LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಶಾಂತಿಯುತ ಹೋರಾಟ ಮುಂದುವರೆಸುತ್ತೇವೆ: ಹರೀಶ್‍ಗೌಡ

ದೊಡ್ಡಬಳ್ಳಾಪುರ: ರೈತರ ಫಲವತ್ತಾದ ಭೂಮಿಗೆ ವೈಜ್ಞಾನಿಕ ದರ ನೀಡುವಂತೆ ಒತ್ತಾಯಿಸಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಮನವಿ ಮಾಡಿದ್ದು, ಫೆ.5ರೊಳಗೆ ಸ್ಪಂದಿಸುವ ಭರವಸೆ ನೀಡಿದ್ದಾರೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಹರೀಶ್ ಗೌಡ ಹೇಳಿದರು.

ಕೊನಘಟ್ಟದ ಕಾಮನಬಂಡೆ ಸಮೀಪ ಕೊನಘಟ್ಟ, ನಾಗದೇನಹಳ್ಳಿ, ಕೋಡಿಹಳ್ಳಿ ಹಾಗೂ ಆದಿನಾರಾಯಣಹೊಸಹಳ್ಳಿ ರೈತರು ಕೆಐಎಡಿಬಿ ವಿರುದ್ಧ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಕಳೆದ ವಾರದಿಂದ ಈವರೆಗೆ ಕೆಐಎಡಿಬಿ ಅಧಿಕಾರಿಗಳು, ಮುಖ್ಯಕಾರ್ಯದರ್ಶಿ ಹಾಗೂ ಸಂಬಂಧಪಟ್ಟ ಸಚಿವರನ್ನು ಭೇಟಿ ರೈತರ ಹೋರಾಟ, ಬೇಡಿಕೆ ಕುರಿತು ಮನವರಿಕೆ ಮಾಡಿಕೊಡಲಾಗಿದೆ.

ಜ.31 ರಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ರೈತರ ಬೆಂಬಲಕ್ಕೆ ನಿಲ್ಲುವಂತೆ ಮನವಿ ಮಾಡಿದ್ದೇವೆ. ಕೆಐಎಡಿಬಿ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರ ಸ್ಪಂದಿಸದಿದ್ದರೆ ಖುದ್ದು ಕುಮಾರಸ್ವಾಮಿಯವರೇ ರೈತರ ಹೋರಾಟದಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿದರು.

ಅಧಿಕಾರಿಗಳಿಗೆ ಸಾಕಷ್ಟು ಮನವಿ ಕೊಟ್ಟಾಗ ಭೂಸ್ವಾಧೀನ ಪ್ರಕ್ರಿಯೆ ಮುಗಿದಿದೆ. ಡಿನೋಟಿಫೈ ಮಾಡುವ ಅಧಿಕಾರ ನಮಗಿಲ್ಲ. ಸರ್ಕಾರವೇ ತೀರ್ಮಾನ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಫೆ.1 ರಂದು ಕೈಗಾರಿಕಾ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ದೇವನಹಳ್ಳಿ ರೈತರಿಗೆ ಕೊಟ್ಟ ಮಾದರಿಯಲ್ಲೇ ನಮ್ಮ ರೈತರಿಗೂ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದ್ದೇವೆ ಎಂದರು.

ಸಚಿವರ ಬಳಿಗೆ ಕಾಂಗ್ರೆಸ್ ನ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ರವರು ಬಂದಿದ್ದರು. ಫೆ.5 ರೊಳಗೆ ಅಧಿಕಾರಿಗಳು, ಮುಖಂಡರ ಸಭೆ ಕರೆಯುವ ಭರವಸೆ ನೀಡಿದ್ದಾರೆ. ಒಂದು ವೇಳೆ ತ್ವರಿತವಾಗಿ ಈ ಸಮಸ್ಯೆಗಳನ್ನ ಪರಿಹರಿಸದಿದ್ದರೆ ಬೃಹತ್ ಮಟ್ಟದ ಪ್ರತಿಭಟನೆ ನಡೆಸಲಾಗುತ್ತದೆ. ಇದೇ ರೀತಿ ಕಾನೂನು ಹೋರಾಟಕ್ಕೂ ಸಹ ಮುಂದಾಗುತ್ತೇವೆ ಎಂದು ಹರೀಶ್ ಗೌಡ ಎಚ್ಚರಿಸಿದರು.
ವೈಜ್ಞಾನಿಕ ಬೆಲೆ ನೀಡದಿದ್ದರೆ ಶೇ. 90 ರಷ್ಟು ರೈತರು ಭೂಮಿ ಕೊಡಲು ಒಪ್ಪುವುದಿಲ್ಲ. ಎಲ್ಲಾ ರೈತರು,ಮುಖಂಡರು ಒಗ್ಗಟ್ಟಾಗಿ ಶಾಂತಿಯುತವಾಗಿ ಹೋರಾಟ ಮುಂದುವರಿಸಬೇಕು ಎಂದು ಹೇಳಿದರು.

ಇಂದು ಕೋಡಿಹಳ್ಳಿ ಭಾಗದಲ್ಲಿ ಕೆಐಎಡಿಬಿಯವರು ದೌರ್ಜನ್ಯ ಮಾಡುತ್ತಿದ್ದಾರೆ. ಮುಂದೆ ಎಲ್ಲಾ ಹೋಬಳಿಗಳಲ್ಲೂ ಇಂತಹ ಪರಿಸ್ಥಿತಿ ಬರಬಹುದು. ಆದ್ದರಿಂದ ಎಲ್ಲಾ ರೈತರು,ರೈತ ಸಂಘಟನೆಗಳು, ಕನ್ನಡ ಪರಸಂಘ ಸಂಸ್ಥೆಗಳು, ರಾಜಕೀಯ ಪಕ್ಷಗಳು ರೈತರ ಹೋರಾಟಕ್ಕೆ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಶೇ 90 ರಷ್ಟು ರೈತರು ಭೂಮಿ ಕೊಡಲ್ಲ ಎಂದಿದ್ದೆವು. ಜುಲೈನಲ್ಲಿ ತಿಂಗಳಸಭೆ ವಿಫಲವಾಗಿತ್ತು. ಕಳೆದ ನವೆಂಬರ್ ನಲ್ಲಿ ಭೂ ದರ ನಿಗದಿ. ಬಹಿಷ್ಕಾರ. ನಾಗದೇನಹಳ್ಳಿ ಮುಖಂಡ ಆನಂದಮೂರ್ತಿ ಮಾತನಾಡಿ, ಕೆಐಎಡಿಬಿ ದಬ್ಬಾಳಿಕೆಗೆ ನಾವೆಲ್ಲ ನಲುಗಿ ಹೋಗಿದ್ದೇವೆ. ಯಾವುದೇ ಬೆಲೆ ನಿಗದಿ ಮಾಡದೇ ಬಡವರ ಭೂಮಿ ಸ್ವಾಧೀನ ಮಾಡಿಕೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ.

ಭೂಮಿಗೆ ಮಾರುಕಟ್ಟೆ ಬೆಲೆ ನಿಗದಿ ಮಾಡದೇ ನಮ್ಮ ಜಮೀನು ಪಡೆಯಲು ಕೆಐಎಡಿಬಿ ಹಾಗೂ ರಾಜ್ಯ ಸರ್ಕಾರ ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು.ಜೀವನಾಧಾರವಾದ ಭೂಮಿಯನ್ನು ಪ್ರಾಣ ಹೋದರೂ ಕೊಡಲ್ಲ. ಫೆ. 12 ರಿಂದ ಆರಂಭವಾಗುವ ಅಧಿವೇಶನದಲ್ಲಿ ಶಾಸಕರಾದಿಯಾಗಿ ಎಲ್ಲರೂ ಇದರ ವಿರುದ್ದ ದನಿ ಎತ್ತಬೇಕು. ಅಧಿವೇಶನದಲ್ಲೇ ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ಒತ್ತಾಯಿಸಿದರು.

ಟಿಎಪಿಎಂಸಿಎಸ್ ಮಾಜಿ ಅಧ್ಯಕ್ಷ ಆನಂದ್, ಮಾತನಾಡಿ, ಭೂಸ್ವಾಧೀನ ಕಾಯ್ದೆಯ ಪ್ರಕಾರ ರೈತರ ಭೂಮಿಗೆ ನಾಲ್ಕು ಪಟ್ಟು ಪರಿಹಾರ ನೀಡಬೇಕು. ಇಲ್ಲವಾದರೆ ಭೂಮಿ ಬಿಟ್ಟುಕೊಡುವ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಗೋಷ್ಠಿಯಲ್ಲಿ ರೈತ ಮುಖಂಡರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು