LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

`ಸರ್ಕಾರಿ ನ್ಯಾಯಬೆಲೆ ಅಂಗಡಿ' ಟ್ರೇಲರ್ ಬಿಡುಗಡೆ

ರಾಜಕಾರಣಿ ಎಲ್. ಆರ್. ಶಿವರಾಮೇಗೌಡ, ಸಾ. ರಾ. ಗೋವಿಂದು, ಪ್ರದರ್ಶಕರ ಸಂಘದ ಅಧ್ಯಕ್ಷ ಕೆ. ವಿ. ಚಂದ್ರಶೇಖರ್, ಗಾಯಕಿ ಶಮಿತಾ ಮಲ್ನಾಡ್ ಸೇರಿದಂತೆ ಚಿತ್ರರಂಗ ಮತ್ತು ರಾಜಕೀಯ ರಂಗದ ಹಲವು ಗಣ್ಯರ ಸಮ್ಮುಖದಲ್ಲಿ ಟ್ರೇಲರ್ ಬಿಡುಗಡೆಯಾಗಿದೆ. ಪಡಿತರ ವ್ಯವಸ್ಥೆಯ ಸುತ್ತ ನಡೆಯುವಂಥ ಕಥಾಹಂದರದ ಚಿತ್ರ ಇದು.ಮಾಜಿ ಸಂಸದ ಶಿವರಾಮೇಗೌಡ ಮಾತನಾಡಿ ಜನ ಸಾಮಾನ್ಯರು, ಬಡವರು ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಸರ್ಕಾರಗಳು 'ಸರ್ಕಾರಿ ನ್ಯಾಯಬೆಲೆ ಅಂಗಡಿ'ಗಳ ಮೂಲಕ ದಿನಸಿ ಮತ್ತು ಆಹಾರವನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದೆ. ಆದರೆ, ಈ ವ್ಯವಸ್ಥೆಯಲ್ಲಿರುವ ಕೆಲವು ಲೋಪಗಳಿಂದ ಇದರ ಉದ್ದೇಶ ಪರಿಣಾಮಕಾರಿಯಾಗಿ ಈಡೇರುತ್ತಿಲ್ಲ. ಈಗ ಇದೇ ವಿಷಯವನ್ನು ಸಿನಿಮಾವಾಗಿಸಿ 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಚಿತ್ರತಂಡ ಪ್ರೇಕ್ಷಕರ ಮುಂದೆ ಹೇಳಲು ಹೊರಟಿದೆ. ಚಿತ್ರ ತಂಡದ ಇಂಥದ್ದೊAದು ಪ್ರಯತ್ನ ನಿಜಕ್ಕೂ ಶ್ಲಾಘನೀಯ. ಸಾಮಾಜಿಕ ಕಳಕಳಿಯ ವಿಷಯಗಳನ್ನು ಸಿನಿಮಾ ಮೂಲಕ ಹೇಳಿದಾಗ, ಅದು ಪರಿಣಾಮಕಾರಿಯಾಗಿ ಪ್ರೇಕ್ಷಕರನ್ನು ತಲುಪುತ್ತದೆ. ಈ ಚಿತ್ರ ಜನ ಜಾಗೃತಿ ಮೂಡಿಸಿ, ಯಶಸ್ವಿಯಾಗಲಿ' ಎಂದು ಶುಭ ಹಾರೈಸಿದರು. ಕುಮಾರ್ ಬಂಗಾರಪ್ಪ ಮಾತನಾಡಿ, 'ಇಡೀ ದೇಶದಲ್ಲಿಯೇ ಸರ್ಕಾರಿ ನ್ಯಾಯಬೆಲೆ ಅಂಗಡಿ ಮತ್ತು ಪಡಿತರ ವ್ಯವಸ್ಥೆಯ ಮೇಲೆ ಮೂಡಿ ಬರುತ್ತಿರುವ ಮೊಟ್ಟ ಮೊದಲ ಸಿನಿಮಾ ಇದಾಗಿದೆ. ಇಡೀ ಗ್ರಾಮೀಣ ಪರಿಸರದ ಹಿನ್ನೆಲೆಯಲ್ಲಿ ಈ ಸಿನಿಮಾ ಸಾಗುತ್ತದೆ. ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಏನೇನು ವ್ಯವಹಾರಗಳು, ಅವ್ಯವಹಾರಗಳು ನಡೆಯುತ್ತದೆ ಎಂಬುದನ್ನು ಸಮಾಜಕ್ಕೆ ತೋರಿಸುವಂಥ ಕಥೆ ಈ ಸಿನಿಮಾದಲ್ಲಿದೆ ಎಂದರು. ಮೊದಲ ಬಾರಿಗೆ ಗ್ರಾಮೀಣ ಮಹಿಳೆಯ ಪಾತ್ರದಲ್ಲಿ ಕಾಣಿಸಿಕೊಂಡಿ ದ್ದೇನೆ ಎಂದ ರಾಗಿಣಿ ಚಿತ್ರ ನೋಡುಗರಿಗೆ ಮೆಸೇಜ್ ಜೊತೆಗೆ ಮನರಂಜನೆ ಕೂಡ ನೀಡಲಿದೆ ಎಂದರು.`ಜಯಶಂಕರ ಟಾಕೀಸ್' ಬ್ಯಾನರಿನಲ್ಲಿ ನಿರ್ಮಾಣವಾಗಿದ್ದು ತೇಜು ಮೂರ್ತಿ ಮತ್ತು ಪದ್ಮಾವತಿ ಚಂದ್ರಶೇಖರ್ ನಿರ್ಮಾಪಕರು.ಅನಂತ್ ಆರ್ಯನ್ ಸಂಗೀತ, ಬಿ. ರಾಮಮೂರ್ತಿ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಸಾತ್ವಿಕ್ ಪವನ್ ಕುಮಾರ್ ಛಾಯಾಗ್ರಹಣ ಮತ್ತು ನಿರ್ದೇಶನ ಇದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು