LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ದಿ ಎಂಡ್" ಚಿತ್ರದಲ್ಲಿ ಹನುಮಾನ್ ಚಾಲೀಸ

ಪುಣ್ಯ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ಪವನ್ ಕುಮಾರ್ ನಿರ್ದೇಶನದ "ದಿ ಎಂಡ್" ಚಿತ್ರದ ಹಾಡೊಂದರ (ಹನುಮಾನ್ ಚಾಲೀಸ) ಬಿಡುಗಡೆಯಾಗಿದೆ.ನಿರ್ಮಾಪಕರಾದ ಶಿಲ್ಪ ಶ್ರೀನಿವಾಸ್, ಮಂಜುನಾಥ್, ಧರ್ಮಶ್ರೀ ಮಂಜುನಾಥ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ವೆಂಕಟೇಶ್ ಮುಂತಾದವರು ಆಗಮಿಸಿಶುಭ ಕೋರಿದರು.

ಕನ್ನಡ ಪ್ರಥಮ ಸೂಪರ್ ಹೀರೋ ಕಾನ್ಸೆಪ್ಟ್ ನ ಚಿತ್ರ "ದಿ ಎಂಡ್". ಈಗಾಗಲೇ ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಕೇವಲ ಐದು ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ವಿಶೇಷ ಪಾತ್ರದಲ್ಲಿ ನಟಿಸಲು ಅನಂತನಾಗ್ ಅವರ ಜೊತೆ ಮಾತುಕತೆ ನಡೆಯುತ್ತಿದೆ. ಹದಿನೆಂಟು ಪುರಾಣಗಳನ್ನು ಆಧರಿಸಿ ಮಾಡುತ್ತಿರುವ ಈ ಚಿತ್ರ, ಒಂಭತ್ತು ಭಾಷೆಗಳಲ್ಲಿ ಐದು ಭಾಗಗಳಲ್ಲಿ ಬರಲಿದೆ.

ಇದು ಮೊದಲ ಭಾಗ."ದಿ ಎಂಡ್" ಚಿತ್ರಕ್ಕೆ "PREAMBLE"" ಎಂಬ ಅಡಿಬರಹವಿದೆ."PREAMBLE" ಎಂದರೆ ಪೀಠಿಕೆ ಎಂದು ಅರ್ಥ. ಇನ್ನು ಸರ್ವಕಾಲಿಕ ಸೂಪರ್ ಹೀರೋ ಹನುಮಂತನ ಮಹಿಮೆಯನ್ನು ವರ್ಣಿಸುವ ಹನುಮಾನ್ ಚಾಲೀಸ ಹಾಡನ್ನು ಈ ಚಿತ್ರದಲ್ಲಿ ಬಳಸಿಕೊಂಡಿದ್ದೇವೆ. ಈಗ ಹಾಡನ್ನು ಬಿಡುಗಡೆ ಮಾಡಿದ್ದೇವೆ.

ಐದು ಪ್ರಸಿದ್ದ ಶಿವ ದೇಗುಲಗಳಲ್ಲಿ ಏಕಕಾಲಕ್ಕೆ ಈ ಹಾಡು ಬಿಡುಗಡೆಯಾಗಿರುವುದು ವಿಶೇಷ. ಅರುಣ್ ಆಂಡ್ರ್ಯೂ ಸಂಗೀತ ನೀಡಿರುವ ಈ ಹಾಡನ್ನು ಮಧುಕುಮಾರ್ ಭಾವಪರವಶರಾಗಿ ಹಾಡಿದ್ದಾರೆ. ಅಂದುಕೊಂಡ ಹಾಗೆ ಆದರೆ "ದಿ ಎಂಡ್" ಇದೇ ಮೇ ವೇಳೆಗೆ ನಿಮ್ಮ ಮುಂದೆ ಬರಲಿದೆ ಎಂದು ನಿರ್ದೇಶಕ ಪವನ್ ಕುಮಾರ್ ತಿಳಿಸಿದರು.

ಪವನ್ ಕುಮಾರ್ ಅವರು ಆಯ್ದುಕೊಂಡಿರುವ ಕಥೆ ಚೆನ್ನಾಗಿದೆ. ಸೂಪರ್ ಹೀರೋ ಎಂದರೆ ವಿಶೇಷ ಶಕ್ತಿಯುಳ್ಳವನು ಎಂದು. ಚಿತ್ರದಲ್ಲಿ ನಾನು ಸೂಪರ್ ಹೀರೋ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಎಂದರು ನಾಯಕ ರವಿಶೇಖರ್.ನಾಯಕಿ ಪವಿತ್ರ, ವಿಶೇಷ ಪಾತ್ರದಲ್ಲಿ ನಟಿಸಲಿರುವ ನಟಿ ಚೈತ್ರಾ ಕೊಟ್ಟೂರ್, ಸಂಗೀತ ನಿರ್ದೇಶಕ ಅರುಣ್ ಆಂಡ್ರ್ಯೂ, ಗಾಯಕ ಮಧುಕುಮಾರ್ ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು "ದಿ ಎಂಡ್" ಕುರಿತು ಮಾತನಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು