ಬೆಂಗಳೂರು: ಪಕ್ಷದ ಸಂಘಟನೆ ಕುರಿತು ವರಿಷ್ಠರೊಂದಿಗೆ ಚರ್ಚಿಸಲು ರಾಜ್ಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಇಂದು ಬೆಳಿಗ್ಗೆ ದೆಹಲಿಗೆ ತೆರಳಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನದ ನೇಮಕಾತಿ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಮಾಜಿ ಸಚಿವರಾದ ಎಚ್.ಸಿ. ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳ್ಕರ್, ಎಂ.ನಾರಾಯಣಸ್ವಾಮಿ, ಹಾಗ ರಹೀಮ್ ಖಾನ್ ಈ ಸ್ಥಾನದ ಆಕಾಂಕ್ಷಿಗಳು ಎಂದು ಹೇಳಲಾಗಿದೆ. ರಾಜ್ಯದ ನಾಲ್ಕು ವಲಯಗಳಿಗೆ ನಾಲ್ವರು ಅಧ್ಯಕ್ಷರನ್ನು ನೇಮಕ ಮಾಡಲು ಚಿಂತನೆ ನಡೆದಿದೆ ಎಂದು ತಿಳಿದುಬಂದಿದೆ.