LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಏಟಿಗೆ ಎದಿರೇಟು ಹನುಮ ಧ್ವಜ ವಿವಾದ: ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪ

ಬೆಂಗಳೂರು: ಮಂಡ್ಯ ಜಿಲ್ಲೆ ಕೆರಗೋಡಿನಲ್ಲಿ ನಡೆದಿರುವ ಹನುಮಧ್ವಜ ವಿವಾದಕ್ಕೆ ಸಂಬಂಧಪಟ್ಟಂತೆ ರಾಜಕೀಯ ಪಕ್ಷಗಳ ನಾಯಕರ ಆರೋಪ-ಪ್ರತ್ಯಾರೋಪಗಳು ಹೆಚ್ಚಾಗತೊಡಗಿವೆ. ಇಂದು ಬೆಳಿಗ್ಗೆ ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಚೆಲುವರಾಯ ಸ್ವಾಮಿ, ಜೆಡಿಎಸ್-ಬಿಜೆಪಿ ಮುಖಂಡರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಮಂಡ್ಯ ಜಿಲ್ಲೆಯಲ್ಲಿ ಹೊರಗಿನಿಂದ ಬಂದು ವಿವಾದ ಸೃಷ್ಟಿ ಮಾಡುತ್ತಿದ್ದಾರೆ. ನೆಲೆಯಿಲ್ಲದಿದ್ದವರಿಗೆ ನೆಲ ಕಲ್ಪಿಸಿಕೊಡುವ ಕೆಲಸವನ್ನು ಜೆಡಿಎಸ್ ಮಾಡಲು ಮುಂದಾಗಿದೆ. ಎಚ್‍ಡಿ ಕುಮಾರಸ್ವಾಮಿ ಕೇಸರಿ ಶಾಲು ಹಾಕಿರುವ ವಿರುದ್ಧ ಕಿಡಿಕಾರಿದ್ದಾರೆ. ಒಂದು ಹಂತದಲ್ಲಿ ಮುಂದುವರಿದು ಮಾತನಾಡಿದ ಅವರು, ಚಿಕ್ಕಮಗಳೂರಿನ ಗಲಭೆಕೋರನೋರ್ವ ಬಂದು ಮಂಡ್ಯದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾನೆ. ನೂತನ್ ಎಂಬಾತನ ಮೇಲೆ ಹಲವು ಪ್ರಕರಣಗಳಿವೆ ಎಂದು ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಯಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಚೆಲುವರಾಯಸ್ವಾಮಿ ವಿರುದ್ಧ ಹರಿಹಾಯ್ದ ಕುಮಾರಸ್ವಾಮಿ, ತಮ್ಮ ಹಳೆಯ ಸ್ನೇಹಿತರು ನನಗೆ ಹಲವು ಸಲಹೆಗಳನ್ನು ನೀಡಿ, ನಾನು ಕೇಸರಿ ಶಾಲು ಹಾಕಿದ್ದನ್ನೆ ಟೀಕಿಸಿದ್ದಾರೆ. ನಮ್ಮ ಮೈತ್ರಿ ಪಕ್ಷವಾದ ಬಿಜೆಪಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಿತು.

ಆಹ್ವಾನದ ಮೇರೆಗೆ ಪಾಲ್ಗೊಂಡಿದ್ದೆ. ಕೇಸರಿ ಶಾಲು ಹಾಕಿದ್ದೇ ದೊಡ್ಡ ತಪ್ಪು ಎಂದು ಬಿಂಬಿಸಿದ್ದಾರೆ. ನಾನು ಕೇಸರಿ ಶಾಲು ಹಾಕಿದ್ದೇ ಮಹಾ ಅಪರಾಧವಾ? ಇವರಿಂದ ನಾನು ಕಲಿಯೋದು ಏನು ಇಲ್ಲ. ಮಂಡ್ಯ ಜಿಲ್ಲೆ ಜನತೆ ನನಗೆ ಸರ್ಟಿಫಿಕೇಟ್ ಕೊಡುತ್ತಾರೆ ಎಂದಿದ್ದಾರೆ.
ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕಾಂಗ್ರೆಸ್ಸಿಗರು ಈಗ ಇಲ್ಲ. ಈಗಿರುವವರೆಲ್ಲಾ ಹಗಲುದರೋಡೆಕೋರರು ಎಂದು ಕಾಂಗ್ರೆಸ್ ವಿರುದ್ಧವೂ ವಾಗ್ದಾಳಿ ನಡೆಸಿದರು.

ಮತ್ತೊಂದೆಡೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆರಗೋಡು ಪ್ರಕರಣದಲ್ಲಿ ಧ್ವಜಹಾರಿಸಲು ಸಂಬಂಧಪಟ್ಟವರಿಗೆ ಮುಚ್ಚಳಿಕೆ ಬರೆದುಕೊಟ್ಟು ಅದನ್ನು ಉಲ್ಲಂಘಿಸಿ ನಡೆದುಕೊಂಡಿದ್ದಾರೆ. ಅವರು ವಿವಾದ ಸೃಷ್ಟಿಸಲು ರಾಜಕೀಯ ಮಾಡಲು ಮುಂದಾಗಿದ್ದಾರೆ ಎಂದು ಹೇಳಿದರು.ಫೆ.9ರಂದು ಮಂಡ್ಯ ಬಂದ್‍ಗೆ ಕರೆ ನೀಡಿರುವುದಕ್ಕೆ ಪ್ರತಿಕ್ರಿಯಿಸಿ, ಅವರು ಏನಾದರೂ ಮಾಡಿಕೊಳ್ಳಲಿ, ಜನ ತೀರ್ಮಾನ ಮಾಡುತ್ತಾರೆ ಎಂದಷ್ಟೇ ಹೇಳುವ ಮೂಲಕ ವಿಪಕ್ಷದವರ ವರ್ತನೆ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು