LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಡಿಸೆಂಬರ್ 1ಕ್ಕೆ ತೆರೆ ಮೇಲೆ `ಅರ್ದಂಬರ್ಧ ಪ್ರೇಮಕಥೆ'

ಡಿಸೆಂಬರ್ 1ಕ್ಕೆ ತೆರೆ ಮೇಲೆ `ಅರ್ದಂಬರ್ಧ ಪ್ರೇಮಕಥೆ' ಜರ್ನಿಯೊಂದಿಗೆ ಜನರನ್ನು ತಲುಪುತ್ತಿದೆ ದಿವ್ಯಾ-ಅರವಿಂದ್ ಜೋಡಿ ನಿರ್ದೇಶಕ ಅರವಿಂದ್ ಕೌಶಿಕ್ ಆರಂಭದಿಂದಲೂ ಹೊಸತನಕ್ಕೆ ಹೆಚ್ಚು ತೆರೆದುಕೊಂಡವರು. ಕನ್ನಡ ಚಿತ್ರರಂಗ ಇನ್ನೂ ಫಿಲ್ಮ್ ಬಳಸಿ ಸಿನಿಮಾ ಮಾಡುತ್ತಿದ್ದಾಗಲೇ ಡಿಜಿಟಲ್ ಫಾಮ್ರ್ಯಾಟಿನಲ್ಲಿ ಸಿನಿಮಾ ರೂಪಿಸಿದವರು.

ತುಘ್ಲಕ್, ನಮ್ ಏರಿಯಾಲ್ ಒಂದಿನ, ಹುಲಿರಾಯ ಮೊದಲಾದ ಚಿತ್ರಗಳು ಅರವಿಂದ್ ಅವರ ವಿಭಿನ್ನ ಚಿಂತನೆಗೆ ಸಾಕ್ಷಿ. ಈ ಹಿಂದೆ ಅರವಿಂದ್ ಕೌಶಿಕ್ ಆಯ್ಕೆ ಮಾಡಿಕೊಂಡಿದ್ದ ಕಲಾವಿದರು, ತಂತ್ರಜ್ಞರೆಲ್ಲಾ ಇವತ್ತಿಗೆ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಹೀಗಾಗಿ ಇನ್ನೇನು ತೆರೆಗೆ ಬರಲು ಸಿದ್ದಗೊಂಡಿರುವ ಅವರ ಅರ್ದಂಬರ್ಧ ಪ್ರೇಮಕಥೆಯ ಬಗ್ಗೆ ಕೂತೂಹಲಗಳು ಗರಿಗೆದರಿಕೊಂಡಿವೆ.

ಈ ಚಿತ್ರದಲ್ಲಿ ಬಿಗ್ ಬಾಸ್ ಸ್ಪರ್ಧಿಗಳಾಗಿ ಹೆಚ್ಚು ಹೆಸರು ಮಾಡಿದ ನಟಿ ದಿವ್ಯಾ ಉರುಡುಗ ಮತ್ತು ಬೈಕರ್ ಅರವಿಂದ್ ಕೆ.ಪಿ. ಜೊತೆಯಾಗಿ ನಟಿಸಿದ್ದಾರೆ. ನಿಜಜೀವನದಲ್ಲೂ ಈ ಜೋಡಿ ಒಂದಾಗಲಿದೆ ಎನ್ನುವ ಗುಮಾನಿ ಇರುವುದು ಕೂಡಾ ಅರ್ದಂಬರ್ಧ ಪ್ರೇಮಕಥೆಯ ಕುರಿತಾಗಿ ಕ್ಯೂರಿಯಾಸಿಟಿ ಹೆಚ್ಚಲು ಕಾರಣವಾಗಿದೆ.

ಸದ್ಯಕ್ಕೆ ಅರವಿಂದ್ ಮತ್ತು ದಿವ್ಯಾ ರಾಜ್ಯವ್ಯಾಪಿ ಪ್ರವಾಸ ಕೈಗೊಂಡಿದ್ದಾರೆ. ಪ್ರತೀ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ಮತ್ತು ಜನ ಸಾಮಾನ್ಯರನ್ನು ಖುದ್ದು ಭೇಟಿ ಮಾಡಿ ಚಿತ್ರದ ಪ್ರಚಾರಕಾರ್ಯದಲ್ಲಿ ನಿರತರಾಗಿದ್ದಾರೆ. ಇದೇ ಡಿಸೆಂಬರ್ 1ರಂದು `ಅರ್ದಂಬರ್ಧ ಪ್ರೇಮಕಥೆ' ತೆರೆಗೆ ಬರುತ್ತಿದೆ.

ಬಕ್ಸಸ್ ಮೀಡಿಯಾ, ಆರ್.ಎ.ಸಿ ವಿಷುವಲ್ಸ್ ಮತ್ತು ಲೈಟ್ ಹೌಸ್ ಮೀಡಿಯಾದ ಸಹಕಾರದೊಂದಿಗೆ ಈ ಚಿತ್ರವನ್ನು ನಿರ್ಮಿಸಿದೆ. ದಿವ್ಯಾ ಮತ್ತು ಅರವಿಂದ್ ಜೊತೆಗೆ ರ್ಯಾಪರ್ ಅಲೋಕ್, ಶ್ರೇಯಾ ಬಾಬು, ವೆಂಕಟಶಾಸ್ತ್ರಿ, ಪ್ರದೀಪ್ ರೋಷನ್, ಸೂರಜ್ ಹೂಗಾರ್, ಸುಜಿತ್ ಶೆಟ್ಟಿ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು