LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

HAL ವಿಮಾನ ನಿಲ್ದಾಣ ನವೀಕರಣ: ಮಾಸ್ಟರ್ ಪ್ಲಾನ್‌ಗೆ AAI ಒಪ್ಪಿಗೆ

ಬೆಂಗಳೂರು: ನಗರದ ಎಚ್‌ಎಎಲ್‌ ವಿಮಾನ ನಿಲ್ದಾಣದ ನವೀಕರಣಕ್ಕೆ ಸಂಬಂಧಿಸಿದ ಮಾಸ್ಟರ್ ಪ್ಲಾನ್'ಗೆ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ) ಒಪ್ಪಿಗೆ ನೀಡಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಯಾಚರಣೆ ಆರಂಭ ಮಾಡುವವರೆಗೂ ಈ ವಿಮಾನ ನಿಲ್ದಾಣ ನಗರದ ವಾಯು ಸಂಚಾರ ಅಗತ್ಯಗಳನ್ನು ಪೂರೈಸುತ್ತಿತ್ತು. ಇದೀಗ ರಕ್ಷಣಾ ಪಡೆಗಳು, ವಿಐಪಿಗಳು ಮತ್ತು ವಿವಿಐಪಿಗಳು ಮತ್ತು ಖಾಸಗಿ ಸಂಸ್ಥೆಗಳು ಬಳಸುವಂತಹ ಸರಾಸರಿ 12 ಸಣ್ಣ ವಿಮಾನಗಳು ಪ್ರತಿದಿನ ಎಚ್‌ಎಎಲ್ ವಿಮಾನ ನಿಲ್ದಾಣವನ್ನು ಬಳಸುತ್ತಿವೆ. ಈ ವಿಮಾನ ನಿಲ್ದಾಣದಲ್ಲಿ 30 ಪಾರ್ಕಿಂಗ್ ಸ್ಥಳಗಳನ್ನು ಹೊಂದಿದ್ದು, 24x7 ತೆರೆದಿರುತ್ತದೆ.

ಪ್ರಸ್ತುತ ಸಿದ್ಧಪಡಿಸಿರುವ ಮಾಸ್ಟರ್ ಪ್ಲಾನ್ 2047 ರವರೆಗೂ ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಮಾಡಲಿದೆ. ವರ್ಷಕ್ಕೆ 40 ಲಕ್ಷ ಪ್ರಯಾಣಿಕರನ್ನು ಹೊತ್ತೊಯ್ಯುವ ಗುರಿಯನ್ನು ಹೊಂದಿದೆ. ಪೀಕ್ ಅವರ್‌ಗಳಲ್ಲಿ ಗರಿಷ್ಠ 2,500 ಪ್ರಯಾಣಿಕರನ್ನು ನಿಭಾಯಿಸಬಲ್ಲದು. 2007-08 ರ ಆರ್ಥಿಕ ವರ್ಷದಲ್ಲಿ ಪ್ರಯಾಣಿಕರ ಸಂಚಾರಕ್ಕೆ ಬಂದ್ ಆಗುವುದಕ್ಕೂ ಮುನ್ನೂ 10 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರನ್ನು ನಿರ್ವಹಿಸಿದೆ.

ಯೋಜನೆಯ ಹಂತ-I ರಲ್ಲಿ, ವಿಮಾನ ನಿಲ್ದಾಣದ ಪ್ರದೇಶವನ್ನು 21,885 ಚದರ ಮೀಟರ್‌ನಿಂದ 32,000 ಚದರ ಮೀಟರ್‌ಗೆ ವಿಸ್ತರಿಸಲಾಗುವುದು. ಟರ್ಮಿನಲ್ ಕಟ್ಟಡವನ್ನು ಕೆಡವಿ ಹೊಸ ಕಟ್ಟಡ ನಿರ್ಮಿಸಲಾಗುವುದು. ಒಂದು ಹಂತದಲ್ಲಿ 'ಆಗಮನ'. ಮತ್ತೊಂದು ಹಂತದಲ್ಲಿ 'ನಿರ್ಗಮನ'ಗಳ ಇರಲಿದೆ. ಪ್ರಸ್ತುತ ಇರುವ ನಿಲ್ದಾಣದಲ್ಲಿ ಆಗಮನ ಹಾಗೂ ನಿರ್ಗಮನ ಎರಡೂ ಒಂದೇ ಸ್ಥಳದಲ್ಲಿದೆ. ಇದಲ್ಲದೆ , ಮಲ್ಟಿ-ಲೆವೆಲ್ ಕಾರ್ ಪಾರ್ಕಿಂಗ್ ಸೌಲಭ್ಯ ಇರಲಿದ್ದು, 500 ಕಾರುಗಳನ್ನು ನಿಲುಗಡೆ ಮಾಡಬಹುದಾಗಿದೆ. ಟರ್ಮಿನಲ್ ಮುಂಭಾಗದ ದ್ವಿಪಥ ರಸ್ತೆಯನ್ನು ಚತುಷ್ಪಥವಾಗಿ ವಿಸ್ತರಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಮಾನ ನಿಲ್ದಾಣದ ರನ್‌ವೇಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಇಲ್ಲಿನ ರನ್ ವೇ 3,306 ಮೀಟರ್ ಉದ್ದ ಮತ್ತು 61 ಮೀಟರ್ ಅಗಲವನ್ನು ಹೊಂದಿದ್ದು, ಆಯಾಮದ ಪ್ರಕಾರ ಇದು ದೇಶದ ಅತ್ಯುತ್ತಮ ರನ್‌ವೇಗಳಲ್ಲಿ ಒಂದಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದೊಂದಿಗೆ ಆಗಿರುವ ಒಪ್ಪಂದದ ಪ್ರಕಾರ ನಮ್ಮ ವಿಮಾನ ನಿಲ್ದಾಣವು ಮೇ 2033 ರೊಳಗೆ ನಾಗರಿಕ ಕಾರ್ಯಾಚರಣೆಯನ್ನು ಆರಂಭಿಸಲಿದೆ. ಆ ಹೊತ್ತಿಗೆ ನಗರದಲ್ಲಿ ಎರಡು ವಿಮಾನ ನಿಲ್ದಾಣಗಳಿರಲಿವೆ. ನಗರದಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿದ್ದು, ಮತ್ತೊಂದು ವಿಮಾನ ನಿಲ್ದಾಣಕ್ಕೆ ಬೇಡಿಕೆ ಹೆಚ್ಚಾಗಿರುತ್ತದೆ. ಹೀಗಾಗಿ ಭವಿಷ್ಯಕ್ಕೆ ಸಜ್ಜಾಗುತ್ತಿದ್ದೇವೆಂದು ಹೇಳಿದ್ದಾರೆ.

ಹೆಚ್ಎಳ್ ವಿಮಾನ ನಿಲ್ದಾಣವನ್ನು ಜನವರಿ 1941 ರಲ್ಲಿ ತೆರೆಯಲಾಗಿತ್ತು. ಆದರೆ ವಾಣಿಜ್ಯ ಕಾರ್ಯಾಚರಣೆಗಳು ಐದು ವರ್ಷಗಳ ನಂತರ ಪ್ರಾರಂಭವಾಯಿತು. HAL ವಿಮಾನ ನಿಲ್ದಾಣವು ನೆರೆ ನಗರಗಳಿಗೆ ಪ್ರಾದೇಶಿಕ ಸಂಪರ್ಕ ಯೋಜನೆ (UDAAN) ಕಾರ್ಯಾಚರಣೆಗಳನ್ನು ಒದಗಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ ಎಂದು ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು