LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

"ಚಿನ್ನಾಭರಣ ಕಳವು ಆರೋಪಿ ಬಂಧನ"

ಬೆಂಗಳೂರು : ಗ್ರಾಹಕನೊಬ್ಬ ಚಿನ್ನದ ಆಭರಣಗಳನ್ನು ಖರೀದಿ ಮಾಡುವಂತೆ ಆಭರಣಗಳ ಅಂಗಡಿಗಳಿಗೆ ಹೋಗಿ ಆಭರಣಗಳನ್ನು ವೀಕ್ಷಿಸುವ ಸಮಯದಲ್ಲಿ ಆಭರಣಗಳನ್ನು ತೋರಿಸುತ್ತಿದ್ದ ವ್ಯಕ್ತಿಯ ಗಮನ ಬೇರೆ ಸೆಳೆದು ೧೬ ಗ್ರಾಂ ತೂಕದ ಉಂಗುರ ಒಂದನ್ನು ಕಳವು ಮಾಡಿ ತನ್ನ ಬಳಿ ಇದ್ದ ನಕಲಿ ಉಂಗುರವನ್ನು ಆಭರಣಗಳ ಬಾಕ್ಸ್ನಲ್ಲಿ ಇಟ್ಟು ಪರಾರಿಯಾಗಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಬಾಬುಲಾಲ್ ಗಣೇಶ ಗೋಲ್ಡ್ ಪ್ಯಾಲೇಸ್ ಅಂಗಡಿಯ ಮಾಲೀಕ ದೂರನ್ನು ಸಲ್ಲಿಸಿದ್ದನು.
ಪ್ರಕರಣವನ್ನು ದಾಖಲು ಮಾಡಿಕೊಂಡ ಜ್ಞಾನಭಾರತಿ ಪೊಲೀಸರು ಚಿನ್ನದ ಅಂಗಡಿಯಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಗಳನ್ನು ಪರಿಶೀಲಿಸಿ , ರಾಜೇಶ್ ಎಂಬ ೩೬, ವ್ಯಕ್ತಿಯನ್ನು ಬಂಧಿಸಿ ಎರಡುವರೆ ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನದ ಉಂಗುರ ಹಾಗೂ ಚಿನ್ನದ ಗಟ್ಟಿ ವಶಪಡಿಸಿಕೊಂಡಿರುತ್ತಾರೆ.

ಈ ಪ್ರಕರಣವು ನವಂಬರ್ ಮೂರರಂದು ದೊಡ್ಡ ಬಸ್ತಿ ಮುಖ್ಯ ರಸ್ತೆಯಲ್ಲಿರುವ ಗಣೇಶ ಗೋಲ್ಡ್ ಪ್ಯಾಲೇಸ್ ಅಂಗಡಿಯಲ್ಲಿ ಜರುಗಿತ್ತು. ಪ್ರಕರಣವನ್ನು ಬೆನ್ನತ್ತಿದ ಪೊಲೀಸರು ಸರ್ಕಾರಿ ಇಲಾಖೆಗಳಲ್ಲಿ ತಾತ್ಕಾಲಿಕ ಗ್ಯಾಸ್ ಇನ್ಸ್ಪೆಕ್ಟರ್ ಆಗಿ ಕೆಲಸ ಮಾಡುವ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದ ರಾಜೇಶ್ನನು ಬಂಧಿಸಿರುತ್ತಾರೆ.
ಇತನನ್ನು ಬಂಧಿಸಿ ಕುಲಂಕುಶವಾಗಿ ವಿಚಾರಣೆ ಮಾಡಿದಾಗ ಈ ಹಿಂದೆ ಈತನ ಮೇಲೆ ಜ್ಞಾನಭಾರತಿ ಮತ್ತು ಮಾಗಡಿ ರಸ್ತೆ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದನು ಎಂದು ಪೊಲೀಸರು ತಿಳಿಸಿರುತ್ತಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು