LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪಾಕ್‍ನಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆ

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್‍ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಗ್ವಾದರ್‍ನ ಸರಬಂದ್‍ನಲ್ಲಿರುವ ಫಿಶ್ ಹಾರ್ಬರ್ ಜೆಟ್ಟಿ ಬಳಿಯ ವಸತಿ ಕ್ವಾರ್ಟರ್ಸ್‍ಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದ ಮಲಗಿದ್ದ ಏಳು ಮಂದಿ ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.

ಇತ್ತೀಚೆಗೆ ಸೆಂಟರ್ ಫಾರ್ ರಿಸರ್ಚ್ ಅಂಡ್ ಸೆಕ್ಯುರಿಟಿ ಸ್ಟಡೀಸ್ ವಾರ್ಷಿಕ ಭದ್ರತಾ ವರದಿಯನ್ನು ಬಿಡುಗಡೆ ಮಾಡಲಾಗಿದೆ.ಈ ವರದಿಯ ಪ್ರಕಾರ, 2023 ರಲ್ಲಿ ಪಾಕಿಸ್ತಾನದಲ್ಲಿ 789 ಭಯೋತ್ಪಾದಕ ದಾಳಿಗಳು ನಡೆದಿವೆ. ಈ ದಾಳಿಯಲ್ಲಿ 1,524 ಜನರು ಸಾವನ್ನಪ್ಪಿದ್ದಾರೆ ಮತ್ತು 1,463 ಜನರು ಗಾಯಗೊಂಡಿದ್ದಾರೆ. ಇದು ಕಳೆದ ಆರು ವರ್ಷಗಳಲ್ಲೇ ಅತ್ಯಧಿಕ ದಾಖಲೆಯಾಗಿದೆ.

ಈ ಹಿಂದೆ ಮಾ.20 ರಂದು ಪಾಕಿಸ್ತಾನದ ಬಲೂಚಿಸ್ತಾನದ ಗ್ವಾದರ್ ಬಂದರಿನ ಮೇಲೆಉಗ್ರರು ದಾಳಿ ನಡೆಸಿರುವ ಸುದ್ದಿ ಬೆಳಕಿಗೆಬಂದಿತ್ತು. ಎಂಟು ಶಸ್ತ್ರಸಜ್ಜಿತ ಭಯೋತ್ಪಾ-ದಕರು ಗ್ವಾದರ್ ಬಂದರಿನ ಸಂಕೀರ್ಣಕ್ಕೆ ಪ್ರವೇಶಿಸಿದ್ದರು ಎಂದು ಹೇಳಲಾಗಿದೆ. ಇದಾದ ನಂತರ ಸ್ಥಳದಲ್ಲೇ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟಗಳು ಸಂಭವಿಸಿದ್ದವು.

ನಿಷೇಧಿತ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ ಈ ದಾಳಿ ನಡೆಸಿದೆ ಎಂದು ಮಕ್ರನ್ ವಿಭಾಗದ ಕಮಿಷನರ್ ಸಯೀದ್ ಅಹ್ಮದ್ ಉಮ್ರಾನಿ ಹೇಳಿದ್ದಾರೆ.
ದಾಳಿಯಲ್ಲಿ ಯಾವುದೇ ಸ್ಥಳೀಯರು ಗಾಯಗೊಂಡಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಪ್ರತೀಕಾರವಾಗಿ ಏಳು ಮಂದಿ ದಾಳಿಕೋರರನ್ನು ಕೊಲ್ಲಲಾಯಿತು ಮತ್ತು ಇದರ ನಂತರ ಗುಂಡಿನ ದಾಳಿಯನ್ನು ನಿಲ್ಲಿಸಲಾಯಿತು ಎಂದು ಗ್ವಾದರ್ ಹಿರಿಯ ಪೆÇಲೀಸ್ ಅಧೀಕ್ಷಕ ಜೊಹೈಬ್ ಮೊಹ್ಸಿನ್ ಮಾಧ್ಯಮಗಳಿಗೆ ತಿಳಿಸಿದ್ದರು.

ಬಲೂಚಿಸ್ತಾನದ ಮುಖ್ಯಮಂತ್ರಿ ಮಿರ್ ಸಫ್ರ್ರಾಜ್ ಬುಗ್ತಿ ಅವರು ಗ್ವಾದರ್‍ನಲ್ಲಿ ನಡೆದ ದಾಳಿಯನ್ನು ಖಂಡಿಸಿದರು ಮತ್ತು ಅದನ್ನು ಮುಕ್ತ ಭಯೋತ್ಪಾದನೆ ಎಂದು ಕರೆದಿದ್ದಾರೆ. ದುಷ್ಕರ್ಮಿಗಳನ್ನು ಬಿಡಲಾಗುವುದಿಲ್ಲ ಮತ್ತು ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು