LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ಹನುಮಾನ್’ ಸಿನಿಮಾದ ಮೊದಲ ನೋಟ ರಿಲೀಸ್.. ಕನ್ನಡದಲ್ಲಿಯೂ ಬಂತು ಟ್ರೇಲರ್

ಪ್ರಶಾಂತ್ ವರ್ಮಾ ಆಕ್ಷನ್ ಕಟ್ ಹೇಳಿರುವ ತೇಜ ಸಜ್ಜ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ಹನು-ಮಾನ್ ಟೀಸರ್ ಬಿಡುಗಡೆಯಾಗಿದೆ. ಪ್ರೈಮ್ ಶೋ ಎಂಟಟೈನ್ಮೆಂಟ್ ಬ್ಯಾನರ್ ನಿರ್ಮಾಣದಲ್ಲಿ ಮೂಡಿ ಬರ್ತಿರುವ ಬಿಗ್ ಬಜೆಟ್ ಪ್ಯಾನ್ ಇಂಡಿಯಾ ಸಿನಿಮಾ ಇದಾಗಿದೆ. ಟ್ರೇಲರ್ ಝಲಕ್ ಮೂಲಕ ಪ್ರೇಕ್ಷಕರೆದುರು ಸೂಪರ್ ಹೀರೋ 'ಹನುಮಾನ್' ದರ್ಶನ ಕೊಟ್ಟಿದ್ದಾರೆ.

ನಿರ್ದೇಶಕ ಪ್ರಶಾಂತ್ ವರ್ಮಾ ಭಾರತದ ಮೊದಲ ಸೂಪರ್ ಹೀರೋ ಹನು-ಮಾನ್ ಬಗ್ಗೆ ಕಥೆ ಹೆಣೆದು ಪ್ಯಾನ್ ಇಂಡಿಯಾ ನಿರ್ದೇಶಕನಾಗಿ ಹೊರ ಹೊಮ್ಮುತ್ತಿದ್ದಾರೆ. ಚಿತ್ರದಲ್ಲಿ ನಾಯಕ ನಟನಾಗಿ ತೇಜ ಸಜ್ಜ ನಟಿಸುತ್ತಿದ್ದು, ಚಿತ್ರಕ್ಕಾಗಿ ಭರ್ಜರಿ ತಯಾರಿ ನಡೆಸಿರೋದು ಟ್ರೇಲರ್ ನೋಡಿದಾಗಲೇ ತಿಳಿದು ಬರುತ್ತೆ.

ಚಿತ್ರದಲ್ಲಿ ನಾಯಕಿಯಾಗಿ ಅಮೃತಾ ಐಯ್ಯರ್ ನಟಿಸಿದ್ದಾರೆ. ಟ್ರೇಲರ್ ಸಖತ್ ಪ್ರಾಮಿಸಿಂಗ್ ಆಗಿದ್ದು, ನಾಯಕ ನಟ ತೇಜ ಸಜ್ಜ ಲುಕ್, ಚಿತ್ರದ ಮೇಕಿಂಗ್, ಕ್ಯಾಮೆರಾ ವರ್ಕ್, ಮ್ಯೂಸಿಕ್ ಎಲ್ಲವೂ ಗಮನ ಸೆಳೆಯುತ್ತಿದೆ. ಯಥೋ ಧರ್ಮ ತತೋ ಹನುಮಾ... ಯಥೋ ಹನುಮ ತತೋ ಜಯ... (ಎಲ್ಲಿ ಸದಾಚಾರವಿದೆಯೋ ಅಲ್ಲಿ ಹನುಮಂತನು, ಮತ್ತು ಎಲ್ಲಿ ಹನುಮಂತ ಇದ್ದಾನೋ ಅಲ್ಲಿ ಜಯವಿದೆ ಎಂಬ ಡೈಲಾಗ್ ಮೂಲಕ ಹನುಮಾನ್ ಪ್ರಪಂಚನ್ನು ಪರಿಚಯಿಸಲಾಗಿದೆ.

ಅಂಜನಾದ್ರಿ ಬೆಟ್ಟ, ಹನುಮಾನ್ ಪ್ರತಿಮೆ ಟ್ರೇಲರ್ ಹೈಲೆಟ್ಸ್ ಗಳಲ್ಲೊಂದು. ವರಲಕ್ಷಿ ಶರತ್ ಕುಮಾರ್, ವಿನಯ್ ರೈ, ರಾಜ್ ದೀಪಕ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಗೆಟಪ್ ಶ್ರೀನು, ಸತ್ಯ ಒಳಗೊಂಡ ಸ್ಟಾರ್ ಕಲಾವಿದರ ತಾರಾಬಳಗ ಚಿತ್ರದಲ್ಲಿದೆ. ಯುವ ಹಾಗೂ ಪ್ರತಿಭಾವಂತ ಸಂಗೀತ ನಿರ್ದೇಶಕರಾದ ಗೌರಹರಿ, ಅನುದೀಪ್ ದೇವ್ ಮತ್ತು ಕೃಷ್ಣ ಸೌರಭ್ ಸಂಗೀತ ನಿರ್ದೇಶನ, ದಶರಧಿ ಶಿವೇಂದ್ರ ಕ್ಯಾಮೆರಾ ವರ್ಕ್, ಎಸ್. ಬಿ ರಾಜು ತಲರಿ ಸಂಕಲನ ಚಿತ್ರಕ್ಕಿದೆ.

ಪ್ಯಾನ್ ವರ್ಲ್ಡ್ ಲೆವೆಲ್ ನಲ್ಲಿ ಹನುಮಾನ್ ಸಿನಿಮಾ ರಿಲೀಸ್ ಆಗ್ತಿದೆ. ಭಾರತೀಯ ವಿವಿಧ ಭಾಷೆಗಳಾದ ತೆಲುಗು, ಕನ್ನಡ, ಮರಾಠಿ, ತಮಿಳು, ಮಲಯಾಳಂ, ಇಂಗ್ಲೀಷ್, ಸ್ಯಾನೀಶ್, ಚೈನೀಸ್, ಜಪಾನೀಸ್ ಮತ್ತು ಕೊರಿಯನ್ ಭಾಷೆಯಲ್ಲಿ ಬಿಡುಗಡೆಯಾಗಲಿದೆ. ಸಂಕ್ರಾಂತಿ ಹಬ್ಬಕ್ಕೆ ವಿಶ್ವಾದ್ಯಂತ ಹನುಮಾನ್ ಸಿನಿಮಾದ ದರ್ಶನವಾಗಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು