LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಡಿಸಿಎಂ ಶಿವಕುಮಾರ್‍ರಿಂದ ಶುಭಹಾರೈಕೆ

ಬೆಂಗಳೂರು: ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮ ಲಲ್ಲಾ ಪ್ರಾಣ ಪ್ರತಿಷ್ಠೆಗೆ ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಶುಭ ಹಾರೈಸಿದ್ದಾರೆ. ಜತೆಗೆ, ರಾಮ ರಾಜ್ಯ ಕನಸು, ಗ್ಯಾರಂಟಿಗಳಿಂದ ನನಸಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳನ್ನು ಉಲ್ಲೇಖಿಸಿ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಸಂದೇಶ ಪ್ರಕಟಿಸಿದ್ದಾರೆ.

ರಾಮರಾಜ್ಯದ ನಿರ್ಮಾಣ, ನಮ್ಮ ಕನಸು. ಅದನ್ನು ನನಸು ಮಾಡುವ ಉದ್ದೇಶದಿಂದ ಜಾರಿಗೊಳಿಸಿದಐದು ಗ್ಯಾರಂಟಿಗಳು ಇಂದು ಯಶಸ್ವಿಯಾಗಿವೆ.ರಾಮನ ಆದರ್ಶ, ಹನುಮನ ನಿಷ್ಠೆ ಇದ್ದರೆ ಅದೇ ಅರ್ಥಪೂರ್ಣ ಬದುಕು. ಅಯೋಧ್ಯೆಯ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ಶುಭ ಹಾರೈಕೆಗಳು ಎಂದು ಡಿಕೆ ಶಿವಕುಮಾರ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಅಯೋಧ್ಯೆಯ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ತೆರಳದೇ ಇರಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಹೀಗಾಗಿ ಕಾಂಗ್ರೆಸ್ ನಾಯಕರು ಯಾರೂ ಆಹ್ವಾನ ಇದ್ದರೂ ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ತೆರಳದೇ ಇರಲು ನಿರ್ಧರಿಸಿದ್ದಾರೆ. ರಾಮ ಮಂದಿರ ಉದ್ಘಾಟನೆ ಬಿಜೆಪಿ ಕಾರ್ಯಕ್ರಮ ಎಂದೂ ಕಾಂಗ್ರೆಸ್‍ನ ಕೆಲವು ನಾಯಕರು ಟೀಕಿಸಿದ್ದಾರೆ. ಈ ಮಧ್ಯೆ, ರಾಮ ಮಂದಿರಕ್ಕೆ ದೇಣಿಗೆ ನೀಡಿದವರಲ್ಲಿ ಅನೇಕ ಕಾಂಗ್ರೆಸ್ ನಾಯಕರೂ ಇದ್ದಾರೆ ಎಂಬುದು ಗಮನಾರ್ಹ.

ಈ ಎಲ್ಲ ಬೆಳವಣಿಗೆಗಳ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕೆ ಶುಭ ಕೋರಿದ್ದು, ರಾಮ ರಾಜ್ಯದ ಕನಸು ನನಸಾಗಿಸುವಲ್ಲಿ ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳ ಕೊಡುಗೆಯೂ ಇದೆ ಎಂದು ಪ್ರತಿಪಾದಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು