LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಡೆಲ್ಲಿ ವಿರುದ್ಧ ಗುಜರಾತ್‍ಗೆ ಗೆಲ್ಲುವ ತವಕ

ಅಹಮ್ಮದಾಬಾದ್: ಐಪಿಎಲ್ 2024 ರಲ್ಲಿ ಇಂದಿನ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿದೆ. ಅಹಮ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಗುಜರಾತ್ ಈ ಸೀಸನ್ ನಲ್ಲಿ ಆರಂಭ ಉತ್ತಮವಾಗಿತ್ತು.

ಆದರೆ ಇದರ ನಡುವೆ ಕೆಲವು ಪಂದ್ಯಗಳನ್ನು ಸೋತು ಹಿನ್ನಡೆ ಅನುಭವಿಸಿತು. ಆದರೆ ಸತತ ಎರಡು ಸೋಲುಗಳ ನಂತರ ಕಳೆದ ಪಂದ್ಯದಲ್ಲಿ ಶುಬ್ಮನ್ ಗಿಲ್ ಪಡೆ ಕೊನೆಗೂ ಗೆಲುವಿನ ನಿಟ್ಟುಸಿರು ಬಿಟ್ಟಿತ್ತು.ಈ ಟೂರ್ನಿಯಲ್ಲಿ ಒಟ್ಟು 6 ಪಂದ್ಯವಾಡಿರುವ ಗುಜರಾತ್ ಗೆದ್ದಿದ್ದು 3 ರಲ್ಲಿ. ಸದ್ಯಕ್ಕೆ ಅಂಕಪಟ್ಟಿಯಲ್ಲಿ ಗುಜರಾತ್ 6 ನೇ ಸ್ಥಾನದಲ್ಲಿದೆ. ಹೊಸ ನಾಯಕತ್ವ ಜೊತೆಗೆ ಅನುಭವಿ ವೇಗಿ ಮೊಹಮ್ಮದ್ ಶಮಿ ಅನುಪಸ್ಥಿತಿ ಗುಜರಾತ್ ಗೆ ಈ ಬಾರಿ ಬಹುವಾಗಿ ಕಾಡಿದೆ. ಆದರೆ ಆಶಿಷ್ ನೆಹ್ರಾ ಸ್ಪೂರ್ತಿದಾಯಕ ಕೋಚಿಂಗ್ ತಂಡಕ್ಕೆ ಭರವಸೆ ಮೂಡಿಸಿದೆ.

ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಕೂಡಾ ಸತತ ಎರಡು ಸೋಲುಗಳ ನಂತರ ಕಳೆದ ಪಂದ್ಯದಲ್ಲಿ ಗೆಲುವು ಕಂಡಿತ್ತು. ರಿಷಬ್ ಪಂತ್ ಒಂದು ವರ್ಷಗಳ ಬಳಿಕ ಕ್ರಿಕೆಟ್ ಕಣಕ್ಕೆ ಮರಳಿದ್ದರಿಂದ ಅವರ ನಾಯಕತ್ವದಲ್ಲಿ ಡೆಲ್ಲಿ ಮೇಲೆ ಅಪಾರ ನಿರೀಕ್ಷೆಯಿತ್ತು. ನಿರೀಕ್ಷೆಗೆ ತಕ್ಕಷ್ಟು ಡೆಲ್ಲಿಯಿಂದ ಪ್ರದರ್ಶನ ಬಂದಿಲ್ಲ.

ಆದರೆ ಕಳೆದ ಪಂದ್ಯದಲ್ಲಿ ರಿಷಬ್ ಆಡಿದ ರೀತಿ ಅವರು ಫಾರ್ಮ್ ಗೆ ಮರಳಿರುವುದರ ಸೂಚನೆಯಾಗಿದೆ. ಡೆಲ್ಲಿ ಇದುವರೆಗೆ ಆಡಿದ 6 ಪಂದ್ಯಗಳ ಪೈಕಿ 2 ರಲ್ಲಿ ಮಾತ್ರ ಗೆಲುವು ಕಂಡಿದೆ. ಸದ್ಯಕ್ಕೆ ಅಂಕಪಟ್ಟಿಯಲ್ಲಿ 9 ನೇ ಸ್ಥಾನದಲ್ಲಿರುವ ಡೆಲ್ಲಿಗೆ ಪ್ಲೇ ಆಫ್ ಹಂತ ಕಷ್ಟವಾಗಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗುವುದು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು