟ್‌ವರೆಗೆ ಇದೊಂದು ಸುಂದರ ಪಯಣ. ತೆರೆಯ ಹಿಂದೆ ಸೆರೆಹಿಡಿದ ಅಸಂಖ್ಯಾತ ನೆನಪುಗಳೊಂದಿಗೆ ಚಿತ್ರೀಕರಣ ಸಂಪೂರ್ಣಗೊಂಡಿದ್ದು, ನಮ್ಮ ಕಥೆ ಈಗ ಬೆಳ್ಳಿಪರದೆಯ ಮೇಲೆ ಬರಲು ಸಜ್ಜಾಗಿದೆ. `ಗಾಡ್ ಪ್ರಾಮಿಸ್’ ಇದೇ ನವೆಂಬರ್‌ನಲ್ಲಿ ಅದ್ಧೂರಿಯಾಗಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಈ ಚಿತ್ರದಲ್ಲಿ ಸೂಚನ್ ಶೆಟ್ಟಿಗೆ ಜೋಡಿಯಾಗಿ ಜೂಹಿ ಜಯಕುಮಾರ್ ನಾಯಕಿಯಾಗಿ ನಟಿಸಿದ್ದಾರೆ. ಈ ಹಿಂದೆ `ಪವಿ ಕೇರ್‌ಟೇಕರ್’, `ತಲೈವನ್ ತಲೈವಿ‘ ಹಾಗೂ `ಸುಮತಿ ಒಲವು’ ಚಿತ್ರಗಳಲ್ಲಿ ನಟಿಸಿ ಗಮನ ಸೆಳೆದಿದ್ದ ಜೂಹಿ, ಈ ಚಿತ್ರದ ಮೂಲಕ ಕನ್ನಡದಲ್ಲಿ ಪೂರ್ಣ ಪ್ರಮಾಣದ ನಾಯಕಿಯಾಗಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ.ಕರಾವಳಿ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ತಾರಾಗಣವೇ ಈ ಚಿತ್ರದಲ್ಲಿದೆ. ಪ್ರಮೋದ್ ಶೆಟ್ಟಿ, ಅರವಿಂದ್ ಬೋಳಾರ್, ರಘು ಪಾಂಡೇಶ್ವರ, ನವೀನ್ ಡಿ. ಪಡೀಲ್, ರೂಪಾ ವರ್ಕಾಡಿ, ಸಿದ್ಧಿ ಪ್ರಶಾಂತ್, ಪ್ರಸಿದ್ಧ್ ನಾಗ್, ಶೋಭಾ ಶೆಟ್ಟಿ, ಪ್ರತಿಮಾ ನಾಯಕ್, ಅಕ್ಷತಾ ರೈ, ರಾಧಾಕೃಷ್ಣ ಕುಂಬ್ಳೆ, ಪ್ರಭಾಕರ್ ಕುಂದರ್, ರಾಮ್ ಕುಮಾರ್ ಉಪುö್ಪಂದ, ಜಯಶೀಲಾ ಮರೋಳಿ, ಶ್ರುತಿ ಭಟ್, ವಿಶಾಲ್ ಜೈವಿಕ್, ಚಂದ್ರಿಕಾ ಕಾಮತ್ ಹಾಗೂ ಶ್ರಾವ್ಯ ಪುತ್ರನ್ ಸೇರಿದಂತೆ ಅನುಭವಿ ಕಲಾವಿದರ ದಂಡೇ ಚಿತ್ರದಲ್ಲಿದೆ. ಪಾಂಚಜನ್ಯ ಫಿಲ್ಮ್ ಪ್ರೊಡಕ್ಷನ್ ಬ್ಯಾನರ್‌ನಡಿ ಮಹೇಂದ್ರ ಶೆಟ್ಟಿ ಅದ್ದೂರಿಯಾಗಿ ನಿರ್ಮಿಸಿರುವ ಈ ಚಿತ್ರಕ್ಕೆ ಭರತ್ ಮಧುಸೂದನನ್ ಸಂಗೀತ ಸಂಯೋಜಿಸಿದ್ದು, ಗುರುಪ್ರಸಾದ್ ನರ್ನಾಡ್ ಅವರ ಛಾಯಾಗ್ರಹಣ ಹಾಗೂ ನವೀನ್ ಶೆಟ್ಟಿ ಅವರ ಸಂಕಲನವಿದೆ. ಜೊತೆಗೆ ಅರ್ಜುನ್ ರಾಜ್ ಅವರ ಸಾಹಸ ನಿರ್ದೇಶನ ಹಾಗೂ ಎನ್. ಸರವಣ ಕುಮಾರ್ ಅವರ ಕಲಾ ನಿರ್ದೇಶನ ಚಿತ್ರಕ್ಕಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿಯಾಗಿರುವ `ಗಾಡ್ ಪ್ರಾಮಿಸ್’ ತಂಡ, ನವೆಂಬರ್‌ನಲ್ಲಿ ಸಿನಿಮಾವನ್ನು ಅದ್ಧೂರಿಯಾಗಿ ಪ್ರೇಕ್ಷಕರ ಎದುರು ತರಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST