LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಕಳಪೆ ಫೀಲ್ಡಿಂಗ್; ಪಂಜಾಬ್‌ಗೆ ಹ್ಯಾಟ್ರಿಕ್ ಸೋಲು: ಹೈದರಾಬಾದ್‌ಗೆ 33 ರನ್‌ಗಳ ಭರ್ಜರಿ ಜಯ

ಹೈದರಾಬಾದ್: ಕಳಪೆ ಫೀಲ್ಡಿಂಗ್, ಪ್ರಮುಖ ಬ್ಯಾಟರ್‌ಗಳ ವೈಫಲ್ಯದಿಂದ ಪಂಜಾಬ್ ಕಿಂಗ್ಸ್ ಮತ್ತೊಂದು ಪಂದ್ಯವನ್ನು ಕೈಚೆಲ್ಲಿದೆ. ತವರಲ್ಲಿ ಉತ್ತಮ ಪ್ರದರ್ಶನ ನೀಡಿದ ಸನ್‌ರೈಸರ್ಸ್ ಹೈದರಾಬಾದ್ 33 ರನ್‌ಗಳ ಭರ್ಜರಿ ಜಯ ಸಾಧಿಸಿದೆ.ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಎಸ್‌ಆರ್‌ಹೆಚ್ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 235 ರನ್ ಗಳಿಸಿತು. ನಂತರ ಬ್ಯಾಟಿಂಗ್ ಮಾಡಿದ ಪಿಬಿಕೆಎಸ್ 20 ಓವರ್‌ಗಳಿಗೆ 7 ವಿಕೆಟ್ ಕಳೆದುಕೊಂಡು 33 ರನ್‌ಗಳ ಸೋಲನುಭವಿಸಿತು.ಬ್ಯಾಟಿಂಗ್‌ನಲ್ಲಿ ಹೈದರಾಬಾದ್ ಉತ್ತಮ ಆರಂಭವನ್ನೇ ಪಡೆಯಿತು. ಅಭಿಷೇಕ್ ಶರ್ಮಾ (35) ಮತ್ತು ಟ್ರಾವಿಸ್ ಹೆಡ್ (38) ಜೋಡಿ ಅರ್ಧಶತಕದ ಜೊತೆಯಾಟವಾಡಿ ತಂಡಕ್ಕೆ ಚೈತನ್ಯ ತುಂಬಿತು. 7ನೇ ಓವರ್ ಹೊತ್ತಿಗೆ ಎರಡು ವಿಕೆಟ್ ಕಳೆದುಕೊಂಡಿದ್ದ ಹೈದರಾಬಾದ್‌ಗೆ ಇಶಾನ್ ಕಿಶನ್ ಮತ್ತು ಹೆನ್ರಿ ಕ್ಲಾಸೆನ್ ನೆರವಾದರು.
ಇಶಾನ್ ಮತ್ತು ಕ್ಲಾಸೆನ್ ಹೊಡಿಬಡಿ ಆಟದ ಮೂಲಕ ತಂಡವು ಸವಾಲಿನ ಮೊತ್ತ ಪೇರಿಸಲು ನೆರವಾದರು. ಪಂದ್ಯದಲ್ಲಿ ಪಂಜಾಬ್ ಕಳಪೆ ಫೀಲ್ಡಿಂಗ್ ಪ್ರದರ್ಶನ ಕಂಡುಬAತು. ಪ್ರಮುಖ ಮೂರು ಕ್ಯಾಚ್‌ಗಳನ್ನು ಕೈಚೆಲ್ಲಿ ಸಂಕಷ್ಟಕ್ಕೀಡಾದರು. ಈ ಅವಕಾಶವನ್ನು ಬಳಸಿಕೊಂಡ ಕಿಶನ್ ಅರ್ಧಶತಕ ಗಳಿಸಿದರು. ಕ್ಲಾಸೆನ್ 69 ರನ್ ಚಚ್ಚಿದರು. ನಿತೀಶ್ ಕುಮಾರ್ ಔಟಾಗದೇ 29 ರನ್ ಗಳಿಸಿದರು.ಹೈದರಾಬಾದ್ ನೀಡಿದ 236 ರನ್ ಗುರಿ ಬೆನ್ನತ್ತಿದ ಪಂಜಾಬ್ ಆರಂಭದಲ್ಲೇ ಎಡವಿತು. ತಂಡದ ಮೊತ್ತ ಕೇವಲ 23 ರನ್ ಇರುವಾಗಲೇ ಪ್ರಿಯಾಂಶ್ ಆರ್ಯ, ಪ್ರಭಸಿಮ್ರಾನ್ ಸಿಂಗ್, ಶ್ರೇಯಸ್ ಅಯ್ಯರ್ ವಿಕೆಟ್ ಒಪ್ಪಿಸಿ ಹೊರನಡೆದಿದ್ದರು. ಈ ವೇಳೆ ಕೂಪರ್ ಕೊನೋಲಿ 59 ಬಾಲ್‌ಗೆ ಶತಕ ಸಿಡಿಸಿ (107 ರನ್, 8 ಸಿಕ್ಸರ್, 7 ಫೋರ್) ವ್ಯರ್ಥ ಏಕಾಂಗಿ ಹೋರಾಟ ನಡೆಸಿದರು. ಮಾರ್ಕಸ್ ಸ್ಟೊಯಿನಿಸ್ 28, ಸೂರ್ಯಾಂಶ್ ಶೆಡ್ಜ್ 25 ರನ್, ಮಾರ್ಕೊ ಜಾನ್ಸೆನ್ 19 ರನ್ ಗಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು