LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕ್ಯಾಲಸನಹಳ್ಳಿಯ ಪೂರ್ವ ಪಾಮ್ ಬೀಚ್‍ನಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ

ಕೆ.ಆರ್.ಪುರ: ಹೊರ ರಾಜ್ಯಗಳಿಂದ ನಗರಕ್ಕೆ ಬಂದು ನೆಲಸಿರುವ ಪ್ರತಿಯೊಬ್ಬರೂ ಕನ್ನಡ ಕಲಿಯುವ ಮೂಲಕ ಕನ್ನಡ ಭಾಷೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಶಾಸಕ ಬೈರತಿ ಬಸವರಾಜ ತಿಳಿಸಿದರು.

ಹೊರಮಾವು ವಾರ್ಡಿನ ಕ್ಯಾಲಸನಹಳ್ಳಿ ಸಮೀಪದ ಪೂರ್ವ ಪಾಮ್ ಬೀಚ್ ವಸತಿ ಸಮುಚ್ಚಯದಲ್ಲಿ ಝೇಂಕಾರ ತಂಡದ ವತಿಯಿಂದ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಪಾಲ್ಗೊಂಡು ಮಾತನಾಡಿದ ಅವರು, ನಗರದಲ್ಲಿ ನೆಲಸಿರುವ ಹೊರರಾಜ್ಯದವರು ವಸತಿ ಸಮುಚ್ಚಯದಲ್ಲಿ ಅದ್ಧೂರಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಿ ಹಬ್ಬದ ರೀತಿಯಲ್ಲಿ ಸಂಭ್ರಮ ಸಡಗರದಿಂದ ಅಚರಣೆ ಮಾಡುವ ಮೂಲಕ ಕನ್ನಡ ಭಾಷೆಗೆ ವಿಶೇಷ ಗೌರವ ನೀಡುತ್ತಿರುವುದು ಸಂತಸ ತಂದಿದೆ ಎಂದರು.

ವಸತಿ ಸಮುಚ್ಚಯದಲ್ಲಿ ನೆಲಸಿರುವ ಪ್ರತಿಯೊಬ್ಬರೂ ಕನ್ನಡ ಭಾಷೆ ಕಲಿಯಬೇಕು, ಕನ್ನಡ ಭಾಷೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಕನ್ನಡ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಹೇಳಿದರು.ಐದನೇ ಹಂತದ ಕಾವೇರಿ ನೀರಿನ ಸಂಪರ್ಕ ಕಾಮಗಾರಿ ಪ್ರಗತಿಯಲ್ಲಿದೆ ಕಾಮಗಾರಿ ಪೂರ್ಣಗೊಂಡ ನಂತರ ಅದಷ್ಟೂ ಬೇಗ ಮನೆ ಮನೆಗೂ ಕಾವೇರಿ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಪೂರ್ವ ಪಾಮ್ ಬೀಚ್ ಸಮುಚ್ಚಯದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಹಿಳೆಯರು ಕೆಂಪು ಮತ್ತು ಹಳದಿ ಉಡುಗೆಯಲ್ಲಿ ಮಿಂಚಿದರು, ತುಳುನಾಡಿನ ಹುಲಿವೇಷ,ಜನಪದ ಕಲೆ ಡೊಳ್ಳು ಕುಣಿತ, ಸಂಗೀತ ರಸಸಂಜೆ,ಲಗೂನ್ ಏರಿಯಾ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸಿಕೊಟ್ಟರು.

ಈ ಸಂಧರ್ಭದಲ್ಲಿ ಸಮಾಜಿಕ ಕಾರ್ಯಕರ್ತ ವಿಜಯಕುಮಾರ್ ಘನಶ್ಯಾಮ್, ಪೂರ್ವ ಫಾಮ್ ಬೀಚ್ ಕನ್ನಡ ಸಮಿತಿ ಸದಸ್ಯರು ನ ನಿವಾಸಿಗಳಾದ ವಿಜಯಕುಮಾರ್ ಘನಶ್ಯಾಮ್, ಕನ್ನಡ ಸಮಿತಿ ಅರುಣ್ ಶೆಟ್ಟಿ, ಕರ್ಣ ನಾಟೀಕರ್, ಪ್ರದೀಪ್, ಮಂಜುನಾಥ್, ವಿನಯ್, ದೀಪಕ್ ಬಂಗಾಡೆ, ಸೌಮ್ಯ ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು