LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಆರ್‍ಸಿಬಿ ಭರ್ಜರಿ ಗೆಲುವು

ಧರ್ಮಶಾಲಾ: ಐಪಿಎಲ್ 2024ರ 58ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿಯ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಪಂಜಾಬ್ ಕಿಂಗ್ಸ್ ವಿರುದ್ಧ 60 ರನ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಟೂರ್ನಿಯಲ್ಲಿ ಸತತ ನಾಲ್ಕನೇ ಜಯ ದಾಖಲಿಸಿದ ಆರ್ ಸಿಬಿ ತನ್ನ ಪ್ಲೇಆಫ್ ಕನಸನ್ನು ಇನ್ನು ಜೀವಂತವಾಗಿಸಿರಿಸಿಕೊಂಡಿದೆ.

ಧರ್ಮಶಾಲಾದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‍ಸಿಬಿ, ನಿಗದಿತ 20 ಓವರ್‍ಗಳಲ್ಲಿ 7 ವಿಕೆಟ್ ಕಳೆದುಕೊಂಡು 241 ರನ್ ಕಲೆಹಾಕಿತು.ಗೆಲುವಿಗೆ 242 ರನ್ ಗಳ ಬೃಹತ್ ಗುರಿ ಬೆನ್ನತ್ತಿದ ಪಂಜಾಬ್, 17 ಓವರ್‍ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 181 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಇದರೊಂದಿಗೆ ಪಂಜಾಬ್ ಪ್ಲೇ ಆಫ್ ರೇಸ್‍ನಿಂದ ಹೊರ ಬಿದ್ದಿದೆ. ಪಂಜಾಬ್ 12 ಪಂದ್ಯಗಳಲ್ಲಿ 4ರಲ್ಲಿ ಮಾತ್ರ ಗೆದ್ದಿದೆ. ಆದರೆ ಆರ್‍ಸಿಬಿ 12 ಪಂದ್ಯಗಳಲ್ಲಿ ಐದನೇ ಗೆಲುವು ದಾಖಲಿಸಿದೆ.

ಆರ್‍ಸಿಬಿ ಪರ ಫಾಫ್ ಡು ಪ್ಲೆಸಿಸ್ ಮತ್ತೊಂದು ಬಾರಿ ಕಳಪೆ ಪ್ರದರ್ಶನ ನೀಡಿದರು. 9 ರನ್?ಗೆ ಅವರು ಔಟಾದರು. ಹೀಗಾಗಿ 19 ರನ್‍ಗೆ ಒಂದು ವಿಕೆಟ್ ಕಳೆದುಕೊಂಡ ಆರ್‍ಸಿಬಿಗೆ ಸಂಕಷ್ಟ ಶುರುವಾಯಿತು. ಬಳಿಕ ಬಂದ ವಿಲ್ ಜ್ಯಾಕ್ಸ್ ಕೂಡ 12 ರನ್‍ಗೆ ಸೀಮಿತಗೊಂಡರು. ಆದರೆ, ಮತ್ತೊಂದು ಬದಿಯಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ 47 ಎಸೆತಗಳಲ್ಲಿ 7 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ 92 ರನ್ ಗಳಿಸಿ ಔಟಾದರು. ಈ ಮೂಲಕ ವಿರಾಟ್ ತಮ್ಮ ಒಂಬತ್ತನೇ ಶತಕ ಮಿಸ್ ಮಾಡಿಕೊಂಡರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು