LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಮೇ 10ಕ್ಕೆ ಗ್ರೇ ಗೇಮ್ಸ್ ಸಿನಿಮಾ ರಿಲೀಸ್

ಗಂಗಾಧರ್ ಸಾಲಿಮಠ ನಿರ್ದೇಶನದಲ್ಲಿ ಮೂಡಿಬಂದಿರುವ ಗ್ರೇ ಗೇಮ್ಸ್ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಫ್ಯಾಮಿಲಿ ಸಸ್ಪೆನ್ಸ್ ಡ್ರಾಮಾ ಶೈಲಿಯ ಈ ಸಿನಿಮಾದಲ್ಲಿ ನಾಯಕನಾಗಿ ವಿಜಯ್ ರಾಘವೇಂದ್ರ ನಟಿಸಿದ್ದಾರೆ. ಇಲ್ಲಿ ಚಿಂತನೆಗಳ ಪ್ರಚೋದನೆ ನಡೆಯುತ್ತದೆ. ಸರಿ ತಪ್ಪುಗಳ ಗ್ರಹಿಕೆಗಳಿಗೂ ಸವಾಲೆಸೆಯುತ್ತದೆ.

ಇದೆಲ್ಲದಕ್ಕಿಂತ ಹೆಚ್ಚಾಗಿ ಆನ್‍ಲೈನ್ ಗೇಮಿಂಗ್ ಪೈಪೂಟಿ ಜತೆಗೆ ಮೆಟಾವರ್ಸ್‍ನ ಸಂಕೀರ್ಣತೆಗಳ ಬೆಸುಗೆಯೂ ಗ್ರೇ ಗೇಮ್ಸ್ ಸಿನಿಮಾದ ಹೈಲೈಟ್. ಸದ್ಯ ಬಹುತೇಕ ಎಲ್ಲ ಕೆಲಸಗಳನ್ನು ಮುಗಿಸಿಕೊಂಡಿರುವ ಈ ಚಿತ್ರ ರಿಲೀಸ್ ದಿನಾಂಕವನ್ನೂ ಬಹಿರಂಗಪಡಿಸಿದೆ. ಮೇ 10ರಂದು ರಾಜ್ಯಾದ್ಯಂತ ಗ್ರೇ ಗೇಮ್ಸ್ ಸಿನಿಮಾ ಬಿಡುಗಡೆ ಆಗಲಿದೆ.

ಸೆನ್ಸಾರ್ ಮಂಡಳಿಯಿಂದ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ಪಡೆದಿರುವ ಈ ಸಿನಿಮಾ ಸದ್ಯ ಪ್ರಚಾರ ಕಣಕ್ಕಿಳಿಯುತ್ತಿದೆ. ವಿಜಯ್ ರಾಘವೇಂದ್ರ ಜತೆಗೆ ಭಾವನಾ ರಾವ್, ಶ್ರುತಿ ಪ್ರಕಾಶ್, ಅಪರ್ಣಾ ವಸ್ತ್ರೇಯ, ರವಿ ಭಟ್ ಮುಖ್ಯಭೂಮಿಕೆಯಲ್ಲಿದ್ದರೆ, ಇನ್ನುಳಿದಂತೆ ಜೈ, ಇಶಿತಾ ಸಿಂಗ್, ರಾಮ್ ಮಂಜೋನ್ನಾಥ್ ಬೆನ್ಸಕಾನ್ ಚಾಕೋ ಇನ್ನುಳಿದ ಪಾತ್ರವರ್ಗ ವದಲ್ಲಿದ್ದಾರೆ. ಇತ್ತೀಚೆಗೆ ಗೋವಾದಲ್ಲಿ ನಡೆದ 54ನೇ ಭಾರತದ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲೂ ಈ ಸಿನಿಮಾ ಪ್ರದರ್ಶನ ಕಂಡಿತ್ತು. ಆನ್‍ಲೈನ್ ಗೇಮಿಂಗ್ ಹಿನ್ನೆಲೆಯಲ್ಲಿ ಸಾಗುವ ಈ ಸಿನಿಮಾದಲ್ಲಿ ಸೈಕಾಲಜಿಸ್ಟ್ ಆಗಿ ವಿಜಯ್ ರಾಘವೇಂದ್ರ ನಟಿಸಿದರೆ, ಸೈಬರ್ ಕ್ರೈಂ ತನಿಖಾಧಿಕಾರಿಯಾಗಿ ಭಾವನಾ ರಾವ್ ಕಾಣಿಸಿಕೊಂಡಿದ್ದಾರೆ.

ವೃತ್ತಿಪರ ಗೇಮರ್ ಆಗಿ ಜೈ, ಚಿತ್ರನಟಿಯಾಗಿ ಶ್ರುತಿ ಪ್ರಕಾಶ್ ಸಿನಿಮಾದಲ್ಲಿದ್ದಾರೆ. ಆನ್‍ಲೈನ್ ಗೇಮಿಂಗ್ ಜತೆಗೆ ಮಾನಸಿಕ ಆರೋಗ್ಯ, ತಂತ್ರಜ್ಞಾನದ ವಿಚಾರವೂ ಸಿನಿಮಾದಲ್ಲಿರಲಿದೆ. ನೋಡುಗನನ್ನು ಭಾವನಾತ್ಮಕವಾಗಿಯೂ ಯೋಚನೆಗೆ ಇಳಿಸುವ ಶಕ್ತಿ ಈ ಚಿತ್ರಕ್ಕಿದೆ ಎಂಬುದು ಚಿತ್ರತಂಡದ ಅಂಬೋಣ. ಈ ಬಗ್ಗೆ ನಿರ್ದೇಶಕ ಗಂಗಾಧರ್ ಸಾಲಿಮಠ ಹೇಳುವುದೇನೆಂದರೆ, ಗ್ರೇ ಗೇಮ್ಸ್ ವಾಸ್ತವ ಮತ್ತು ವರ್ಚುವಾಲಿಟಿ ಹೆಣೆದುಕೊಂಡಿರುವ ಜಗತ್ತಿನಲ್ಲಿ ಸರಿ ಮತ್ತು ತಪ್ಪುಗಳ ನಮ್ಮ ಗ್ರಹಿಕೆಗೆ ಸವಾಲು ಹಾಕುತ್ತದೆ. ಅಸಾಧಾರಣವಾದ ಪಾತ್ರವರ್ಗ ಮತ್ತು ತಂಡದ ಜತೆಗೆ, ಸಿನಿಮೀಯ ಅನುಭವವನ್ನು ನೀಡಲು ದಣಿವರಿಯಿಲ್ಲದೆ ಕೆಲಸ ಮಾಡಿದ್ದೇವೆ. ಅದು ಖಂಡಿತವಾ ಗಿಯೂ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ. ಇದರಿಂದ ಅಷ್ಟೇ ಇಂಪ್ಯಾಕ್ಟ್ ಸಹ ಆಗಲಿದೆ ಎಂದಿದ್ದಾರೆ ನಿರ್ದೇಶಕರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು