LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಆಸ್ಟ್ರೇಲಿಯಾ ಟಿ20 ಸರಣಿಗೆ ಹಾರ್ದಿಕ್ ಅಲಭ್ಯ....?

ನವದೆಹಲಿ: ಗಾಯಗೊಂಡಿರುವ ಹಾರ್ದಿಕ್ ಪಾಂಡ್ಯ ಅವರು ವಿಶ್ವಕಪ್ ಟೂರ್ನಿಯ ನಂತರ ನಡೆಯಲಿರುವ ಆಸ್ಟ್ರೇಲಿಯಾ ಎದುರಿ ಟಿ20 ಸರಣಿಯಲ್ಲಿ ಆಡುವುದು ಅನುಮಾನವಾಗಿದೆ.

ಇದರಿಂದಾಗಿ ಅವರ ಬದಲಿಗೆ ಸೂರ್ಯಕುಮಾರ್ ಯಾದವ್ ಅಥವಾ ಋತುರಾಜ್ ಗಾಯಕವಾಡ್ ಅವರು ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ. ಟಿ20 ತಂಡದ ನಾಯಕರೂ ಆಗಿರುವ ಅವರು ಈಚೆಗೆ ವಿಶ್ವಕಪ್ ಪಂದ್ಯದಲ್ಲಿ ಗಾಯಗೊಂಡಿದ್ದರು. ಎಡಗಾಲಿನ ಪಾದದ ಅಸ್ಥಿರಜ್ಜು ಹಾನಿಯಾಗಿದೆ. ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಹೆಚ್ಚು ಸಮಯ ಬೇಕಿದೆ.

ಆದ್ದರಿಂದ ಅವರು ವಿಶ್ವಕಪ್ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ಡಿಸೆಂಬರ್ 10ರಿಂದ ನಡೆಯಲಿರುವ ಟಿ20 ಸರಣಿಯಲ್ಲಿ ಆಡುವ ಭಾರತ ತಂಡದೊಂದಿಗೆ ಅವರು ಪಯಣಿಸುವ ಸಾಧ್ಯತೆ ಇದೆ. ಅಲ್ಲಿಯವರೆಗೂ ಅವರು ವಿಶ್ರಾಂತಿ ತೆಗೆದುಕೊಳ್ಳಬಹುದು ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಈ ಟೂರ್ನಿಯಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್ ಮತ್ತು ವೇಗದ ಬೌಲರ್‍ಗಳು ಆಡುವ ಸಾಧ್ಯತೆ ಇಲ್ಲ. ವಿಶ್ವಕಪ್ ಟೂರ್ನಿಯಲ್ಲಿ ಆಡಿರುವ ಅವರೆಲ್ಲರೂ ನಂತರ ವಿಶ್ರಾಂತಿಗೆ ತೆರಳುವ ಸಾಧ್ಯತೆ ಇದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು